Amaravati Stadium: ಮೋದಿ ಕ್ರಿಕೆಟ್ ಸ್ಟೇಡಿಯಂ ಮೀರಿಸಲು ಮುಂದಾದ ಆಂಧ್ರ!
ಯೋಜನೆಯ ಅನುಷ್ಠಾನಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಯಿಂದ ಈಗಾಗಲೇ ಹಣಕಾಸಿನ ನೆರವು ಪಡೆಯಲು ಎಸಿಎ ಯೋಜಿಸಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ 2029 ರ ವೇಳೆಗೆ ಈ ಮೈದಾನದಲ್ಲಿ ರಾಷ್ಟ್ರೀಯ ಕ್ರೀಡಾಕೂಟವನ್ನು ಆಯೋಜಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಶಿವನಾಥ್ ಹೇಳಿದರು.
ಅಮರಾವತಿ: ಭಾರತದಲ್ಲಿ ಮತ್ತೊಂದು ವಿಶ್ವದ ಅತೀ ದೊಡ್ಡ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಆಂಧ್ರ ಪ್ರದೇಶ ಕ್ರಿಕೆಟ್ ಮಂಡಳಿ ಮುಂದಡಿ ಇಟ್ಟಿದೆ. ಪ್ರಸ್ತುತ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣವು(Narendra Modi Stadium) ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣ ಎನಿಸಿದೆ. ಇದನ್ನೂ ಮೀರಿಸುವಂತಹ ಸ್ಟೇಡಿಯಂ ನಿರ್ಮಾಣ ಮಾಡಲು ಆಂಧ್ರ ಕ್ರಿಕೆಟ್ ಮಂಡಳಿ(ACA) ಎಲ್ಲ ಸಿದ್ಧತೆಗಳನ್ನು ನಡೆಸಿದೆ ಎಂದು ತಿಳಿದುಬಂದಿದೆ. ಅಮರಾವತಿಯಲ್ಲಿ(Amaravati Stadium) ಈ ಮೈದಾನ ತಲೆ ಎತ್ತಲಿದೆ.
ಅಹಮದಾಬಾದ್‌ನ ಮೋದಿ ಸ್ಟೇಡಿಯಂ 1.32 ಲಕ್ಷ ಆಸನಗಳ ವ್ಯವಸ್ಥೆ ಕಲ್ಪಿಸುವ ಮೂಲಕ ವಿಶ್ವದ ಅತೀ ದೊಡ್ಡ ಕ್ರಿಕೆಟ್ ಸ್ಟೇಡಿಯಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದೀಗ ಆಂಧ್ರ ಕ್ರಿಕೆಟ್ ಮಂಡಳಿ ಅಮರಾವತಿಯಲ್ಲಿ ನಿರ್ಮಿಸಲು ಮುಂದಾದ ಸ್ಟೇಡಿಯಂ ಸುಮಾರು 200 ಎಕ್ರೆ ಪ್ರದೇಶದಲ್ಲಿ ವ್ಯಾಪಿಸಿರುವಂತೆ, 1.50 ಲಕ್ಷ ಪ್ರೇಕ್ಷಕರಿಗೆ ಆಸನ ವ್ಯವಸ್ಥೆ ಇರಲಿದೆ ಎಂದು ಹೇಳಲಾಗುತ್ತಿದೆ. 1.50 ಲಕ್ಷ ಆಸನಗಳಿರುವ ಉತ್ತರ ಕೊರಿಯಾದ ರುಂಗ್ರಾಡೊ ಮೆ ಡೆ ಸ್ಟೇಡಿಯಂ ಜಗತ್ತಿನ ಅತಿ ದೊಡ್ಡ ಮೈದಾನ ಎಂಬ ಖ್ಯಾತಿ ಹೊಂದಿದೆ.
ಈ ಬಗ್ಗೆ ಮಾತನಾಡಿದ ಎಸಿಎ ಅಧ್ಯಕ್ಷ ಕೇಶಿನೇನಿ ಶಿವನಾಥ್, ರಾಜ್ಯದಲ್ಲಿ ಕ್ರಿಕೆಟ್ ಅಭಿವೃದ್ಧಿಗೆ ಈ ಯೋಜನೆ ಮೈಲಿಗಲ್ಲು ಆಗಲಿದೆ. ಈ ಕ್ರೀಡಾಂಗಣದ ಜತೆಗೆ ಆಂಧ್ರಪ್ರದೇಶದ ಉತ್ತರ ಕರಾವಳಿ, ವಿಜಯವಾಡ ಮತ್ತು ರಾಯಲಸೀಮಾದಲ್ಲಿ ಅತ್ಯಾಧುನಿಕ ಕ್ರಿಕೆಟ್ ಅಕಾಡೆಮಿಗಳನ್ನು ಸ್ಥಾಪಿಸಲು ಎಸಿಎ ಯೋಜಿಸಿದೆ ಎಂದು ತಿಳಿಸಿದರು.
ಇದನ್ನೂ ಓದಿ ಚಾಂಪಿಯನ್ಸ್ ಟ್ರೋಫಿಗೆ ಸಿದ್ಧಗೊಳ್ಳದ ಪಾಕ್ ಕ್ರೀಡಾಂಗಣ; ಜ.30 ಅಂತಿಮ ಗಡುವು
ಯೋಜನೆಯ ಅನುಷ್ಠಾನಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಯಿಂದ ಈಗಾಗಲೇ ಹಣಕಾಸಿನ ನೆರವು ಪಡೆಯಲು ಎಸಿಎ ಯೋಜಿಸಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ 2029 ರ ವೇಳೆಗೆ ಈ ಮೈದಾನದಲ್ಲಿ ರಾಷ್ಟ್ರೀಯ ಕ್ರೀಡಾಕೂಟವನ್ನು ಆಯೋಜಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಶಿವನಾಥ್ ಹೇಳಿದರು.
ಮೋದಿ ಸ್ಟೇಡಿಯಂ 64 ಎಕ್ರೆ ಪ್ರದೇಶದಲ್ಲಿ ವ್ಯಾಪಿಸಿದೆ. 76 ಕಾರ್ಪೊರೇಟ್ ಬಾಕ್ಸ್ ಗಳು, ನಾಲ್ಕು ಡ್ರೆಸ್ಸಿಂಗ್ ರೂಮ್‌ಗಳು ಮತ್ತು ಮೂರು ಅಭ್ಯಾಸ ಮೈದಾನಗಳಿವೆ. ಕೆಂಪು ಮತ್ತು ಕಪ್ಪು ಮಣ್ಣು ಬಳಸಿ ಮೂರು ಮಾದರಿಯ ಪಿಚ್‌ಗಳನ್ನು ನಿರ್ಮಿಸಲಾಗಿದೆ. ಅವುಗಳ ಪೈಕಿ ಒಂದನ್ನು ಕಪ್ಪು ಮಣ್ಣಿನಿಂದ, ಒಂದು ಕೆಂಪು ಮಣ್ಣಿನಿಂದ ನಿರ್ಮಿಸಲಾಗಿದೆ. ಎರಡೂ ಮಣ್ಣುಗಳ ಮಿಶ್ರಣದಿಂದ ಮತ್ತೂಂದು ಪಿಚ್ ಒಳಗೊಂಡಿದೆ.