ಏಷ್ಯನ್ ಗೇಮ್ಸ್‌ನಲ್ಲಿ ಚೊಚ್ಚಲ ಪದಕ ಗೆದ್ದ ಮೀರಾಬಾಯಿ; ಬೆಳ್ಳಿ ಮೆರಗು
Asian Games: ಮೀರಾಬಾಯಿ ಚಾನು ಭಾರತದ ಚಿನ್ನದ ರಾಣಿಯಾಗಿ ಗುರುತಿಸಿಕೊಂಡಿದ್ದಾರೆ. 2026ರ ಕಾಮನ್‌ವೆಲ್ತ್ ಗೇಮ್ಸ್ ಸೇರಿದಂತೆ ಕಳೆದ ಮೂರು ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮೀರಾಬಾಯಿ ಚಾನು ಚಿನ್ನದ ಪದಕ ಗೆದ್ದಿದ್ದಾರೆ. ಇನ್ನು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ. ಈ ಮೂಲಕ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಭಾರತದ 2ನೇ ವೈಟ್‌ಲಿಫ್ಟರ್ ದಾಖಲೆ ಬರೆದಿದ್ದರು.
Mirabai Chanu -
ನಗೋಯಾ, ಸೆ. 23: ಭಾರತದ ಮೀರಾಬಾಯಿ ಚಾನು ಏಷ್ಯನ್ ಗೇಮ್ಸ್‌ನಲ್ಲಿ ಚೊಚ್ಚಲ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಬುಧವಾರ ಇಲ್ಲಿ ನಡೆದ ವೇಟ್‌ಲಿಫ್ಟಿಂಗ್ ಸ್ಪರ್ಧೆಯ ಮಹಿಳೆಯರ 49 ಕೆ.ಜಿ ವಿಭಾಗದಲ್ಲಿ ಅವರು ಬೆಳ್ಳಿ ಪದಕ ಗೆದ್ದರು. 1998ರ ನಂತರ ಏಷ್ಯನ್ ಗೇಮ್ಸ್‌ನ ವೇಟ್‌ಲಿಫ್ಟಿಂಗ್‌ನಲ್ಲಿ ಪದಕ ಗೆದ್ದ ಭಾರತದ ಮೊದಲ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾದರು.
32 ವರ್ಷದ ಮೀರಾಬಾಯಿ 'ಸ್ನ್ಯಾಚ್'ನಲ್ಲಿ 87 ಕೆಜಿ ಮತ್ತು 'ಕ್ಲೀನ್ ಅಂಡ್ ಜರ್ಕ್'ನಲ್ಲಿ 111 ಕೆಜಿ ಸೇರಿದಂತೆ ಒಟ್ಟು 198 ಕೆಜಿ ತೂಕವನ್ನು ಎತ್ತುವ ಮೂಲಕ ಈ ಸಾಧನೆ ಮಾಡಿದರು. ಒಟ್ಟು ಏಳು ಸ್ಪರ್ಧಿಗಳು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ಅವರು ಎರಡನೇ ಸ್ಥಾನವನ್ನು ಪಡೆದರು.
ಕರ್ಣಂ ಮಲ್ಲೇಶ್ವರಿ ನಂತರ, ಒಲಿಂಪಿಕ್ಸ್, ಏಷ್ಯನ್ ಗೇಮ್ಸ್, ಕಾಮನ್‌ವೆಲ್ತ್ ಗೇಮ್ಸ್, ವಿಶ್ವ ಚಾಂಪಿಯನ್‌ಶಿಪ್‌ಗಳು ಹಾಗೂ ಏಷ್ಯನ್ ಮತ್ತು ಕಾಮನ್‌ವೆಲ್ತ್ ಚಾಂಪಿಯನ್‌ಶಿಪ್‌ಗಳಂತಹ ಎಲ್ಲಾ ಪ್ರಮುಖ ಅಂತರರಾಷ್ಟ್ರೀಯ ವೇಟ್‌ಲಿಫ್ಟಿಂಗ್ ಸ್ಪರ್ಧೆಗಳಲ್ಲಿ ಪದಕ ಗೆದ್ದ ಎರಡನೇ ಭಾರತೀಯ ವೇಟ್‌ಲಿಫ್ಟರ್ ಎಂಬ ಹೆಗ್ಗಳಿಕೆಗೂ ಈ ಮಣಿಪುರಿ ಕ್ರೀಡಾಪಟು ಪಾತ್ರರಾದರು.
215 ಕೆಜಿ ಭಾರ ಎತ್ತಿದ ಉತ್ತರ ಕೊರಿಯಾದ ರಿ ಸಾಂಗ್-ಗಮ್ ಚಿನ್ನದ ಪದಕ ಗೆದ್ದರು. ಏಷ್ಯನ್ ಕ್ರೀಡಾಕೂಟದಲ್ಲಿ ಇದು ಅವರ ಸತತ ಮೂರನೇ ಚಿನ್ನದ ಪದಕವಾಗಿದೆ. ಇಂಡೋನೇಷ್ಯಾದ ಲುಲುಕ್ ಡಯಾನಾ ಟ್ರಿ ವಿಜಯಾನಾ(191 ಕೆಜಿ)ಕಂಚಿನ ಪದಕವನ್ನು ಗೆದ್ದುಕೊಂಡರು.
ಚೊಚ್ಚಲ ಪದಕ
ಮಣಿಪುರದ ಮೀರಾಗೆ ಇದು ಏಷ್ಯನ್ ಗೇಮ್ಸ್‌ನಲ್ಲಿ ಮೊದಲ ಪದಕ. ಈ ಹಿಂದೆ ಎರಡು ಏಷ್ಯಾಡ್ ಕೂಟಗಳಲ್ಲಿ ಭಾಗವಹಿಸಿದ್ದರು. 2014ರಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿದ್ದ ಅವರು 9ನೇ ಸ್ಥಾನ ಪಡೆದಿದ್ದರು. 2018ರಲ್ಲಿ ಬೆನ್ನಿನ ಗಾಯದಿಂದಾಗಿ ಭಾಗವಹಿಸಲಿಲ್ಲ. 2023ರಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದರು. ಆದರೆ ಅಲ್ಲಿ ಸ್ಪರ್ಧೆಯ ಮಧ್ಯೆದಲ್ಲಿಯೇ ಗಾಯಗೊಂಡಿದ್ದರು. ಇದೀಗ ಮೂರನೇ ಪ್ರಯತ್ನದಲ್ಲಿ ಅವರು ಪದಕದ ಖಾತೆ ತೆರೆದರು.
Mirabai Chanu nails all her three Snatch attempts, successfully lifting 83kg, 85kg and 87kg in a perfect start to her Asian Games campaign! 🔥
— Sony Sports Network (@SonySportsNetwk) September 23, 2026
Watch the 20th Asian Games Aichi-Nagoya LIVE on Sony Sports Network TV channels & Sony LIV.#SonySportsNetwork #SonyLIV #AsianGames… pic.twitter.com/E1DnrjOhuB
ಸ್ಕೀಟ್ ಶೂಟಿಂಗ್‌ನಲ್ಲಿ ಮತ್ತೊಂದು ಕಂಚು ಗೆದ್ದ ಭಾರತ; ಸಾಫ್ಟ್ ಟೆನ್ನಿಸ್‌ನಲ್ಲಿ ಜಯ್‌ಗೆ ಐತಿಹಾಸಿಕ ಕಂಚು
ಭಾರತದ ಚಿನ್ನದ ರಾಣಿ
ಮೀರಾಬಾಯಿ ಚಾನು ಭಾರತದ ಚಿನ್ನದ ರಾಣಿಯಾಗಿ ಗುರುತಿಸಿಕೊಂಡಿದ್ದಾರೆ. 2026ರ ಕಾಮನ್‌ವೆಲ್ತ್ ಗೇಮ್ಸ್ ಸೇರಿದಂತೆ ಕಳೆದ ಮೂರು ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮೀರಾಬಾಯಿ ಚಾನು ಚಿನ್ನದ ಪದಕ ಗೆದ್ದಿದ್ದಾರೆ. ಇನ್ನು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ. ಈ ಮೂಲಕ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಭಾರತದ 2ನೇ ವೈಟ್‌ಲಿಫ್ಟರ್ ದಾಖಲೆ ಬರೆದಿದ್ದರು. 2017, 2022 ಹಾಗೂ 2025ರ ವಿಶ್ವ ಚಾಂಪಿಯನ್‌ಶಿಪ್ ಚಿನ್ನ ಹಾಗೂ ಬೆಳ್ಳಿ ಪದಕ ಗೆದ್ದಿದ್ದಾರೆ.