Wednesday, 25th December 2024

AUS vs IND: ಬಾಕ್ಸಿಂಗ್‌ ಡೇ ಟೆಸ್ಟ್‌ನಲ್ಲಿ ಭಾರತದ ಸಾಧನೆ ಹೇಗಿದೆ?

ಮೆಲ್ಬರ್ನ್‌: ಪ್ರತಿಷ್ಠಿತ ಭಾರತ ಮತ್ತು ಆಸ್ಟ್ರೇಲಿಯಾ(AUS vs IND) ನಡುವಣ ಬಾಕ್ಸಿಂಗ್‌ ಡೇ ಟೆಸ್ಟ್‌ ಪಂದ್ಯ(boxing day test) ನಾಳೆಯಿಂದ ಆರಂಭಗೊಳ್ಳಲಿದೆ. ಈಗಾಗಲೇ ಮೊದಲ ದಿನದ ಟಿಕೆಟ್‌ಗಳು ಸೋಲ್ಡ್‌ ಔಟ್‌ ಆಗಿದೆ. ಇದೀಗ ಬಾಕ್ಸಿಂಗ್‌ ಡೇ ಟೆಸ್ಟ್‌ನಲ್ಲಿ ಭಾರತದ ಸಾಧನೆ ಹೀಗಿದೆ ಎಂಬ ವರದಿಯೊಂದು ಇಲ್ಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಬಾಕ್ಸಿಂಗ್‌ ಡೇ ಟೆಸ್ಟ್‌ ಮುಖಾಮುಖಿಯಾದದ್ದು 1985 ರಲ್ಲಿ. ಈ ಪಂದ್ಯ ಡ್ರಾದಲ್ಲಿ ಕೊನೆಗೊಂಡಿತ್ತು. ನಂತರ ಆಸ್ಟ್ರೇಲಿಯಾ ಭಾರತದ ವಿರುದ್ಧ ಸತತ ಐದು ಬಾಕ್ಸಿಂಗ್ ಡೇ ಟೆಸ್ಟ್‌ಗಳನ್ನು ಗೆದ್ದುಕೊಂಡಿತು. ಭಾರತ ತಂಡ ಇದುವರೆಗೂ 17 ಬಾಕ್ಸಿಂಗ್ ಡೇ ಟೆಸ್ಟ್‌ ಪಂದ್ಯಗಳನ್ನು ಆಡಿದೆ. ಇದರಲ್ಲಿ ಗೆದ್ದಿದ್ದು 4 ಪಂದ್ಯಗಳನ್ನು ಮಾತ್ರ. ಕೊನೆಯ ಬಾರಿ ಭಾರತ ಬಾಕ್ಸಿಂಗ್​ ಡೇ ಟೆಸ್ಟ್​ ಗೆಲುವು ಸಾಧಿಸಿದ್ದು 2021ರಲ್ಲಿ. ಸೆಂಚುರಿಯನ್‌ನಲ್ಲಿ ನಡೆದಿದ್ದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ. 113 ರನ್‌ಗಳ ಗೆಲುವು ಒಲಿದಿತ್ತು.

ಆಸ್ಟ್ರೇಲಿಯಾ ವಿರುದ್ಧ ಭಾರತ ಇದುವರೆಗೆ ಒಟ್ಟು 9 ಬಾಕ್ಸಿಂಗ್ ಡೇ ಟೆಸ್ಟ್‌ಗಳನ್ನು ಆಡಿದೆ. ಈ ಪೈಕಿ ಭಾರತ ಗೆಲುವು ಸಾಧಿಸಿದ್ದು 2 ಪಂದ್ಯಗಳು ಮಾತ್ರ. 2018ರಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡ ಬಾಕ್ಸಿಂಗ್ ಡೇಯಲ್ಲಿ ಆಸೀಸ್‌ ವಿರುದ್ಧ ಮೊದಲ ಜಯ ದಾಖಲಿಸಿತ್ತು. ಇದಾದ ಬಳಿಕ 2020 ರಲ್ಲಿ ಮತ್ತೊಂದು ಗೆಲುವು ಕಂಡಿತ್ತು.

ಇದನ್ನೂ ಓದಿ AUS vs IND: ಆಸೀಸ್‌ ಮಾಧ್ಯಮಗಳ ಮೈಂಡ್‌ ಗೇಮ್‌; ಬುಮ್ರಾ ಬೌಲಿಂಗ್‌ ಬಗ್ಗೆ ಶಂಕೆ

 ಕ್ರಿಸ್​ಮಸ್​ನ ಮರು ದಿನ ನಡೆಯುವ ಯಾವುದೇ ಟೆಸ್ಟ್ ಪಂದ್ಯವನ್ನು ಕೂಡ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವೆಂದು ಪರಿಗಣಿಸಲಾಗುತ್ತದೆ. ಬಾಕ್ಸಿಂಗ್ ಡೇ ಟೆಸ್ಟ್(Boxing Day Test) ಎಂಬುದು ಆಸ್ಟ್ರೇಲಿಯಾ ವಿರುದ್ಧ ಡಿಸೆಂಬರ್ 26 ರಂದು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಆಡಲಾಗುವ ಪ್ರಸಿದ್ಧ ಟೆಸ್ಟ್ ಪಂದ್ಯವಾಗಿದೆ.

ಭಾರತ ತಂಡ ಕಳೆದೆರಡು ಬಾರಿ ಆಸ್ಟ್ರೇಲಿಯಾ ಪ್ರವಾಸದಲ್ಲೂ ಮೆಲ್ಬರ್ನ್‌ ಟೆಸ್ಟ್‌ನಲ್ಲಿ ಗೆದ್ದಿದೆ. 2018-19ರಲ್ಲಿ 137 ರನ್‌ಗಳಿಂದ ಜಯಗಳಿಸಿದ್ದರೆ, 2020-21ರಲ್ಲಿ ಭಾರತ 8 ವಿಕೆಟ್‌ ಜಯಭೇರಿ ಬಾರಿಸಿತ್ತು. ಇದೀಗ ಹ್ಯಾಟ್ರಿಕ್‌ ಗೆಲುವಿನ ನಿರೀಕ್ಷೆಯಲ್ಲಿದೆ. ಒಟ್ಟಾರೆ ಈ ಕ್ರೀಡಾಂಗಣದಲ್ಲಿ ಭಾರತ ಆಡಿರುವ 14 ಪಂದ್ಯಗಳ ಪೈಕಿ 4ರಲ್ಲಿ ಗೆದ್ದಿದೆ. 8 ಪಂದ್ಯಗಳಲ್ಲಿ ಸೋತಿದ್ದರೆ, 2 ಪಂದ್ಯ ಡ್ರಾಗೊಂಡಿವೆ.