ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Asia Cup 2025: ಏಷ್ಯಾಕಪ್‌ನಲ್ಲಿ ಅತ್ಯಧಿಕ ಶತಕ ಬಾರಿಸಿದ ಬ್ಯಾಟರ್‌ಗಳು

Most hundreds For Asia Cup: 8 ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. 'ಎ' ಗುಂಪಿನಲ್ಲಿ ಭಾರತ, ಪಾಕಿಸ್ತಾನ, ಯುಎಇ, ಮತ್ತು ಒಮಾನ್ ತಂಡಗಳಿದ್ದರೆ, 'ಬಿ' ಗುಂಪಿನಲ್ಲಿ ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ, ಮತ್ತು ಹಾಂಗ್ ಕಾಂಗ್ ಕಾಣಿಸಿಕೊಂಡಿದೆ. ಈ ಬಾರಿ ಟೂರ್ನಿ ಟಿ20 ಸ್ವರೂಪದಲ್ಲಿ ನಡೆಯಲಿದೆ.

ಬೆಂಗಳೂರು: ಏಷ್ಯಾದ ಪ್ರತಿಷ್ಠಿತ ತಂಡಗಳ ನಡುವೆ ನಡೆಯುವ ಏಷ್ಯಾಕಪ್‌(Asia Cup 2025) ಕ್ರಿಕೆಟ್‌ ಟೂರ್ನಿಯ ಪಂದ್ಯಾವಳಿ ಸೆಪ್ಟೆಂಬರ್ 9 ರಿಂದ 28 ರವರೆಗೆ ದುಬೈ ಮತ್ತು ಅಬುಧಾಬಿಯಲ್ಲಿ ನಡೆಯಲಿದೆ. ಇದಕ್ಕೂ ಮುನ್ನ ಟೂರ್ನಿಯ ಇತಿಹಾಸದಲ್ಲಿ ಅತ್ಯಧಿಕ ಶತಕ(Most hundreds For Asia Cup) ಬಾರಿಸಿದ ಆಟಗಾರರು ಯಾರೆಂಬ ಇಣುಕು ನೋಟ ಇಲ್ಲಿದೆ.

ಸನತ್ ಜಯಸೂರ್ಯ

ಶ್ರೀಲಂಕಾದ ಮಾಜಿ ನಾಯಕ ಹಾಗೂ ಕ್ರಿಕೆಟಿಗ ಸನತ್ ಜಯಸೂರ್ಯ ಏಷ್ಯಾ ಕಪ್‌ ಇತಿಹಾಸದಲ್ಲಿ ಅತ್ಯಧಿಕ ಶತಕ ಬಾರಿಸಿದ ಆಟಗಾರ ಎಂಬ ದಾಖಲೆಯನ್ನು ಹೊಂದಿದ್ದಾರೆ. ಅವರು 1990-2008ರ ಮಧ್ಯೆ ಒಟ್ಟು 25 ಪಂದ್ಯಗಳನ್ನಾಡಿ 6 ಶತಕ ಬಾರಿಸಿದ್ದಾರೆ. ಇದರಲ್ಲಿ 130 ಗರಿಷ್ಠ ವೈಯಕ್ತಿಕ ಮೊತ್ತವಾಗಿದೆ.

ವಿರಾಟ್‌ ಕೊಹ್ಲಿ

ಭಾರತ ತಂಡದ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ ಅವರು ಅತ್ಯಧಿಕ ಶತಕ ಬಾರಿಸಿದ ಆಟಗಾರ ಪಟ್ಟಿಯಲ್ಲಿ ದ್ವಿತೀಯ ಸ್ಥಾನಿಯಾಗಿದ್ದಾರೆ. ಕೊಹ್ಲಿ ಇದುವರೆಗೂ 16 ಪಂದ್ಯಗಳನ್ನಾಡಿ 4 ಶತಕ ಬಾರಿಸಿದ್ದಾರೆ. 183 ಅವರ ಗರಿಷ್ಠ ವೈಯಕ್ತಿಕ ಗಳಿಕೆ. ಈ ಬಾರಿ ಟೂರ್ನಿ ಟಿ20 ಸ್ವರೂಪದಲ್ಲಿ ನಡೆಯುತ್ತಿರುವ ಕಾರಣ ಕೊಹ್ಲಿ ಏಷ್ಯಾ ಕಪ್‌ ಆಡುತ್ತಿಲ್ಲ. ಅವರು ಈಗಾಗಲೇ ಟಿ20 ಮಾದರಿಗೆ ನಿವೃತ್ತಿ ಹೇಳಿದ್ದಾರೆ.

ಕುಮಾರ ಸಂಗಕ್ಕರ

ಶ್ರೀಲಂಕಾದ ಮಾಜಿ ಕ್ರಿಕೆಟಿಗ ಕುಮಾರ ಸಂಗಕ್ಕರ ಅವರು 24 ಪಂದ್ಯಗಳನ್ನಾಡಿ 4 ಶತಕ ಬಾರಿಸಿ ಮೂರನೇ ಸ್ಥಾನದಲ್ಲಿದ್ದಾರೆ. 121 ಅವರ ಗರಿಷ್ಠ ವೈಯಕ್ತಿಕ ಗಳಿಕೆಯಾಗಿದೆ. ಅವರು 2004 ರಿಂದ 2014ರ ತನಕ ಏಷ್ಯಾ ಕಪ್‌ ಟೂರ್ನಿಯಲ್ಲಿ ಆಡಿದ್ದರು.

ಇದನ್ನೂ ಓದಿ Asia Cup 2025: ಶ್ರೇಯಸ್‌ ಅಯ್ಯರ್‌ ಏನು ತಪ್ಪು ಮಾಡಿದ್ದಾರೆ? ಆರ್‌ ಅಶ್ವಿನ್‌ ಪ್ರಶ್ನೆ!

ಶೋಯೆಬ್‌ ಮಲಿಕ್‌

ಪಾಕಿಸ್ತಾನ ತಂಡದ ಮಾಜಿ ನಾಯಕ ಹಾಗೂ ಕ್ರಿಕೆಟಿಗ ಶೋಯೆಬ್‌ ಮಲಿಕ್‌ ಅವರು ಈ ಯಾದಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಅವರು 2000-2018 ಮಧ್ಯೆ ಒಟ್ಟು 17 ಪಂದ್ಯಗಳನ್ನಾಡಿ 3 ಶತಕ ಸಿಡಿಸಿದ್ದಾರೆ. 143 ಗರಿಷ್ಠ ವೈಯಕ್ತಿಕ ಮೊತ್ತವಾಗಿದೆ.