AUS vs IND: ಟಿ20 ತಂಡದಿಂದ ಕುಲ್ದೀಪ್ ಯಾದವ್ ಬಿಡುಗಡೆ
ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡ ಎರಡು ಟೆಸ್ಟ್, ಮೂರು ಏಕದಿನ ಮತ್ತು ಐದು ಟಿ20 ಪಂದ್ಯಗಳ ಸರಣಿಯನ್ನು ಆಯೋಜಿಸಲಿದ್ದು, ಕುಲ್ದೀಪ್ ಅವರಿಗೆ ಕೆಂಪು ಚೆಂಡಿನ ಅಭ್ಯಾಸ ನಡೆಸುವ ಸಲುವಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಲಾಗುತ್ತಿದೆ.
-
Abhilash BC
Nov 3, 2025 3:21 PM
ನವದೆಹಲಿ: ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಭಾರತ ಎ ಮತ್ತು ದಕ್ಷಿಣ ಆಫ್ರಿಕಾ ಎ ನಡುವಿನ ಎರಡನೇ, ನಾಲ್ಕು ದಿನಗಳ ಟೆಸ್ಟ್ ಪಂದ್ಯದಲ್ಲಿ ಭಾಗವಹಿಸುವ ಉದ್ದೇಶದಿಂದ ಕುಲ್ದೀಪ್ ಯಾದವ್(Kuldeep Yadav) ಅವರನ್ನು ಉಳಿದ ಆಸ್ಟ್ರೇಲಿಯಾ ಸರಣಿಯ ಭಾರತ(AUS vs IND) ತಂಡದಿಂದ ಬಿಡುಗಡೆ ಮಾಡಲಾಗಿದೆ.
ದಕ್ಷಿಣ ಆಫ್ರಿಕಾ ಎ ವಿರುದ್ಧದ ಎರಡನೇ ನಾಲ್ಕು ದಿನಗಳ ಪಂದ್ಯ ಗುರುವಾರ, ನವೆಂಬರ್ 6 ರಂದು ಆರಂಭವಾಗಲಿದೆ. ತನುಷ್ ಕೋಟ್ಯಾನ್ ಅವರ ಎಂಟು ವಿಕೆಟ್ ಗೊಂಚಲಿನ ನೆರವಿನಿಂದ ಭಾರತ ಎ ತಂಡವು ಸಿಒಇಯಲ್ಲಿ ನಡೆದ ಮೊದಲ ಪಂದ್ಯವನ್ನು ಮೂರು ವಿಕೆಟ್‌ಗಳಿಂದ ಗೆದ್ದುಕೊಂಡಿತು.
ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡ ಎರಡು ಟೆಸ್ಟ್, ಮೂರು ಏಕದಿನ ಮತ್ತು ಐದು ಟಿ20 ಪಂದ್ಯಗಳ ಸರಣಿಯನ್ನು ಆಯೋಜಿಸಲಿದ್ದು, ಕುಲ್ದೀಪ್ ಅವರಿಗೆ ಕೆಂಪು ಚೆಂಡಿನ ಅಭ್ಯಾಸ ನಡೆಸುವ ಸಲುವಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಲಾಗುತ್ತಿದೆ.
ಆಸ್ಟ್ರೇಲಿಯಾ ಸರಣಿಯ ಮೊದಲ ಎರಡು ಏಕದಿನ ಪಂದ್ಯಗಳಲ್ಲಿ ಆಡುವ ಹನ್ನೊಂದರ ತಂಡದಲ್ಲಿಲ್ಲದ ಕುಲ್ದೀಪ್, ಸಿಡ್ನಿಯಲ್ಲಿ ನಡೆದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಅವಕಾಶ ಪಡೆದಿದ್ದರು. ಆದರೆ ನಿರೀಕ್ಷಿತ ಬೌಲಿಂಗ್ ನಡೆಸಲು ವಿಫಲರಾಗಿದ್ದರು.10 ಓವರ್‌ಗಳಲ್ಲಿ ಕೇವಲ ಒಂದು ವಿಕೆಟ್ ಮಾತ್ರ ಕಿತ್ತಿದ್ದರು. ಟಿ20 ಸರಣಿಯ ಮೊದಲ ಎರಡು ಪಂದ್ಯಗಳಲ್ಲಿಯೂ ಆಡಿದ್ದರು. ಅಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡಲಿಲ್ಲ. ಹೀಗಾಗಿ ಮೂರನೇ ಪಂದ್ಯದಿಂದ ಕೈಬಿಡಲಾಗಿತ್ತು.
ಇದನ್ನೂ ಓದಿ ICC Test Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್‌ನಲ್ಲಿ ಜೀವನಶ್ರೇಷ್ಠ ಪ್ರಗತಿ ಸಾಧಿಸಿದ ಕುಲ್‌ದೀಪ್
2ನೇ ಚತುರ್ದಿನ ಪಂದ್ಯಕ್ಕೆ ಭಾರತ ಎ ಪರಿಷ್ಕೃತ ತಂಡ
ರಿಷಭ್ ಪಂತ್ (ನಾಯಕ), ಕೆಎಲ್ ರಾಹುಲ್, ಧ್ರುವ್ ಜುರೆಲ್ (ವಿ.ಕೀ), ಸಾಯಿ ಸುದರ್ಶನ್ (ಉಪನಾಯಕ), ದೇವದತ್ ಪಡಿಕ್ಕಲ್, ಋತುರಾಜ್ ಗಾಯಕ್ವಾಡ್, ಹರ್ಷ್ ದುಬೆ, ತನುಷ್ ಕೋಟ್ಯಾನ್, ಮಾನವ್ ಸುತಾರ್, ಖಲೀಲ್ ಅಹ್ಮದ್, ಅಬ್ರಣ್ ಅಹ್ಮದ್, ಗುರ್ನೂರ್ ಅಹ್ಮದ್ ಕೃಷ್ಣ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಕುಲದೀಪ್ ಯಾದವ್.