ಟ್ರಿನಿಡಾಡ್: ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಇದೀಗ 5 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಕಣಕ್ಕಿಳಿಯಲು ಸಜ್ಜಾಗಿವೆ.
ಟಿ ಟ್ವೆಂಟಿ ಸರಣಿಯ ಪ್ರಥಮ ಪಂದ್ಯ ಶುಕ್ರವಾರ ಟರೌಬಾದ ಬ್ರಿಯಾನ್ ಲಾರಾ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಪಂದ್ಯ ರಾತ್ರಿ 8 ಗಂಟೆಗೆ ಆರಂಭಗೊಳ್ಳಲಿದೆ. ಇತ್ತಂಡಗಳ ನಡುವೆ ನಡೆದಿದ್ದ ಏಕದಿನ ಸರಣಿಯ ಎಲ್ಲಾ ಪಂದ್ಯಗಳಲ್ಲಿಯೂ ಗೆದ್ದ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ತಂಡಕ್ಕೆ ಅವರ ತವರು ನೆಲದಲ್ಲಿಯೇ ವೈಟ್ ವಾಷ್ ಮುಖಭಂಗ ಮಾಡಿದ್ದು, ಇದೀಗ ಟಿ ಟ್ವೆಂಟಿ ಸರಣಿಯನ್ನು ಕೈವಶ ಮಾಡಿಕೊಳ್ಳುವತ್ತ ಕಣ್ಣಿಟ್ಟಿದೆ.
ರೋಹಿತ್ ಶರ್ಮಾ ವಿಂಡೀಸ್ ವಿರುದ್ಧದ ಟಿ ಟ್ವೆಂಟಿ ಸರಣಿಗೆ ಮರಳಿದ್ದು ನಾಯಕನಾಗಿ ತಂಡವನ್ನು ಮುನ್ನೆಡೆಸಲಿದ್ದಾರೆ.
ವೆಸ್ಟ್ ಇಂಡೀಸ್ ತನ್ನ 16 ಆಟಗಾರರ ತಂಡವನ್ನು ಪ್ರಕಟಿಸಿದ್ದು, ಏಕದಿನ ಸರಣಿಯಲ್ಲಿ ತಂಡವನ್ನು ಮುನ್ನಡೆಸಿದ್ದ ನಿಕೋಲಸ್ ಅವರೇ ತಂಡವನ್ನು ನಾಯಕನಾಗಿ ಮುನ್ನಡೆಸಲಿದ್ದಾರೆ.
ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ನಂತರ ಕಣಕ್ಕಿಳಿಯದೇ ಇದ್ದ ಶಿಮ್ರಾನ್ ಹೆಟ್ಮಾಯೆರ್ ಇದೀಗ ಫಿಟ್ ಆಗಿದ್ದು ತಂಡಕ್ಕೆ ಮರಳಿದ್ದಾರೆ.
ಒಟ್ಟು 1494 ಬೌಂಡರಿಗಳನ್ನು ಬಾರಿಸಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಈ ಪಂದ್ಯದಲ್ಲಿ 6 ಬೌಂಡರಿ ಬಾರಿಸಿದರೆ 1500 ಬೌಂಡರಿ ಬಾರಿಸಿದ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.
ಟಿ ಟ್ವೆಂಟಿ ಕ್ರಿಕೆಟ್ ಮಾದರಿಯಲ್ಲಿ 94 ಬೌಂಡರಿಗಳನ್ನು ಬಾರಿಸಿರುವ ವೆಸ್ಟ್ ಇಂಡೀಸ್ ತಂಡದ ನಾಯಕ ನಿಕೋಲಸ್ ಪೂರನ್ ಈ ಪಂದ್ಯದಲ್ಲಿ 6 ಬೌಂಡರಿ ಬಾರಿಸಿದರೆ 100 ಬೌಂಡರಿ ಬಾರಿಸಿದ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.
ಒಟ್ಟು 49 ಕ್ಯಾಚ್ ಪಡೆದಿರುವ ವೆಸ್ಟ್ ಇಂಡೀಸ್ ತಂಡದ ನಾಯಕ ನಿಕೋಲಸ್ ಪೂರನ್ ಈ ಪಂದ್ಯದಲ್ಲಿ 1 ಕ್ಯಾಚ್ ಪಡೆದರೆ 50 ಕ್ಯಾಚ್ ಪಡೆದ ಮೈಲಿಗಲ್ಲನ್ನು ಮುಟ್ಟಲಿದ್ದಾರೆ. ಒಟ್ಟು 49 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಅಖೆಲ್ ಹೊಸೈನ್ ಈ ಪಂದ್ಯದಲ್ಲಿ ಕಣಕ್ಕಿಳಿದರೆ 50 ಅಂತರ ರಾಷ್ಟ್ರೀಯ ಪಂದ್ಯಗಳಲ್ಲಿ ಕಣಕ್ಕಿಳಿದ ಮೈಲಿಗಲ್ಲನ್ನು ಮುಟ್ಟಲಿದ್ದಾರೆ. ಒಟ್ಟು 476 ರನ್ ಬಾರಿಸಿರುವ ಬ್ರೆಂಡನ್ ಕಿಂಗ್ ಈ ಪಂದ್ಯದಲ್ಲಿ 24 ರನ್ ಬಾರಿಸಿದರೆ 500 ಅಂತರರಾಷ್ಟ್ರೀಯ ಟಿ ಟ್ವೆಂಟಿ ರನ್ ಮೈಲಿಗಲ್ಲನ್ನು ಮುಟ್ಟಲಿದ್ದಾರೆ.