ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Asia Cup 2025: ಏಷ್ಯಾಕಪ್‌ ತಂಡದಿಂದ ಶುಭಮನ್ ಗಿಲ್ ಹೊರಗುಳಿಯುವ ಸಾಧ್ಯತೆ

ಫಿಟ್ನೆಸ್‌ ಸಮಸ್ಯೆ ಎದುರಿಸುತ್ತಿರುವ ಮೊಹಮ್ಮದ್‌ ಶಮಿ ಮತ್ತು ತಾರಾ ವೇಗಿ ಬುಮ್ರಾ ಏಷ್ಯಾಕಪ್‌ನಲ್ಲಿ ಆಡುತ್ತಾರೊ ಇಲ್ಲವೊ ಎಂಬುದು ಸದ್ಯದ ಕುತೂಹಲ.ಇಂಗ್ಲೆಂಡ್‌ ಸರಣಿಯ ಎಲ್ಲ ಪಂದ್ಯಗಳನ್ನು ಆಡಿರುವ ಮೊಹಮ್ಮದ್‌ ಸಿರಾಜ್‌ಗೂ ಬಿಸಿಸಿಐ ವಿಶ್ರಾಂತಿ ನೀಡುವ ಸಾಧ್ಯತೆ ಅಧಿಕ.

ಮುಂಬೈ: ಬಹುನಿರೀಕ್ಷಿತ ಏಷ್ಯಾಕಪ್‌ ಟಿ20 ಟೂರ್ನಿಗೆ(Asia Cup 2025) ಅಜಿತ್‌ ಅಗರ್ಕರ್‌ ನೇತೃತ್ವದ ಆಯ್ಕೆ ಸಮಿತಿಯು ಆಗಸ್ಟ್‌ 19ರಂದು ಭಾರತ ತಂಡವನ್ನು(Asia Cup squads) ಪ್ರಕಟಿಸುವ ಸಾಧ್ಯತೆ ಇದೆ. ಆದರೆ ವರದಿಗಳ ಪ್ರಕಾರ, ಟೆಸ್ಟ್ ನಾಯಕ ಶುಭಮನ್ ಗಿಲ್(Shubman Gill) ಅಂತಿಮ ತಂಡದಲ್ಲಿ ಸ್ಥಾನ ಪಡೆಯುವು ಅನುಮಾನ ಎನ್ನಲಾಗಿದೆ.

ಆಯ್ಕೆ ಸಮಿತಿಯು ಅಭಿಷೇಕ್ ಶರ್ಮಾ ಮತ್ತು ಸಂಜು ಸ್ಯಾಮ್ಸನ್ ಅವರ ಆರಂಭಿಕ ಸಂಯೋಜನೆಗೆ ಹೆಚ್ಚು ಉತ್ಸುಕವಾಗಿದೆ ಎನ್ನಲಾಗಿದೆ. ಅಲ್ಲದೆ ತಿಲಕ್ ವರ್ಮಾ 3 ನೇ ಸ್ಥಾನದಲ್ಲಿ, ನಾಯಕ ಸೂರ್ಯಕುಮಾರ್ ಯಾದವ್ 4 ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ ಎನ್ನಲಾಗಿದೆ. ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್ ಮತ್ತು ಅಕ್ಷರ್ ಪಟೇಲ್ ಕೂಡ ರೇಸ್‌ನಲ್ಲಿದ್ದಾರೆ.

ಕುಲದೀಪ್ ಯಾದವ್ ಇಂಗ್ಲೆಂಡ್ ಪ್ರವಾಸದಲ್ಲಿ ಬೆಂಚ್‌ ಕಾದಿದ್ದರೂ ಏಷ್ಯಾಕಪ್‌ನಲ್ಲಿ ಅವರು ಮೊಲ ಆಯ್ಕೆ ಸಿನ್ನರ್‌ ಆಗಿ ಅವಕಾಶ ಪಡೆಯಲಿದ್ದಾರೆ. ವರುಣ್ ಚಕ್ರವರ್ತಿ ಮತ್ತು ಅರ್ಷದೀಪ್ ಸಿಂಗ್ ಕೂಡ ಮೊದಲ ಆಯ್ಕೆಗಳಾಗಿದ್ದರೆ. ಹರ್ಷಿತ್ ರಾಣಾ ಕೂಡ ಆಯ್ಕೆಯಾಗುವ ಸಾಧ್ಯತೆ ಇದೆ.

ಫಿಟ್ನೆಸ್‌ ಸಮಸ್ಯೆ ಎದುರಿಸುತ್ತಿರುವ ಮೊಹಮ್ಮದ್‌ ಶಮಿ ಮತ್ತು ತಾರಾ ವೇಗಿ ಬುಮ್ರಾ ಏಷ್ಯಾಕಪ್‌ನಲ್ಲಿ ಆಡುತ್ತಾರೊ ಇಲ್ಲವೊ ಎಂಬುದು ಸದ್ಯದ ಕುತೂಹಲ.ಇಂಗ್ಲೆಂಡ್‌ ಸರಣಿಯ ಎಲ್ಲ ಪಂದ್ಯಗಳನ್ನು ಆಡಿರುವ ಮೊಹಮ್ಮದ್‌ ಸಿರಾಜ್‌ಗೂ ಬಿಸಿಸಿಐ ವಿಶ್ರಾಂತಿ ನೀಡುವ ಸಾಧ್ಯತೆ ಅಧಿಕ.

ಭಾರತ ಸಂಭಾವ್ಯ ತಂಡ

ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಅರ್ಷ್‌ದೀಪ್ ಸಿಂಗ್, ಹರ್ಷಿತ್ ರಾಣಾ, ಜಿತೇಶ್ ಶರ್ಮಾ, ಪ್ರಸಿದ್ಧ್ ಕೃಷ್ಣ, ಕೃನಾಲ್ ಪಾಂಡ್ಯ.