Saturday, 14th December 2024

ಫೈನಲ್‌ಗೆ ನೆಗೆದ ಆಸೀಸ್‌, ಪಾಕಿಸ್ತಾನ ಉಡೀಸ್‌

ದುಬೈ: ಕೊನೆಯವರೆಗೂ ಕುತೂಹಲ ಮೂಡಿಸಿದ್ದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 5 ವಿಕೆಟ್ ಗಳಿಂದ ಪಾಕಿಸ್ತಾನ ತಂಡವನ್ನು ಬಗ್ಗುಬಡಿದು ಟಿ-20 ವಿಶ್ವಕಪ್ ಫೈನಲ್ ಗೆ ಲಗ್ಗೆ ಹಾಕಿದೆ.

ಗುರುವಾರದ ಸೆಮಿಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 176 ರನ್ ಸಂಪಾದಿಸಿತು.

ಕಠಿಣ ಗುರಿ ಬೆಂಬತ್ತಿದ ಆಸ್ಟ್ರೇಲಿಯಾ 6 ಎಸೆತಗಳು ಬಾಕಿ ಇರುವಂತೆಯೇ 5 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.

ಕಠಿಣ ಗುರಿ ಬೆಂಬತ್ತಿದ ಆಸ್ಟ್ರೇಲಿಯಾ ತಂಡ ಶಬಾದ್ ಕಾರ್ವಿ (4 ವಿಕೆಟ್) ಮಾರಕ ದಾಳಿಗೆ ತತ್ತರಿಸಿ ಒಂದು ಹಂತದಲ್ಲಿ 96 ರನ್ ಗೆ 5 ವಿಕೆಟ್ ಕಳೆದುಕೊಂಡು ಆಘಾತಕ್ಕೆ ಒಳಗಾಗಿತ್ತು. 6ನೇ ವಿಕೆಟ್ ಗೆ ಜೊತೆಯಾದ ಸ್ಟೊನಿಸಿಸ್ ಮತ್ತು ಮ್ಯಾಥ್ಯೂ ವೇಡ್ 81 ರನ್ ಜೊತೆಯಾಟದ ಮೂಲಕ ತಂಡಕ್ಕೆ ರೋಚಕ ಜಯ ತಂದುಕೊಟ್ಟರು. ಸ್ಟೋನಿಸಿಸ್ 31 ಎಸೆತಗಳಲ್ಲಿ 2 ಬೌಂಡರಿ ಹಾಗೂ 2 ಸಿಕ್ಸರ್ ಸೇರಿದ 40 ರನ್ ಬಾರಿಸಿ ಔಟಾಗದೇ ಉಳಿದರೆ, ವೇಡ್ 17 ಎಸೆತಗಳಲ್ಲಿ 2 ಬೌಂಡರಿ ಹಾಗೂ 4 ಸಿಕ್ಸರ್ ಅಬ್ಬರದೊಂದಿಗೆ 41 ರನ್ ಚಚ್ಚಿ ತಂಡಕ್ಕೆ ರೋಚಕ ಗೆಲುವು ತಂದು ಕೊಟ್ಟರು.