Thursday, 12th December 2024

ಭಾರತದ ಪರವಾಗಿ ಹೊಸ ದಾಖಲೆ ಬರೆದ ಶ್ರೇಯಸ್ ಐಯ್ಯರ್

shreyas_Aiyer

ಕಾನ್ಪುರ: ಟೀಮ್ ಇಂಡಿಯಾ ಪರವಾಗಿ ಚೊಚ್ಚಲ ಟೆಸ್ಟ್ ಪಂದ್ಯ ಆಡಲು ಇಳಿದ ಶ್ರೇಯಸ್ ಐಯ್ಯರ್ ಟೀಮ್ ಇಂಡಿಯಾಗೆ ಎರಡು ಇನ್ನಿಂಗ್ಸ್‌ನಲ್ಲಿಯೂ ಆಸರೆಯಾಗಿದ್ದಾರೆ. ಶ್ರೇಯಸ್ ಅಮೋಘ ಆಟದಿಂದಾಗಿ ಭಾರತ ಒಂದು ಹಂತಕ್ಕೆ ಸುಸ್ಥಿತಿಯಲ್ಲಿದೆ.

ಎರಡು ಇನ್ನಿಂಗ್ಸ್‌ನಲ್ಲಿಯೂ ಶ್ರೇಯಸ್ ಐಯ್ಯರ್ ಭಾರತದ ಪರವಾಗಿ ಅತಿ ಹೆಚ್ಚು ರನ್‌ ಗಳಿಸಿದ ಆಟಗಾರನಾಗಿದ್ದಾರೆ.

ಕಾನ್ಪುರದ ಗ್ರೀನ್‌ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಶ್ರೇಯಸ್ ಐಯ್ಯರ್ ಮೊದಲ ಬಾರಿಗೆ ಟೆಸ್ಟ್ ಕ್ರಿಕೆಟ್‌ ನಲ್ಲಿ ಆಡುವ ಅವಕಾಶ ಪಡೆದರು. ಮೊದಲ ಇನ್ನಿಂಗ್ಸ್‌ನಲ್ಲಿ ಭರ್ಜರಿ 105 ರನ್‌ಗಳಿಸಿದ್ದು ಟೀಮ್ ಇಂಡಿಯಾ 345 ರನ್‌ಗಳ ಉತ್ತಮ ಮೊತ್ತ ಪೇರಿಸಲು ಕಾರಣವಾದರು. ಎರಡನೇ ಇನ್ನಿಂಗ್ಸ್‌ನಲ್ಲಿ ಶ್ರೇಯಸ್ ಐಯ್ಯರ್ ಮತ್ತೊಮ್ಮೆ ತಂಡಕ್ಕೆ ಆಸರೆಯಾಗುವ ಮೂಲಕ ತಂಡವನ್ನು ಕುಸಿತದಿಂದ ಮೇಲ ಕ್ಕೆತ್ತಿದ್ದರು.

ಟೆಸ್ಟ್ ಕ್ರಿಕೆಟ್‌ನ ಇತಿಹಾಸದಲ್ಲಿ ಈ ಸಾಧನೆ ಮಾಡಲು ಭಾರತದ ಪರವಾಗಿ ಯಾರೂ ಈವರೆಗೆ ಮಾಡಲು ಸಾಧ್ಯವಾಗಿರಲಿಲ್ಲ. ಈಗ ಶ್ರೇಯಸ್ ಐಯ್ಯರ್ ಭಾರತದ ಪರವಾಗಿ ಹೊಸ ದಾಖಲೆ ಬರೆದಿದ್ದಾರೆ. ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ನಲ್ಲಿ ಒಟ್ಟಾರೆಯಾಗಿ ಈ ಸಾಧನೆ ಮಾಡಿದ 16ನೇ ಕ್ರಿಕೆಟಿಗ ಎನಿಸಿದ್ದಾರೆ.

ಟೀಮ್ ಇಂಡಿಯಾ ಎರಡನೇ ಇನ್ನಿಂಗ್ಸ್‌ನಲ್ಲಿ ಆರಂಭದಲ್ಲಿ ಭಾರೀ ಕುಸಿತಕ್ಕೆ ಒಳಗಾಯಿತು. ತಂಡದ ಮೊತ್ತ 51 ರನ್‌ಗಳಾಗುವಷ್ಟ ರಲ್ಲಿ ಪ್ರಮುಖ ಐದು ವಿಕೆಟ್ ಕಳೆದುಕೊಂಡಿತ್ತು. ನಂತರ ಶ್ರೇಯಸ್ ಐಯ್ಯರ್ ಹಾಗೂ ರವಿಚಂದ್ರನ್ ಅಶ್ವನ್ ಅರ್ಧ ಶತಕದ ಜೊತೆಯಾಟ ನೀಡುವ ಮೂಲಕ ಕುಸಿತದಿಂದ ಒಂದು ಮಟ್ಟಕ್ಕೆ ಪಾರು ಮಾಡುವಲ್ಲಿ ಯಶಸ್ವಿಯಾದರು.

ಎರಡನೇ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಬ್ಯಾಟಿಂಗ್‌ನಲ್ಲಿ ಆರಂಭಿಕ ಕುಸಿತ ಕಂಡಿದ್ದರು ಸದ್ಯಕ್ಕೆ ಉತ್ತಮ ಸ್ಥಿತಿಯಲ್ಲಿದೆ. ಮಧ್ಯಮ ಹಾಗೂ ಕೆಳ ಕ್ರಮಾಂಕದಲ್ಲಿ ಆಟಗಾರರು ನಿರ್ಣಾಯಕ ಪ್ರದರ್ಶನ ನೀಡಿದ್ದಾರೆ.