Saturday, 14th December 2024

ಅಲನ್ ಬಾರ್ಡರ್ ಪದಕ ಜಯಿಸಿದ ಸ್ಟೀವನ್ ಸ್ಮಿತ್

ಸಿಡ್ನಿ: ಆಸ್ಟ್ರೇಲಿಯದ ಮಾಜಿ ನಾಯಕ ಸ್ಟೀವನ್ ಸ್ಮಿತ್ ಆಸ್ಟ್ರೇಲಿಯ ಕ್ರಿಕೆಟ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೂರನೇ ಬಾರಿ ಅಲನ್ ಬಾರ್ಡರ್ ಪದಕ ಜಯಿಸಿದರು. ಬೆಥ್ ಮೂನಿ ಮೊದಲ ಬಾರಿ ಬೆಲಿಂಡಾ ಕ್ಲಾರ್ಕ್ ಪ್ರಶಸ್ತಿ ಬಾಚಿಕೊಂಡರು.

ಮೂರು ಮಾದರಿಯ ಕ್ರಿಕೆಟ್ ನಲ್ಲಿ ನೀಡಿರುವ ಪ್ರದರ್ಶನಕ್ಕಾಗಿ ಸ್ಮಿತ್ ಈ ಗೌರವ ಪಡೆದರು. ಮೂನಿ ಆಸ್ಟ್ರೇಲಿಯ ಮಹಿಳಾ ಕ್ರಿಕೆಟ್ ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದಕ್ಕೆ ಮೊದಲ ಬಾರಿ ಪ್ರಶಸ್ತಿಗೆ ಆಯ್ಕೆಯಾದರು. 2002ರಲ್ಲಿ ಪ್ರಶಸ್ತಿ ಸ್ಥಾಪನೆಯಾದ ಬಳಿಕ ಪ್ರಶಸ್ತಿ ಗೆದ್ದ ಆಸ್ಟ್ರೇಲಿಯದ 9ನೇ ಆಟಗಾರ್ತಿ ಮೂನಿ.

2020-21ರ ಅವಧಿಯ ಮತದಾನದ ಪ್ರಕ್ರಿಯೆಯಲ್ಲಿ ಈ ಪ್ರಶಸ್ತಿಯನ್ನು ನಿರ್ಧರಿಸಲಾಗುತ್ತದೆ. ವರ್ಷದ ಏಕದಿನ ಆಟಗಾರ ಪ್ರಶಸ್ತಿಗೆ ಭಾಜನರಾಗಿದ್ದ ಸ್ಮಿತ್ ಈಗ ಮತ್ತೊಂದು ಪ್ರತಿಷ್ಠಿತ ಪ್ರಶಸ್ತಿ ಪಡೆದರು.