Thursday, 12th December 2024

ಏಷ್ಯಾ ಕಪ್: ಭಾರತ-ಪಾಕಿಸ್ತಾನ ಮೊದಲ ಮುಖಾಮುಖಿ

ನವದೆಹಲಿ: ದುಬೈನಲ್ಲಿ ಆ.28 ರಂದು ನಡೆಯಲಿರುವ ಏಷ್ಯಾ ಕಪ್ ಟಿ-20 ಟೂರ್ನಿಯ ಪಂದ್ಯದಲ್ಲಿ ಸಾಂಪ್ರದಾಯಿಕ ಎದು ರಾಳಿ ತಂಡಗಳಾದ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿ ಯಾಗಲಿವೆ.

ಉಭಯ ರಾಷ್ಟ್ರಗಳ ನಡುವೆ ದ್ವಿಪಕ್ಷೀಯ ಕ್ರಿಕೆಟ್ ನಿರ್ಬಂಧಿಸ ಲಾಗಿದೆ. ವರ್ಷದ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಪಂದ್ಯ ನಡೆಯಲಿದೆ.

ಶ್ರೀಲಂಕಾದಲ್ಲಿ ಆರ್ಥಿಕ ಹಾಗೂ ರಾಜಕೀಯ ಬಿಕ್ಕಟ್ಟು ಉದ್ಬವಿಸಿದ ಹಿನ್ನೆಲೆಯಲ್ಲಿ ಕಳೆದ ತಿಂಗಳು 9 ತಂಡಗಳ ಟಿ-20 ಟೂರ್ನಿಯನ್ನು ಶ್ರೀಲಂಕಾದಿಂದ ಯುಎಇಗೆ ಸ್ಥಳಾಂತರಿಸ ಲಾಗಿದೆ.

ಗ್ರೂಪ್ ಎ ನಲ್ಲಿ ಭಾರತ, ಪಾಕಿಸ್ತಾನವಿದೆ. ಬಿ ಗ್ರೂಪ್ ನಲ್ಲಿ ಶ್ರಿಲಂಕಾ, ಬಾಂಗ್ಲಾದೇಶ ಮತ್ತು ಅಪ್ಘಾನಿಸ್ತಾನವಿದೆ. ಭಾರತ- ಪಾಕಿಸ್ತಾನ ನಡುವಣ ಪಂದ್ಯ ಟೂರ್ನಿಯ ಪ್ರಮುಖ ಆಕರ್ಷಣೆಯಾಗಿದೆ.