Sunday, 14th August 2022

ಕೋವಿಡ್‌ ಕಾಲದಲ್ಲಿ ಕರಕುಶಲಕರ್ಮಿಗಳಿಗೆ ಮಾರುಕಟ್ಟೆ ಬೇಕು: ಡಾ.ಬಿ.ಎಲ್.ಶಂಕರ್‌

ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ದೀಪಾವಳಿ ದೀಪಗಳ ವಿಶೇಷ ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಚಾಲನೆ

•ಕೋವಿಡ್‌ ನಂತರ ಕರಕುಶಲಕರ್ಮಿಗಳ ಆರ್ಥಿಕತೆ ಸುಧಾರಣೆಯ ಉದ್ದೇಶ
•ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳ ಅಳವಡಿಕೆ
•ಅಕ್ಟೋಬರ್‌ 30 ರಿಂದ ನವೆಂಬರ್‌ 8 ರ ವರೆಗೆ ಬೆಳಿಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ

ಬೆಂಗಳೂರು: ಕೋವಿಡ್‌ ಸಂಕಷ್ಟದ ಕಾಲದಲ್ಲಿ ತೀವ್ರ ತೊಂದರೆಗೆ ಈಡಾಗಿರುವ ದೇಶದ ಕರಕುಶಲ ಕರ್ಮಿಗಳು ತಮ್ಮ ಉತ್ಪನ್ನ ಗಳನ್ನು ಮಾರಾಟ ಮಾಡಲು ಉತ್ತಮ ಮಾರುಕಟ್ಟೆಯ ಅಗತ್ಯವಿದೆ. ಈ ನಿಟ್ಟಿನಲ್ಲಿ ಇಂದಿನಿಂದ 10 ದಿನಗಳ ಕಾಲ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಪ್ರಾರಂಭಿಸಲಾಗಿರುವ ದೀಪಾವಳಿ ದೀಪಗಳ ವಿಶೇಷ ಪ್ರದರ್ಶನ ಹಾಗೂ ಮಾರಾಟ ಮೇಳ ಯಶಸ್ವಿಯಾಗಲಿದೆ ಎಂದು ಎಂದು ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾದ ಡಾ ಬಿ.ಎಲ್‌ ಶಂಕರ್‌ ಹೇಳಿದರು.

ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಅ.30 ರಿಂದ ನವೆಂಬರ್‌ 8 ರ ವರಗೆ ಆಯೋಜಿಸಲಾಗಿರುವ ಬೆಂಗಳೂರು ಉತ್ಸವ – ದೀಪಾವಳಿ ದೀಪಗಳ ವಿಶೇಷ ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ನಟಿ ಭವ್ಯ ಹಾಗೂ ಶರಣ್ಯ ಶೆಟ್ಟಿ ಅವರೊಂದಿಗೆ ಚಾಲನೆ ನೀಡಿ ಮಾತನಾಡಿದರು. ಕೋವಿಡ್‌ ಸಂಕಷ್ಟ ಕಾಲದಲ್ಲಿ ಎಲ್ಲಾ ಕ್ಷೇತ್ರಗಳಿಗೂ ಬಹಳ ತೊಂದರೆ ಆಗಿದೆ. ಅದರಲ್ಲೂ ತಮ್ಮ ಕರಕುಶಲ ವಸ್ತುಗಳನ್ನು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದ ಕರಕುಶಲಕರ್ಮಿಗಳಿಗೆ ತೀವ್ರ ತೊಂದರೆ ಉಂಟಾಗಿದೆ. ಇಂತ ವರಿಗೆ ಉತ್ತಮ ಮಾರುಕಟ್ಟೆಯ ವೇದಿಕೆ ಒದಗಿಸುವುದು ಅವಶ್ಯಕವಾಗಿದೆ ಎಂದು ಹೇಳಿದರು. ಈ ನಿಟ್ಟಿನಲ್ಲಿ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಪ್ರಾರಂಭವಾಗಿರುವ ಈ ವಿಶೇಷ ಮಾರಾಟ ಮೇಳ ಯಶಸ್ವಿಯಾಗಲಿದೆ ಎಂದರು.

ನಟಿ ಭವ್ಯ ಮಾತನಾಡಿ, ದೀಪಗಳ ಹಬ್ಬ ದೀಪಾವಳಿ. ದೇಶದ ಎಲ್ಲಾ ಭಾಗಗಳಲ್ಲೂ ಆಚರಿಸಲ್ಪಡುವ ಈ ಹಬ್ಬಕ್ಕೆ ಭಾರತೀಯರ ಜೀವನದಲ್ಲಿ ಬಹಳ ಮಹತ್ವಪೂರ್ಣವಾದ ಸ್ಥಾನವಿದೆ. ಅದರಲ್ಲೂ ಅಂಧಕಾರವನ್ನು ಹೋಗಲಾಡಿಸುವ ದೀಪಗಳಿಗೆ ಅವು ಗಳದೇ ಆದ ವೈಶಿಷ್ಟ್ಯತೆ ಇದೆ. ಈ ಬಾರಿಯ ಈ ಉತ್ಸವದಲ್ಲಿ ದೀಪಗಳ ಪ್ರಮುಖ ಆಕರ್ಷಣೆಯಾಗಿವೆ. ವೈವಿಧ್ಯಮಯ ಮಣ್ಣಿನ ದೀಪಗಳೂ, ಲೋಹದ ದೀಪಗಳು, ತರೇ ವಾರಿ ಲೈಟಿಂಗ್‌ ಆಯ್ಕೆಗಳ ಶ್ರೇಣಿ ಇಲ್ಲಿದೆ. ದೇಶದ ಎಲ್ಲಾ ಭಾಗಗಳಿಂದ ಆಗಮಿಸಿದ ಕರಕುಶಲಕಾರರು ತಯಾರಿಸಿದ ವಿಭಿನ್ನ ರೀತಿಯ ದೀಪಗಳ ಪ್ರದರ್ಶನವಿದೆ. ಈ ಪ್ರದರ್ಶನ ಹಾಗೂ ಮಾರಾಟ ಮೇಳದ ಪ್ರಮುಖ ಆಕರ್ಷಣೆ ತರೇವಾರಿ ದೀಪಗಳು. ಈ ಬಾರಿ ಒಂದೇ ವೇದಿಕೆಯ ಅಡಿಯಲ್ಲಿ ಎಲ್ಲಾ ರೀತಿಯ ಹಾಗೂ ವಿಭಿನ್ನ ದೀಪಗಳನ್ನು ಖರೀದಿಸಬಹುದಾಗಿದೆ. ಇದರ ಜೊತೆಯಲ್ಲಿಯೇ ಹಬ್ಬಕ್ಕೆ ಬೇಕಾಗಿರುವ ಎಲ್ಲಾ ರೀತಿಯ ಸಾಮಗ್ರಿಗಳನ್ನು ಇಲ್ಲಿ ಕೊಳ್ಳಬಹುದಾ ಗಿರುವುದು ಸಂತಸದ ವಿಷಯವಾಗಿದೆ ಎಂದು ಹೇಳಿದರು.

ಸರಿಯಾದ ಮಾರುಕಟ್ಟೆ ಇಲ್ಲದೆ ತೊಂದರೆಗೆ ಸಿಲುಕಿರುವ ಕುಶಲಕರ್ಮಿಗಳಿಗೆ ಉತ್ತಮ ವೇದಿಕೆಯನ್ನು ಒದಗಿಸುವ ಉದ್ದೇಶ ದಿಂದ ಕರ್ನಾಟಕ ಚಿತ್ರಕಲಾ ಪರಿಷತ್‌ ಆವರಣದಲ್ಲಿ ಅಕ್ಟೋಬರ್‌ 30 ರಿಂದ ನವೆಂಬರ್‌ 8 ರ ವರೆಗೆ ಬೆಳಿಗ್ಗೆ 11 ರಿಂದ ಸಂಜೆ ೭ ಗಂಟೆಯವರೆಗೆ ಗ್ರಾಂಡ್‌ ಫ್ಲಿಯಾ ಮಾರ್ಕೇಟ್‌ ದೀಪಾವಳಿ ವಿಶೇಷ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಆಯೋಜಿಸಿದೆ. ಕೋವಿಡ್‌ ಹರಡದಂತೆ ಎಲ್ಲಾ ರೀತಿಯ ಮುನ್ನೆಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪ್ರವೇಶ ಉಚಿತ ವಾಗಿದೆ.

ಈ ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯು ತ್ತವೆ. ಮನೆಯನ್ನು ಅಲಂಕಾರ ಮಾಡುವ ಉತ್ಪನ್ನಗಳು, ಹ್ಯಾಂಡ್‍ಲೂಂಗಳು, ಕರಕುಶಲ ವಸ್ತುಗಳು, ಬಟ್ಟೆ, ಮರದ ಆಟಿಕೆಗಳು, ಹೆಂಗಳೆಯರ ಆಕರ್ಷಣೆಗೆಂದು ಆಭರಣಗಳು, ಬೆಡ್ ಲೈನೆನ್, ಕಲಾಕೃತಿಗಳು, ಪೀಠೋಪಕರಣಗಳು, ಮ್ಯಾಟ್‍ಗಳು, ಪಿಂಗಾಣಿ ವಸ್ತುಗಳು ಸೇರಿದಂತೆ ನೂರಾರು ಬಗೆಯ ಉತ್ಪನ್ನಗಳು ಈ ಪ್ರದರ್ಶನದಲ್ಲಿರಲಿವೆ.

ನಟಿ ಶರಣ್ಯ, ಚಿತ್ರಕಲಾ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಕೆ ಎಸ್‌ ಅಪ್ಪಾಜಯ್ಯ, ಗ್ರಾಂಡ್‌ ಫ್ಲಿಯಾ ಮಾರುಕಟ್ಟೆಯ ಅಫ್ತಾಬ್‌ ಉಪಸ್ಥಿತರಿದ್ದರು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 96118 35597 / 6364 685 716.