ಕರ್ನಾಟಕ ಬಜೆಟ್​ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

kl rahul-athiya shetty: ಮೊದಲ ಮಗುವಿನ ನಿರೀಕ್ಷೆಯಲ್ಲಿ ರಾಹುಲ್-ಅಥಿಯಾ ಶೆಟ್ಟಿ; ಬೇಬಿ ಬಂಪ್ ಫೋಟೊಶೂಟ್‌

ಐಪಿಎಲ್‌ನಲ್ಲಿ ಡೆಲ್ಲಿ ತಂಡ ಸೇರಿರುವ ರಾಹುಲ್‌ಗೆ ತಂಡದ ಸಾರಥ್ಯ ನೀಡಲು ಫ್ರಾಂಚೈಸಿ ಮುಂದಾಗಿದ್ದರೂ ಅವರು ನಾಯಕತ್ವ ನಿರಾಕರಿಸಿದ್ದಾರೆ ಎನ್ನಲಾಗಿದೆ. ಕೇವಲ ಬ್ಯಾಟರ್‌ ಆಗಿ ತಂಡಕ್ಕೆ ಹೆಚ್ಚಿನ ಕೊಡುಗೆ ನೀಡಲು ಬಯಸಿದ್ದಾರೆ ಎನ್ನಲಾಗಿದೆ. ಕಳೆದ ಮೆಗಾ ಹರಾಜಿನಲ್ಲಿ 14 ಕೋಟಿ ರೂ.ಗೆ ಡೆಲ್ಲಿ ರಾಗುಲ್‌ ಅವರನ್ನು ಖರೀದಿ ಮಾಡಿತ್ತು.

ಮೊದಲ ಮಗುವಿನ ನಿರೀಕ್ಷೆಯಲ್ಲಿ ಕೆಎಲ್ ರಾಹುಲ್-ಅಥಿಯಾ ಶೆಟ್ಟಿ ದಂಪತಿ

Profile Abhilash BC Mar 13, 2025 11:53 AM

ಮುಂಬಯಿ: ಚಾಂಪಿಯನ್ಸ್‌ ಟ್ರೋಫಿ ಗೆಲುವಿನ ಬಳಿಕ ತವರಿಗೆ ಮರಳಿದ ಕನ್ನಡಿಗ, ಟೀಮ್‌ ಇಂಡಿಯಾದ ಅನುಭವಿ ಬ್ಯಾಟರ್‌ ಕೆ.ಎಲ್‌ ರಾಹುಲ್‌(KL Rahul) ಅವರು ತಮ್ಮ ಪತ್ನಿ, ಬಾಲಿವುಡ್‌ ನಟಿ ಅಥಿಯಾ ಶೆಟ್ಟಿ(Athiya Shetty) ಜತೆ ಬೇಬಿ ಬಂಪ್ ಫೋಟೋಶೂಟ್(Athiya Shetty's pregnancy photoshoot) ಮಾಡಿಸಿದ್ದಾರೆ. ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಪತ್ನಿಯ ಹೊಟ್ಟೆಯನ್ನು ತಬ್ಬಿಕೊಂಡು ಸೋಫಾದ ಮೇಲೆ ವಿಶ್ರಾಂತಿ ಪಡೆಯುತ್ತಿರುವ ಹಾಗೂ ಅವರ ಮಡಿಲಲ್ಲಿ ಮಲಗಿರುವ ಫೋಟೋಗಳನ್ನು ರಾಹುಲ್‌(kl rahul-athiya shetty) ಹಂಚಿಕೊಂಡು, ಮೂವರಾಗುವ ಸನಿಹದಲ್ಲಿ ಎಂದು ಬರೆದುಕೊಂಡಿದ್ದಾರೆ. ಈ ಫೋಟೊ ಕಂಡ ರಾಹುಲ್‌ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ದಂಪತಿಗೆ ಶುಭ ಹಾರೈಸಿದ್ದಾರೆ.

ಆಥಿಯಾ ಶೆಟ್ಟಿ ಎಪ್ರಿಲ್‌ ಮೊದಲ ವಾರದಲ್ಲಿ ಮೊದಲ ಮಗುವಿಗೆ ಜನ್ಮ ನೀಡುವ ನಿರೀಕ್ಷೆ ಇದೆ. ಹೀಗಾಗಿ ರಾಹುಲ್​ ಐಪಿಎಲ್​ ಟೂರ್ನಿಯ 1 ಅಥವಾ 2 ಪಂದ್ಯಗಳಿಗೆ ಗೈರಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಐಪಿಎಲ್‌ನಲ್ಲಿ ಡೆಲ್ಲಿ ತಂಡ ಸೇರಿರುವ ರಾಹುಲ್‌ಗೆ ತಂಡದ ಸಾರಥ್ಯ ನೀಡಲು ಫ್ರಾಂಚೈಸಿ ಮುಂದಾಗಿದ್ದರೂ ಅವರು ನಾಯಕತ್ವ ನಿರಾಕರಿಸಿದ್ದಾರೆ ಎನ್ನಲಾಗಿದೆ. ಕೇವಲ ಬ್ಯಾಟರ್‌ ಆಗಿ ತಂಡಕ್ಕೆ ಹೆಚ್ಚಿನ ಕೊಡುಗೆ ನೀಡಲು ಬಯಸಿದ್ದಾರೆ ಎನ್ನಲಾಗಿದೆ. ಕಳೆದ ಮೆಗಾ ಹರಾಜಿನಲ್ಲಿ 14 ಕೋಟಿ ರೂ.ಗೆ ಡೆಲ್ಲಿ ರಾಗುಲ್‌ ಅವರನ್ನು ಖರೀದಿ ಮಾಡಿತ್ತು.

ಬಿಸಿಸಿಐ ಹೊಸ ಕೇಂದ್ರ ಗುತ್ತಿಗೆ ಪಟ್ಟಿಯಲ್ಲಿ ರಾಹುಲ್‌ ಮುಂಬಡ್ತಿ ಪಡೆಯುವ ಸಾಧ್ಯತೆ ಇದೆ. ಸದ್ಯ ರಾಹುಲ್‌ 'ಎ' ದರ್ಜೆಯಲ್ಲಿ ಕಾಣಿಸಿಕೊಂಡಿದ್ದಾರೆ. ಅವರನ್ನು 'ಎ+' ಗೆ ಆಯ್ಕೆ ಮಾಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಚಾಂಪಿಯನ್ಸ್‌ ಟ್ರೋಫಿಯಲ್ಲಿ ರಾಹುಲ್‌ ಕೀಪಿಂಗ್‌ ಜತೆಗೆ ಬ್ಯಾಟಿಂಗ್‌ನಲ್ಲಿಯೂ ಅಮೋಘ ಪ್ರದರ್ಶನ ತೋರಿದ್ದರು.

ಇದನ್ನೂ ಓದಿ IPL 2025: ಡೆಲ್ಲಿ ಕ್ಯಾಪಿಟಲ್ಸ್‌ ನಾಯಕತ್ವವನ್ನು ನಿರಾಕರಿಸಿದ ಕೆಎಲ್‌ ರಾಹುಲ್‌!

ನ್ಯೂಜಿಲ್ಯಾಂಡ್‌ ವಿರುದ್ಧದ ಫೈನಲ್‌ ಪಂದ್ಯದಲ್ಲಿ ಭಾರತ ಕೊನೆಯ ಕ್ಷಣದಲ್ಲಿ ಸಂಕಷ್ಟಕ್ಕೆ ಸಿಲುಕಿದರೂ ಕೂಡ ರಾಹುಲ್ ಜವಾಬ್ದಾರಿಯುತ ಬ್ಯಾಟಿಂಗ್‌ ಮೂಲಕ ಅಜೇಯ 34 ರನ್ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದ್ದರು. ಕೆ.ಎಲ್‌ ರಾಹುಲ್‌ ಅವರು ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಜಯಿಸಿದ 5ನೇ ಕನ್ನಡಿಗ ಎನಿಸಿದರು. ರಾಹುಲ್‌ ದ್ರಾವಿಡ್‌, ಅನಿಲ್‌ ಕುಂಬ್ಳೆ, ಜಾವಗಲ್‌ ಶ್ರೀನಾಥ್‌ ಮತ್ತು ವಿನಯ್‌ ಕುಮಾರ್‌ ಈ ಹಿಂದಿನ ಸಾಧಕರು.