Thursday, 16th September 2021

‘ಶಾ’ ಪ್ರಚಾರ ಮೊಟಕು, ದೆಹಲಿಗೆ ದೌಡು

ನವದೆಹಲಿ : ಗೃಹ ಸಚಿವ ಅಮಿತ್ ಶಾ ಅವರು ಅಸ್ಸಾಂ ವಿಧಾನಸಭಾ ಚುನಾವಣೆ ಪ್ರಚಾರ ಮೊಟಕುಗೊಳಿಸಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಛತ್ತೀಸ್ ಗಢದ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಸೈನಿಕರ ಸಂಖ್ಯೆ 24 ಕ್ಕೇರಿದೆ. ಈ ಬೆಳವಣಿಗೆಯ ಬೆನ್ನಲ್ಲೇ ರಕ್ಷಣಾ ಇಲಾಖೆಯ ಉನ್ನತ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ.

ನಕ್ಸಲರ ಪತ್ತೆ ಕಾರ್ಯ ನಡೆಯುತ್ತಿದೆ. ನಮ್ಮ ಯೋಧರು ಪ್ರಾಣ ಕಳೆದುಕೊಂಡಿದ್ದು, ಆಪ್ತರನ್ನು ಕಳೆದುಕೊಂಡಿರುವ ಕುಟುಂಬ ಗಳೊಂದಿಗೆ ನಾವು ನಿಲ್ಲಬೇಕಿದ್ದು, ಅವರ ತ್ಯಾಗ ವ್ಯರ್ಥ ಆಗಲು ಬಿಡುವುದಿಲ್ಲ ಎಂದು ಶಾ ಹೇಳಿದ್ದಾರೆ.

ಕಳೆದ ವರ್ಷ ಮಾರ್ಚ್ 21ರಂದು ಇದೇ ರೀತಿಯ ಘಟನೆ ನಡೆದಿದ್ದು, ಸುಕ್ಮಾ ಜಿಲ್ಲೆಯಲ್ಲಿ ಮಾವೋವಾದಿ ದಾಳಿಯಲ್ಲಿ ಡಿಆರ್ ಜಿಯ 12 ಮಂದಿ ಸೇರಿದಂತೆ 17 ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದರು.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily

Leave a Reply

Your email address will not be published. Required fields are marked *