ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕೆಕೆಆರ್ ತಂಡದೊಳಗಿನ ಅಭ್ಯಾಸ ಪಂದ್ಯದಲ್ಲಿ ಶತಕ ಸಿಡಿಸಿದ ರಘುವಂಶಿ

IPL 2026: ಮಾರ್ಚ್ 29 ರಂದು ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ತನ್ನ ಮೊದಲ ಪಂದ್ಯದಲ್ಲಿ ಕೆಕೆಆರ್ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಆ ಬಳಿಕ ಮುಂಬರುವ ಪಂದ್ಯಗಳಲ್ಲಿ ಸನ್‌ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳನ್ನು ತವರಿನಲ್ಲಿ ಎದುರಿಸಲಿದೆ.

Raghuvanshi smacks century in KKR's intra-squad practice match

ಕೋಲ್ಕತಾ, ಮಾ.21: 19ನೇ ಆವೃತ್ತಿಯ ಐಪಿಎಲ್‌(IPL 2026) ಟೂರ್ನಿ ಮಾ.28 ರಿಂದ ಆರಂಭಗೊಳ್ಳಲಿದೆ. ಇದಕ್ಕಾಗಿ ಬಹುತೇಕ ಎಲ್ಲಾ ತಂಡಗಳು ಈಗಾಗಲೇ ಸಿದ್ಧತೆ ಆರಂಭಿಸಿವೆ. ಕೆಕೆಆರ್‌ ತಂಡದ 21 ವರ್ಷದ ಆಂಗ್ಕ್ರಿಶ್ ರಘುವಂಶಿ(Angkrish Raghuvanshi) ಅಭ್ಯಾಸ ಪಂದ್ಯದಲ್ಲಿ(KKR's intra-squad practice match) ಶತಕ ಸಿಡಿಸಿ ಪಂದ್ಯಾವಳಿ ಆರಂಭಕ್ಕೂ ಮುನ್ನವೇ ಸದ್ದು ಮಾಡಿದ್ದಾರೆ.

ಈಡನ್‌ ಗಾರ್ಡನ್ಸ್‌ನಲ್ಲಿ ನಡೆದ ಕೆಕೆಆರ್‌ ಇಂಟ್ರಾ-ಸ್ಕ್ವಾಡ್ ನಡವಣ ಅಭ್ಯಾಸ ಪಂದ್ಯದಲ್ಲಿ ಬಿರುಸಿನ ಬ್ಯಾಟಿಂಗ್‌ ನಡೆಸಿದ ರಘುವಂಶಿ, 55 ಎಸೆತಗಳಲ್ಲಿ ಶತಕ ಬಾರಿಸಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಬೌಲಿಂಗ್ ವಿಭಾಗದಲ್ಲಿ ಕಾರ್ತಿಕ್ ತ್ಯಾಗಿ ನಾಲ್ಕು ಓವರ್‌ಗಳಲ್ಲಿ 30 ರನ್ ನೀಡಿ ಮೂರು ವಿಕೆಟ್ ಪಡೆದರು. ವೈಭವ್ ಅರೋರಾ ಮತ್ತು ವರುಣ್ ಚಕ್ರವರ್ತಿ ತಲಾ ಎರಡು ವಿಕೆಟ್ ಪಡೆದರು, ಬ್ಲೆಸ್ಸಿಂಗ್ ಮುಜರಬಾನಿ ಮೊದಲ ಇನ್ನಿಂಗ್ಸ್‌ನಲ್ಲಿ ಒಂದು ವಿಕೆಟ್ ಪಡೆದರು.

ಪಂದ್ಯದ ಆರಂಭದಲ್ಲಿ, ಟಿಮ್ ಸೀಫರ್ಟ್ ಮತ್ತು ರಿಂಕು ಸಿಂಗ್ ಮೊದಲ ಇನ್ನಿಂಗ್ಸ್‌ನಲ್ಲಿ ಕ್ರಮವಾಗಿ 47 ಮತ್ತು 40 ರನ್‌ಗಳ ಆಕ್ರಮಣಕಾರಿ ಬ್ಯಾಟಿಂಗ್‌ನೊಂದಿಗೆ ಬೃಹತ್‌ ಮೊತ್ತಕ್ಕೆ ಕಾರಣರಾದರು. ಸಾರ್ಥಕ್ ರಂಜನ್ ಕೇವಲ 16 ಎಸೆತಗಳಲ್ಲಿ 37 ರನ್ ಗಳಿಸುವ ಮೂಲಕ ತಂಡಕ್ಕೆ ಮತ್ತಷ್ಟು ಶಕ್ತಿ ತುಂಬಿದರು.



ರಹಾನೆ ವಿಫಲ

ನಾಯಕ ಅಜಿಂಕ್ಯ ರಹಾನೆ ಮತ್ತು ವೇಗಿ ಉಮ್ರಾನ್ ಮಲಿಕ್ ಈ ಪಂದ್ಯದಲ್ಲಿ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾದರು. ರಹಾನೆ ಅವರು ಎದುರಿಸಿದ ನಾಲ್ಕು ಎಸೆತಗಳಲ್ಲಿ ಕೇವಲ ಎರಡು ರನ್ ಗಳಿಸಿದರು. ಉಮ್ರಾನ್ ಅವರು ಬೌಲಿಂಗ್ ಮಾಡಿದ 3.2 ಓವರ್‌ಗಳಲ್ಲಿ ದುಬಾರಿಯಾದರು. 47 ರನ್ ಬಿಟ್ಟುಕೊಟ್ಟರು. ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿರುವ ಕಾರಣ ಕೆಕೆಆರ್ ತಂಡವು ತಮ್ಮ ಪ್ರಮುಖ ವೇಗಿ ಹರ್ಷಿತ್ ರಾಣಾ ಅವರ ಅನುಪಸ್ಥಿತಿಯಲ್ಲಿ ಆಡಲಿದೆ. ಐಪಿಎಲ್ ಹರಾಜಿನಲ್ಲಿ 25.20 ಕೋಟಿ ರೂಪಾಯಿಗಳಿಗೆ ಖರೀದಿಸಲಾದ ಕ್ಯಾಮರೂನ್ ಗ್ರೀನ್ ಇಂಟ್ರಾ-ಸ್ಕ್ವಾಡ್ ಪಂದ್ಯದಲ್ಲಿ ಭಾಗವಹಿಸಲಿಲ್ಲ.

ಐಪಿಎಲ್ 2025 ಮೆಗಾ ಹರಾಜಿಗೂ ಮುನ್ನ ಕೆಕೆಆರ್ 4 ಕೋಟಿ ರೂ.ಗೆ ಉಳಿಸಿಕೊಂಡ ಭಾರತದ ಸ್ಟಾರ್ ವೇಗಿ ಹರ್ಷಿತ್ ರಾಣಾ, 2026 ರ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಯಿಂದ ಹೊರಗುಳಿಯಲಿದ್ದಾರೆ. ಫೆಬ್ರವರಿ 4 ರಂದು ನವಿ ಮುಂಬೈನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ವಿಶ್ವಕಪ್ 2026 ರ ಅಭ್ಯಾಸ ಪಂದ್ಯದಲ್ಲಿ ಭಾರತ ಪರ ಆಡುವಾಗ ದೆಹಲಿ ಮೂಲದ ವೇಗಿ ಗಾಯಗೊಂಡಿದ್ದರು. ಇದರಿಂದಾಗಿ ಅವರು ಈ ಬಾರಿಯ ಐಪಿಎಲ್ ಋತುವನ್ನು ಕಳೆದುಕೊಳ್ಳಲಿದ್ದಾರೆ.

ಐಪಿಎಲ್‌ ಆರಂಭಕ್ಕೆ ಮುನ್ನ ಸಹ ಆಟಗಾರರಿಗೆ ಖಡಕ್‌ ಎಚ್ಚರಿಕೆ ನೀಡಿದ ಕೊಹ್ಲಿ!

ಮಾರ್ಚ್ 29 ರಂದು ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ತನ್ನ ಮೊದಲ ಪಂದ್ಯದಲ್ಲಿ ಕೆಕೆಆರ್ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಆ ಬಳಿಕ ಮುಂಬರುವ ಪಂದ್ಯಗಳಲ್ಲಿ ಸನ್‌ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳನ್ನು ತವರಿನಲ್ಲಿ ಎದುರಿಸಲಿದೆ.