ಸಿಡ್ನಿ: ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್‌ನಲ್ಲಿ(Women's ODI World Cup) ಭಾಗವಹಿಸುತ್ತಿರುವ ಆಸ್ಟ್ರೇಲಿಯಾದ ಇಬ್ಬರು ಮಹಿಳಾ ಕ್ರಿಕೆಟಿಗರನ್ನು ಮಧ್ಯಪ್ರದೇಶದ ಇಂದೋರ್‌ನಲ್ಲಿ ಮೋಟಾರ್‌ಸೈಕಲ್‌ನಲ್ಲಿ ಬಂದ ವ್ಯಕ್ತಿಯೊಬ್ಬ ಹಿಂಬಾಲಿಸಿ ಲೈಂಗಿಕ ಕಿರುಕುಳ(Australian cricketers stalked) ನೀಡಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಗುರುವಾರ ಬೆಳಿಗ್ಗೆ ಖಜ್ರಾನಾ ಪ್ರದೇಶದಲ್ಲಿ ತಂಡವು ರಾಡಿಸನ್ ಬ್ಲೂ ಹೋಟೆಲ್‌ನಿಂದ ಕೆಫೆಯೊಂದಕ್ಕೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದ್ದು, ಆತನನ್ನು ಅಕೀಲ್ ಖಾನ್ ಎಂದು ಗುರುತಿಸಲಾಗಿದೆ. ಈ ಬಗ್ಗೆ ಸಬ್-ಇನ್ಸ್‌ಪೆಕ್ಟರ್ ನಿಧಿ ರಘುವಂಶಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಇಬ್ಬರು ಕ್ರಿಕೆಟಿಗರು ತಮ್ಮ ಹೋಟೆಲ್‌ನಿಂದ ಹೊರಬಂದು ಕೆಫೆಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಮೋಟಾರ್ ಸೈಕಲ್‌ನಲ್ಲಿ ಬಂದ ವ್ಯಕ್ತಿ ಅವರನ್ನು ಹಿಂಬಾಲಿಸಲು ಪ್ರಾರಂಭಿಸಿದರು. ಮತ್ತು ಒಬ್ಬರನ್ನು ಅನುಚಿತವಾಗಿ ಮುಟ್ಟಿ ಪರಾರಿಯಾಗಿದ್ದ.
ಘಟನೆ ಬಳಿಕ ಈ ಇಬ್ಬರು ಆಟಗಾರ್ತಿಯರು ತಮ್ಮ ತಂಡದ ಭದ್ರತಾ ಅಧಿಕಾರಿ ಡ್ಯಾನಿ ಸಿಮನ್ಸ್ ಅವರನ್ನು ಸಂಪರ್ಕಿಸಿ ಸ್ಥಳೀಯ ಭದ್ರತಾ ಸಂಪರ್ಕ ಅಧಿಕಾರಿಗಳೊಂದಿಗೆ ಸಹಾಯ ಕೇಳಿದರು. ಮಾಹಿತಿ ಪಡೆದ ನಂತರ, ಸಹಾಯಕ ಪೊಲೀಸ್ ಆಯುಕ್ತ ಹಿಮಾನಿ ಮಿಶ್ರಾ ಇಬ್ಬರು ಆಟಗಾರರನ್ನು ಭೇಟಿಯಾಗಿ, ಅವರ ಹೇಳಿಕೆಗಳನ್ನು ದಾಖಲಿಸಿಕೊಂಡರು ಮತ್ತು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 74 (ಮಹಿಳೆಯ ನಮ್ರತೆಯನ್ನು ಕೆರಳಿಸಲು ಕ್ರಿಮಿನಲ್ ಬಲಪ್ರಯೋಗ) ಮತ್ತು 78 (ಹಿಂಬಾಲಿಸುವುದು) ಅಡಿಯಲ್ಲಿ ಎಂಐಜಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ IND vs AUS 3rd ODI: ರಾಣಾ ಬೌಲಿಂಗ್ ದಾಳಿಗೆ ತತ್ತರಿಸಿದ ಆಸೀಸ್; 236ರನ್‌ಗೆ ಆಲೌಟ್
"ಪ್ರತ್ಯಕ್ಷದರ್ಶಿಯೊಬ್ಬರು ಶಂಕಿತನ ಬೈಕ್ ನಂಬರ್ ಗಮನಿಸಿದರು. ಅವರ ಹೇಳಿಕೆ ಆಧಾರದ ಮೇಲೆ ಆರೋಪಿ ಅಕೀಲ್ ಖಾನ್ ನನ್ನು ಬಂಧಿಸಲಾಯಿತು" ಎಂದು ಅಧಿಕಾರಿ ಹೇಳಿದರು. "ಖಾನ್ ವಿರುದ್ಧ ಈ ಹಿಂದೆಯೂ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ" ಎಂದು ಅಧಿಕಾರಿ ರಘುವಂಶಿ ಹೇಳಿದರು.