Asia Cup 2025: ಏಷ್ಯಾಕಪ್ ಟೂರ್ನಿಗೆ ವೀಕ್ಷಕ ವಿವರಣೆಗಾರರ ಪಟ್ಟಿ ಬಿಡುಗಡೆ
ಮುಂದಿನ ವರ್ಷ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್‌ಗೆ ಮುನ್ನ ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ, ಯುಎಇ, ಓಮನ್ ಮತ್ತು ಹಾಂಗ್ ಕಾಂಗ್ ತಂಡಗಳು ಈ 17ನೇ ಆವೃತ್ತಿಯ ಟೂರ್ನಮೆಂಟ್‌ನಲ್ಲಿ ಭಾಗವಹಿಸಲಿವೆ. ಭಾರತ ಬುಧವಾರ ಯುಎಇ ವಿರುದ್ಧ ತನ್ನ ಅಭಿಯಾನ ಆರಂಭಿಸಲಿದೆ.

-

ದುಬೈ: ಯುಎಇಯಲ್ಲಿ ಮಂಗಳವಾರ(ಸೆ.9) ಆರಂಭವಾಗಲಿರುವ ಏಷ್ಯಾ ಕಪ್ ಟಿ20 ಟೂರ್ನಮೆಂಟ್‌ನಲ್ಲಿ ಭಾರತದ ದಿಗ್ಗಜರಾದ ಸುನಿಲ್ ಗವಾಸ್ಕರ್, ರವಿಶಾಸ್ತ್ರಿ ಮತ್ತು ವೀರೇಂದ್ರ ಸೆಹ್ವಾಗ್ ಹಾಗೂ ಮಾಜಿ ಬೌಲಿಂಗ್ ಕೋಚ್ ಭರತ್ ಅರುಣ್ ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಬಹುಭಾಷಾ ಕಾಮೆಂಟರಿ ಪ್ಯಾನೆಲ್‌ನ ಭಾಗವಾಗಲಿದ್ದಾರೆ.
ಮುಂದಿನ ವರ್ಷ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್‌ಗೆ ಮುನ್ನ ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ, ಯುಎಇ, ಓಮನ್ ಮತ್ತು ಹಾಂಗ್ ಕಾಂಗ್ ತಂಡಗಳು ಈ 17ನೇ ಆವೃತ್ತಿಯ ಟೂರ್ನಮೆಂಟ್‌ನಲ್ಲಿ ಭಾಗವಹಿಸಲಿವೆ. ಭಾರತ ಬುಧವಾರ ಯುಎಇ ವಿರುದ್ಧ ತನ್ನ ಅಭಿಯಾನ ಆರಂಭಿಸಲಿದೆ.
ಭಾರತದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ, ಸನೀಲ್ ಗವಾಸ್ಕರ್, ಸಂಜಯ್ ಮಂಜ್ರೇಕರ್, ರಾಬಿನ್ ಉತ್ತಪ್ಪ, ಬಾಜಿದ್ ಖಾನ್, ವಕಾರ್ ಯೂನಿಸ್, ವಾಸಿಮ್ ಅಕ್ರಮ್, ರಸೆಲ್ ಅರ್ನಾಲ್ಡ್ ಮತ್ತು ಸೈಮನ್ ಡೌಲ್ ಅವರು ದೂರದರ್ಶನದ ವರ್ಲ್ಡ್ ಫೀಡ್‌ಗಾಗಿ ವೀಕ್ಷಕ ವಿವರಣೆಗಾರರಾಗಿ ಆಯ್ಕೆಯಾಗಿದ್ದಾರೆ. ಇವರು ಇಂಗ್ಲೀಷ್‌ನಲ್ಲಿ ಕಾಮೆಂಟ್ರಿ ಮಾಡಲಿದ್ದಾರೆ.
ಇದನ್ನೂ ಓದಿ Asia Cup 2025: ಏಷ್ಯಾ ಕಪ್‌ನಲ್ಲಿ ಭಾರತ ಅತ್ಯಂತ ಯಶಸ್ವಿ ತಂಡ; ಅತ್ಯಧಿಕ 8 ಸಲ ಚಾಂಪಿಯನ್ ಆದ ಹೆಗ್ಗಳಿಕೆ
ಸೆಹ್ವಾಗ್, ಇರ್ಫಾನ್ ಪಠಾಣ್, ಅಜಯ್ ಜಡೇಜಾ, ಭಾರತದ ಮಾಜಿ ಬ್ಯಾಟಿಂಗ್ ಕೋಚ್ ಅಭಿಷೇಕ್ ನಾಯರ್ ಮತ್ತು ಸಬಾ ಕರೀಮ್ ಹಿಂದಿ ವೀಕ್ಷಕ ವಿವರಣೆಗಾರರ ಸಮಿತಿಯಲ್ಲಿರುವ ಪ್ರಮುಖರು. ಭರತ್ ಅರುಣ್ ಮತ್ತು ಡಬ್ಲ್ಯೂ.ವಿ. ರಾಮನ್ ತಮಿಳಿನಲ್ಲಿ, ವೆಂಕಟಪತಿ ರಾಜು ಮತ್ತು ವೇಣುಗೋಪಾಲ್ ರಾವ್ ತೆಲುಗು ಕಾಮೆಂಟ್ರಿ ಪ್ಯಾನಲ್‌ನಲ್ಲಿ ಕಾರ್ಯನಿರ್ವಹಿಸಲಿದ್ದಾರೆ.