Tuesday, 9th August 2022

ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಇಂದಿನಿಂದ ಆರಂಭ

ಚಿಕ್ಕಬಳ್ಳಾಪುರ : ಬೆಂಗಳೂರು ನಗರದ ಕಂಠೀರವ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಮೇ 30, 31 ಹಾಗೂ ಜೂನ್ 1 ರಂದು ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಸುಮಾರು ಹತ್ತು ಸಾವಿರಕ್ಕೂ ಹೆಚ್ಚಿನ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದು ಸಂಘದ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರಾದ ಜಿ.ಹರೀಶ್ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮೇ 30ರಂದು ಕ್ರೀಡಾಕೂಟ ಉದ್ಘಾಟಿಸ ಲಿದ್ದು, ಸಚಿವ ಸಂಪುಟದ ಹಲವು ಸಚಿವರು, ಗಣ್ಯರು, ರಾಜ್ಯಾಧ್ಯಕ್ಷರಾದ ಶ್ರೀ.ಷಡಾಕ್ಷರಿ, ವಿವಿಧ ಜಿಲ್ಲೆಗಳ ಸರ್ಕಾರಿ ನೌಕರರ ಸಂಘಗಳ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ಬೆಂಗಳೂರಿನ ರಾಜ್ಯ ಪರಿಷತ್‌ ಸದಸ್ಯರು, ತಾಲ್ಲೂಕುಗಳ ಅಧ್ಯಕ್ಷರು ಮತ್ತು ಪದಾಧಿ ಕಾರಿಗಳು, ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳು, ಸರ್ಕಾರಿ ನೌಕರರು ಭಾಗವಹಿಸಲಿದ್ದಾರೆ.

ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳಿಗೆ ಉತ್ತಮ ಗುಣಮಟ್ಟದ ಟ್ರಾಕ್ ಶೂಟ್ ಮತ್ತು ಕ್ಯಾಪ್ ವಿತರಿಸ ಲಾಗುವುದು. ಎಲ್ಲಾ ಕ್ರೀಡಾಪಟುಗಳಿಗೂ ಮೂರು ದಿನಗಳ ಕಾಲ ಶುಚಿ-ರುಚಿಯಾದ ಊಟೋಪಹಾರ ಕಲ್ಪಿಸಲಾಗುವುದು.

ರಾಜ್ಯ ಮಟ್ಟದ ಕ್ರೀಡೆಗಳಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ವಿಶೇಷ ನೆನಪಿನ ಕಾಣಿಕೆ ನೀಡಲಾಗುವುದು. ಅಖಿಲ ಭಾರತ ನಾಗರೀಕ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳನ್ನು ಅಭಿನಂದಿಸ ಲಾಗುವುದು.