Friday, 22nd November 2024

ನಾಳೆಯಿಂದ ನಾಲ್ಕನೇ ಟೆಸ್ಟ್ ಪಂದ್ಯ

ಅಹ್ಮದಾಬಾದ್‌: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ನಾಲ್ಕನೇ ಹಾಗೂ ಅಂತಿಮ ಪಂದ್ಯ ಗುರುವಾರದಂದು ಅಹ್ಮದಾಬಾದ್‌ ನಲ್ಲಿ ಆರಂಭವಾಗಲಿದೆ.

ಅಹ್ಮದಾಬಾದ್ ಟೆಸ್ಟ್ ಭಾರತ ತಂಡಕ್ಕೆ ಅತ್ಯಂತ ಮಹತ್ವದ್ದಾಗಿದ್ದು ಗೆದ್ದರೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಸ್ಥಾನ ಪಡೆಯಲು ಸಾಧ್ಯ ವಾಗಲಿದೆ.

ಇಂದೋರ್‌ನಲ್ಲಿ ಟೀಮ್ ಇಂಡಿಯಾ ಬ್ಯಾಟಿಂಗ್‌ನಲ್ಲಿ ಸಂಪೂರ್ಣವಾಗಿ ಎಡವಿತ್ತು. ಆಸ್ಟ್ರೇಲಿಯಾದ ಸ್ಪಿನ್ನರ್‌ಗಳ ದಾಳಿಗೆ ಟೀಮ್ ಇಂಡಿಯಾದ ಪ್ರಮುಖ ಆಟಗಾರರೆಲ್ಲರು ಕೂಡ ಭಾರೀ ವೈಫಲ್ಯ ಕಂಡಿದ್ದಾರೆ. ಅಲ್ಲದೆ ಭಾರತದ ಸ್ಪಿನ್ನರ್‌ಗಳು ಕೂಡ ಆಸ್ಟ್ರೇಲಿಯಾದ ಸ್ಪಿನ್ನರ್‌ಗಳಂತೆ ಇಂದೋರ್ ಪಿಚ್‌ನಲ್ಲಿ ಪರಿಣಾಮಕಾರಿ ಎನಿಸಲಿಲ್ಲ. ಹೀಗಾಗಿ ಅಹ್ಮದಾಬಾದ್‌ನಲ್ಲಿ ಭಾರತ ತಂಡದ ಪ್ರದರ್ಶನ ಕುತೂಹಲ ಮೂಡಿಸಿದೆ.

ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ಈ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ. ಮಾ.9ರಂದು ಭಾರ ತೀಯ ಕಾಲಮಾನ ಬೆಳಿಗ್ಗೆ 9:30ಕ್ಕೆ ಆರಂಭವಾಗಲಿದ್ದು 9 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ.

ಸಂಭಾವ್ಯ ಆಡುವ ಬಳಗ

ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ ಮತ್ತು ಉಮೇಶ್ ಯಾದವ್.

ಆಸ್ಟ್ರೇಲಿಯಾ: ಉಸ್ಮಾನ್ ಖವಾಜಾ, ಟ್ರಾವಿಸ್ ಹೆಡ್, ಮಾರ್ನಸ್ ಲ್ಯಾಬುಶೈನ್, ಸ್ಟೀವ್ ಸ್ಮಿತ್ (ನಾಯಕ), ಕ್ಯಾಮರೂನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪೀಟರ್ ಹ್ಯಾಂಡ್ಸ್ಕಾಂಬ್, ಮಿಚೆಲ್ ಸ್ಟಾರ್ಕ್, ಮ್ಯಾಟ್ ಕುನ್ನೇಮನ್, ನಾಥನ್ ಲಿಯಾನ್ ಮತ್ತು ಟಾಡ್ ಮರ್ಫಿ