Saturday, 7th September 2024

ಬಾಂಗ್ಲಾದೇಶಕ್ಕೆ ಮತ್ತೊಂದು ಸೋಲು, ಮೊದಲ ಟಿ20 ಗೆದ್ದ ಕಿವೀಸ್‌

ಹ್ಯಾಮಿಲ್ಟನ್: ಬಾಂಗ್ಲಾದೇಶ ಹಾಗೂ ನ್ಯೂಜಿಲ್ಯಾಂಡ್ ನಡುವಣ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲ್ಯಾಂಡ್, ಪ್ರವಾಸಿ ಬಾಂಗ್ಲಾದೇಶ ತಂಡವನ್ನು 66 ರನ್ನುಗಳಿಂದ ಸೋಲಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಫಿನ್ ಅಲೆನ್ ಶೂನ್ಯಕ್ಕೆ ಔಟಾದರು ನಂತರ ಆರಂಭಿಕ ಆಟಗಾರ ಮಾರ್ಟಿನ್ ಗುಪ್ಟಿಲ್ 35ರನ್ ಗಳಿಸಿ ನಸುಮ್ ಅಹ್ಮದ್ ಗೆ ತಮ್ಮ ವಿಕೆಟ್ ಒಪ್ಪಿಸಿದರು.

ವಿಲ್ ಯಂಗ್ 53ರನ್ ಗಳಿಸಿ ಮೆಹೆದಿ ಹಸನ್ ಬೌಲಿಂಗ್ ನಲ್ಲಿ ಔಟಾದರೆ ಕೋನ್ವೆ 52 ಎಸೆತಗಳಲ್ಲಿ 92ರನ್ ಗಳಿಸಿದ್ದು ಅಜೇಯ ರಾಗಿ ಉಳಿದರು. ನ್ಯೂಜಿಲೆಂಡ್ ತಂಡ 3 ವಿಕೆಟ್ ನಷ್ಟಕ್ಕೆ 210ರನ್ ಗಳ ಮೊತ್ತ ದಾಖಲಿಸಿತು.

ಗುರಿ ಬೆನ್ನತ್ತಿದ ಬಾಂಗ್ಲಾದೇಶಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಯಾವ ಬ್ಯಾಟ್ಸ್ ಮನ್ ಗಳಿಂದಲೂ ಉತ್ತಮ ಪ್ರದರ್ಶನ ದೊರೆಯ ಲಿಲ್ಲ. ಅಫಿಫ್ ಹೊಸೈನ್ 45ರನ್ ಗಳಿಸಿ ಲಾಕಿ ಫರ್ಗ್ಯುಸನ್ ಬೌಲಿಂಗ್‌ನಲ್ಲಿ ಔಟಾದರು. ಬಾಂಗ್ಲಾದೇಶ 8 ವಿಕೆಟ್ ನಷ್ಟಕ್ಕೆ 144ರನ್ ಗಳಿಸಿತು ಸೋಲೊಪ್ಪಿಕೊಂಡಿತು.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily

Leave a Reply

Your email address will not be published. Required fields are marked *

error: Content is protected !!