ಅಹ್ಮದಾಬಾದ್: ಭಾರತೀಯ ವಾಯುಪಡೆಯ ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡವು ನ.19 ರಂದು ಇಲ್ಲಿ ನಡೆಯಲಿರುವ ಕ್ರಿಕೆಟ್ ವಿಶ್ವಕಪ್ 2023 ರ ಅಂತಿಮ ಪಂದ್ಯಕ್ಕೆ ಮುಂಚಿತವಾಗಿ ಏರ್ ಶೋ ಪ್ರಸ್ತುತಪಡಿಸಲಿದೆ.
ಮೊಟೆರಾ ಪ್ರದೇಶದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್ ಪಂದ್ಯದ ಮೊದಲ 10 ನಿಮಿಷಗಳ ಕಾಲ ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡವು ಪ್ರೇಕ್ಷಕರನ್ನು ಮೋಡಿ ಮಾಡಲಿದೆ ಎಂದು ರಕ್ಷಣಾ ಇಲಾಖೆಯ ಗುಜರಾತ್ ಸಾರ್ವಜನಿಕ ಸಂಪರ್ಕ ಅಧಿಕಾರಿ (ಪಿಆರ್‌ಒ) ತಿಳಿಸಿದ್ದಾರೆ.
ಏರ್ ಶೋ ಶುಕ್ರವಾರ ಮತ್ತು ಶನಿವಾರ ಅಭ್ಯಾಸ ನಡೆಯಲಿದೆ.
ಬುಧವಾರ ನ್ಯೂಜಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಭಾರತ ಈಗಾಗಲೇ ಏಕದಿನ ವಿಶ್ವಕಪ್ ಫೈನಲ್ ತಲುಪಿದೆ. ಐಎಎಫ್’ನ ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡವು ಸಾಮಾನ್ಯವಾಗಿ ಒಂಬತ್ತು ವಿಮಾನಗಳನ್ನು ಒಳಗೊಂಡಿರುತ್ತದೆ ಮತ್ತು ದೇಶಾದ್ಯಂತ ಹಲವಾರು ಏರ್ ಶೋಗಳನ್ನು ನಡೆಸಿದೆ.
ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ 12 ವರ್ಷಗಳ ನಂತರ ವಿಶ್ವಕಪ್ ಫೈನಲ್ ತಲುಪುವಲ್ಲಿ ಯಶಸ್ವಿಯಾಗಿದೆ.
2011ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಟೀಂ ಇಂಡಿಯಾ ಫೈನಲ್ ಪ್ರವೇಶಿಸಿತ್ತು. ನ.19ರಂದು ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯ ನಡೆಯಲಿದೆ.