ವಿರಾಟ್ ಕೊಹ್ಲಿ ಸ್ಥಾನಕ್ಕೆ ಸೂಕ್ತ ಆಟಗಾರನನ್ನು ಆರಿಸಿದ ಚೋಪ್ರಾ!
ಭಾರತ ಹಾಗೂ ಅಫ್ಘಾನಿಸ್ತಾನ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯ ಆರಂಭಕ್ಕೂ ಮುನ್ನ ವಿರಾಟ್ ಕೊಹ್ಲಿ ಅವರು ಗಾಯದ ಕಾರಣ ಹೊರ ನಡೆದಿದ್ದರು. ಅವರ ಸ್ಥಾನಕ್ಕೆ ಯಶಸ್ವಿ ಜೈಸ್ವಾಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು. ಆದರೆ, ಭಾರತದ ಪ್ಲೇಯಿಂಗ್ XIನಲ್ಲಿ ಕೊಹ್ಲಿಯ ಮೂರನೇ ಕ್ರಮಾಂಕದಲ್ಲಿ ಯಾರನ್ನು ಆಡಿಸಬೇಕೆಂದು ಮಾಜಿ ಟೆಸ್ಟ್ ಆರಂಭಿಕ ಆಕಾಶ್ ಚೋಪ್ರಾ ಆರಿಸಿದ್ದಾರೆ.