Monday, 15th August 2022

ಸೋನಿಯಾಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ನವದೆಹಲಿ: ಕೋವಿಡ್-19 ಸೋಂಕಿನಿಂದ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾ ಗಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ವೈದ್ಯರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಿದ್ದಾರೆ.

ಕೋವಿಡ್ ಸೋಂಕಿನ ನಂತರ ಮೂಗಿನಲ್ಲಿ ರಕ್ತಸ್ರಾವವಾದ ಹಿನ್ನೆಲೆಯಲ್ಲಿ ಸೋನಿಯಾ ಜೂ.12ರಂದು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾದರು.

ದಾಖಲಾತಿ ಸಂದರ್ಭದಲ್ಲಿ ಅವರಲ್ಲಿ ಲೋವರ್ ರೆಸ್ಪಿರೇಟರಿ ಟ್ರ್ಯಾಕ್ಟ್‌ನಲ್ಲಿ ಶಿಲೀಂದ್ರ ಸೋಂಕು (ಶ್ವಾಸಕೋಶ ಸೋಂಕು) ಕೂಡ ಪತ್ತೆಯಾಗಿದೆ. ತೀವ್ರ ನಿಗಾದಲ್ಲಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಪಕ್ಷದ ಹೇಳಿಕೆ ತಿಳಿಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೂ.23ರಂದು ಜಾರಿ ನಿರ್ದೇಶನಾಲಯ ಸೋನಿಯಾ ಗಾಂಧಿ ಅವರಿಗೆ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿದೆ. ಅವರ ಪುತ್ರ ರಾಹುಲ್ ಗಾಂಧಿ ಅವರನ್ನು ಈಗಾಗಲೇ ತನಿಖಾ ಸಂಸ್ಥೆ ವಿಚಾರಣೆ ನಡೆಸುತ್ತಿದ್ದು, ಸೋಮವಾರ ಇಡಿ ಮುಂದೆ ಮುಂದಿನ ವಿಚಾರಣೆ ನಿಗದಿಯಾಗಿದೆ.