Wednesday, 11th December 2024

ಅನಿಲ್ ಕುಂಬ್ಳೆ ಅವಿಸ್ಮರಣೀಯ ಬೌಲಿಂಗ್‌ ದಾಳಿಗೆ 21 ವರ್ಷ

ಬೆಂಗಳೂರು: ಈ ಬೌಲರ್‌ ಪಾಕಿಸ್ತಾನ ವಿರುದ್ಧ ಭರ್ಜರಿ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದರು. ವಿಶ್ವದಲ್ಲೇ ತಮ್ಮದೇ ಛಾಪು ಮೂಡಿಸಿದ ಆಟಗಾರ. ತಮ್ಮ ಸ್ಪಿನ್‌ ಬೌಲಿಂಗ್ ಮೂಲಕ ವಿಕೆಟ್‌ ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್‌ ಪಡೆದ ಬೌಲರ್‌ಗಳ ಅಗ್ರ ಬೌಲರ್‌ಗಳ ಪಟ್ಟಿಯಲ್ಲಿ ಇವರಿಗೂ ಸ್ಥಾನ.

ಕರ್ನಾಟಕದ ಸ್ಟಾರ್ ಬೌಲರ್‌ ಅನಿಲ್ ಕುಂಬ್ಳೆ ಅವಿಸ್ಮರಣಿಯ ಬೌಲಿಂಗ್‌ ದಾಳಿ ನಡೆಸಿ ಇಂದಿಗೆ 21 ವರ್ಷಗಳು ಸಂದಿವೆ.

ಭಾರತದ ಶ್ರೇಷ್ಠ ಕ್ರಿಕೆಟ್ ಆಟಗಾರ ಅನಿಲ್ ಕುಂಬ್ಳೆ ಅವರ ಅದ್ಭುತ ಲೆಗ್ ಸ್ಪಿನ್ ಬಾಲರ್. 7 ಫೆಬ್ರವರಿ 1999 ರಂದು, ಕುಂಬ್ಳೆ ಏಕಾಂಗಿಯಾಗಿ 1999 ರಲ್ಲಿ, ಪಾಕಿಸ್ತಾನ ವಿರುದ್ಧ ದೆಹಲಿ ಟೆಸ್ಟ್ ಪಂದ್ಯದಲ್ಲಿ, ಇನ್ನಿಂಗ್ಸ್‌ನಲ್ಲಿ ಎಲ್ಲಾ 10 ವಿಕೆಟ್‌ಗಳನ್ನು ಕಬಳಿಸಿ ವಿಶ್ವದಾಖಲೆ ಮಾಡಿದರು. ಆ ಸಮಯದಲ್ಲಿ ಅವರು ಈ ಸಾಧನೆ ಮಾಡಿದ ವಿಶ್ವದ ಎರಡನೇ ಬೌಲರ್ ಎನಿಸಿಕೊಂಡರು.

1999ರಲ್ಲಿ ಪಾಕಿಸ್ತಾನ ವಿರುದ್ಧ ಆಡಿದ 2 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಚೆನ್ನೈನಲ್ಲಿ 12 ರನ್‌ಗಳ ಅಂತರದ ಸೋಲನ್ನು ಕಂಡಿತ್ತು. ಸರಣಿ ಸಮಬಲಗೊಳಿಸಲು ಭಾರತ ಎರಡನೇ ಪಂದ್ಯವನ್ನು ಗೆಲ್ಲಲೇ ಬೇಕಾದ ಅನಿವಾರ್ಯತೆ ಇತ್ತು. ಆ ಸಮಯದಲ್ಲಿ, ಭಾರತದ ನಾಯಕ ಮೊಹಮ್ಮದ್ ಅಜರುದ್ದೀನ್ ದೆಹಲಿ ಟೆಸ್ಟ್‌ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು.

ಪಂದ್ಯದ ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಪಾಕ್ ಆರಂಭಿಕ ಬ್ಯಾಟ್ಸ್‌ಮನ್‌ಗಳು ತಂಡಕ್ಕೆ ಉತ್ತಮ ಆರಂಭ ನೀಡಿ 101 ರನ್‌ಗಳ ಜೊತೆಯಾಟ ನೀಡಿದ್ದರು. ಆದರೆ ಇದಾದ ನಂತರ ಕುಂಬ್ಳೆ ಮೊದಲು ಶಾಹಿದ್ ಅಫ್ರಿದಿ ಮತ್ತು ನಂತರ ಸಯೀದ್ ಅನ್ವರ್ ಅವರ ವಿಕೆಟ್ ಪಡೆಯುವ ಮೂಲಕ ತಮ್ಮ ಸ್ಪಿನ್‌ನ ಮ್ಯಾಜಿಕ್ ತೋರಿಸಿದರು. ಮತ್ತು ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವಿಗೆ ಮುನ್ನುಡಿ ಬರೆದರು.