ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ವೆಸ್ಟ್ ಇಂಡೀಸ್ ವಿರುದ್ಧದ 3ನೇ ಏಕದಿನ ಪಂದ್ಯ; ನಾಯಕ ಗಿಲ್‌ ಸೇರಿ ಕೆಲವರಿಗೆ ವಿಶ್ರಾಂತಿ ಸಾಧ್ಯತೆ

India vs West Indies 3rd ODI: ಮೊದಲ ಪಂದ್ಯದಲ್ಲಿ ಶತಕ ಮತ್ತು ಎರಡನೇ ಪಂದ್ಯದಲ್ಲಿ ದ್ವಿಶತಕ ಬಾರಿಸಿದ ನಾಯಕ ಶುಭಮನ್‌ ಗಿಲ್‌ ಅವರಿಗೆ ಅಂತಿಮ ಪಂದ್ಯದಲ್ಲಿ ಟೀಮ್‌ ಮ್ಯಾನೇಜ್‌ಮೆಂಟ್‌ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಅವರಿಗೆ ವಿಶ್ರಾಂತಿ ನೀಡಿದ್ದೇ ಆದಲ್ಲಿ ಅವರ ಸ್ಥಾನದಲ್ಲಿ ಎಡಗೈ ಬ್ಯಾಟರ್‌ ಯಶಸ್ವಿ ಜೈಸ್ವಾಲ್‌ ಅವರು ರೋಹಿತ್‌ ಜತೆ ಇನಿಂಗ್ಸ್‌ ಆರಂಭಿಸಬಹುದು.

shubman gill

ಚಂಡೀಗಢ, ಅ.2: ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮೊದಲ ಮತ್ತು ಎರಡನೇ ಪಂದ್ಯಗಳನ್ನು ಗೆದ್ದು 2-0 ಮುನ್ನಡೆ ಸಾಧಿಸಿರುವ ಭಾರತ ತಂಡ ಮೂರನೇ ಮತ್ತು ಅಂತಿಮ ಪಂದ್ಯವನ್ನು ಮುಲ್ಲನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಶನಿವಾರ ಆಡಲಿದೆ. ಈ ಪಂದ್ಯದಲ್ಲಿ ಭಾರತ ತನ್ನ ಆಡುವ ಬಳಗದಲ್ಲಿ ಕನಿಷ್ಠ ಮೂರು ಬದಲಾವಣೆ ಮಾಡುವ ಸಾಧ್ಯತೆ ಗೋಚರಿಸಿದೆ.

ಸೆಪ್ಟೆಂಬರ್ 27 ರಂದು ತಿರುವನಂತಪುರಂನಲ್ಲಿ ನಡೆದಿದ್ದ ಮೊದಲ ಏಕದಿನ ಪಂದ್ಯದಲ್ಲಿ ಆಡಿದ್ದ ನಿತೀಶ್ ಕುಮಾರ್ ರೆಡ್ಡಿ ಅವರನ್ನು ದ್ವಿತೀಯ ಪಂದ್ಯಕ್ಕೆ ಕೈಬಿಡಲಾಗಿತ್ತು. ಮೂರನೇ ಪಂದ್ಯದಲ್ಲಿ ಅವರಿಗೆ ಮತ್ತೆ ಅವಕಾಶ ನೀಡುವ ಸಾಧ್ಯತೆಯಿದೆ.

ಮೊದಲ ಪಂದ್ಯದಲ್ಲಿ ಶತಕ ಮತ್ತು ಎರಡನೇ ಪಂದ್ಯದಲ್ಲಿ ದ್ವಿಶತಕ ಬಾರಿಸಿದ ನಾಯಕ ಶುಭಮನ್‌ ಗಿಲ್‌ ಅವರಿಗೆ ಅಂತಿಮ ಪಂದ್ಯದಲ್ಲಿ ಟೀಮ್‌ ಮ್ಯಾನೇಜ್‌ಮೆಂಟ್‌ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಅವರಿಗೆ ವಿಶ್ರಾಂತಿ ನೀಡಿದ್ದೇ ಆದಲ್ಲಿ ಅವರ ಸ್ಥಾನದಲ್ಲಿ ಎಡಗೈ ಬ್ಯಾಟರ್‌ ಯಶಸ್ವಿ ಜೈಸ್ವಾಲ್‌ ಅವರು ರೋಹಿತ್‌ ಜತೆ ಇನಿಂಗ್ಸ್‌ ಆರಂಭಿಸಬಹುದು.

ಏಷ್ಯನ್ ಗೇಮ್ಸ್ ಬಾಕ್ಸಿಂಗ್‌: ಜನ್ಮದಿನದಂದೇ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ಲವ್ಲಿನಾ ಬೋರ್ಗೊಹೈನ್

ಸರಣಿಯ ಮೊದಲ ಎರಡು ಪಂದ್ಯಗಳನ್ನು ಆಡಿದ ಪ್ರಸಿದ್ಧ್ ಕೃಷ್ಣ ಅವರು ಮಂಡಿರಜ್ಜು ಗಾಯದಿಂದ ಅಂತಿಮ ಮುಖಾಮುಖಿಯಿಂದ ಹೊರಗುಳಿದಿದ್ದಾರೆ ಮತ್ತು ಅವರ ಬದಲಿಗೆ ಅನ್ಶುಲ್ ಕಾಂಬೋಜ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಹೀಗಿದ್ದರೂ ಅವರಿಗೆ ಆಡುವ ಬಳಗದಲ್ಲಿ ಅವಕಾಶ ಸಿಗುವುದು ಅನುಮಾನ. ಹಿರಿಯ ವೇಗಿ ಮೊಹಮ್ಮದ್‌ ಸಿರಾಜ್‌ಗೆ ಅವಕಾಶ ಸಿಗಬಹುದು.

ಭಾರತ ತಂಡ

ಶುಭಮನ್‌ ಗಿಲ್‌ (ನಾಯಕ), ವಿರಾಟ್‌ ಕೊಹ್ಲಿ, ಋತುರಾಜ್‌ ಗಾಯಕ್ವಾಡ್‌, ಕೆಎಲ್‌ ರಾಹುಲ್‌ (ಉಪ ನಾಯಕ, ವಿಕೆಟ್‌ ಕೀಪರ್‌), ಧ್ರುವ್‌ ಜುರೆಲ್‌ (ವಿಕೆಟ್‌ ಕೀಪರ್‌), ನಿತೀಶ್‌ ಕುಮಾರ್‌ ರೆಡ್ಡಿ, ರವೀಂದ್ರ ಜಡೇಜಾ, ಕುಲ್ದೀಪ್‌ ಯಾದವ್‌, ಅನ್ಶುಲ್ ಕಾಂಬೋಜ್‌, ಗುರ್ನೂರ್‌ ಬ್ರಾರ್‌, ಮೊಹಮ್ಮದ್‌ ಸಿರಾಜ್‌, ಆಕಿಬ್‌ ನಬಿ, ಯಶಸ್ವಿ ಜೈಸ್ವಾಲ್‌, ನಮನ್‌ ಧೀರ್‌.