Wednesday, 11th December 2024

ಏಷ್ಯನ್ ಗೇಮ್ಸ್: ಭಾರತಕ್ಕೆ ಶೂಟಿಂಗ್ ನಲ್ಲಿ ಚಿನ್ನ

ಹೌಂಗ್ಜ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದೆ. 50 ಮೀಟರ್ ರೈಫಲ್ಸ್ ನಲ್ಲಿ ಭಾರತ ತಂಡ ಚಿನ್ನದ ಪದಕ ಗೆದ್ದುಕೊಂಡಿದೆ.

ಎಸ್ ಎಂ 50 ಮೀ ರೈಫಲ್ 3 ಪಿ ತಂಡ, ಐಶ್ವರಿ ಪ್ರತಾಪ್ ಸಿಂಗ್ ತೋಮರ್, ಕುಸಾಲೆ ಸ್ವಪ್ನಿಲ್ ಮತ್ತು ಅಖಿಲ್ ಶಿಯೋರನ್, ಚಿನ್ನದ ಪದಕ ಪಡೆದಿದ್ದಾರೆ.

ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ತಂಡ ಸ್ಪರ್ಧೆಯಲ್ಲಿ ಭಾರತಕ್ಕೆ ಬೆಳ್ಳಿ ಪದಕ ಸಿಕ್ಕಿದೆ. ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ತಂಡ ಸ್ಪರ್ಧೆಯಲ್ಲಿ ಇಶಾ ಸಿಂಗ್, ಪಾಲಕ್ ಮತ್ತು ದಿವ್ಯಾ ತಡಿಗೋಳ್ ಸುಬ್ಬರಾಜು ಬೆಳ್ಳಿ ಪದಕ ಗೆದ್ದಿದ್ದಾರೆ.