ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

wtc final 2025: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯಕ್ಕೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ

ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಸ್ಟೀವ್ ಸ್ಮಿತ್, ಮಾರ್ಕಸ್ ಲ್ಯಾಬುಶೇನ್ ಮತ್ತು ನಾಥನ್ ಲಿಯಾನ್ ಆಸ್ಟ್ರೇಲಿಯಾ ಟೆಸ್ಟ್ ತಂಡದ ಪ್ರಮುಖ ಆಟಗಾರರಾಗಿ ಕಾಣಿಸಿಕೊಂಡಿದ್ದಾರೆ. ಜೂನ್ 26 ರಿಂದ ಮೂರು ಪಂದ್ಯಗಳ ಟೆಸ್ಟ್ ಸರಣಿಗಾಗಿ ಆಸೀಸ್‌ ತಂಡ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿದೆ.

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯಕ್ಕೆ ಆಸೀಸ್‌ ತಂಡ ಪ್ರಕಟ

Profile Abhilash BC May 13, 2025 1:05 PM

ಸಿಡ್ನಿ: ಜೂನ್ 11 ಮತ್ತು ಜೂನ್ 15 ರ ನಡುವೆ ಲಂಡನ್‌ನ ಲಾರ್ಡ್ಸ್‌ (Lords) ನಲ್ಲಿ ನಡೆಯಲಿಯಲಿರುವ ಮೂರನೇ ಆವೃತ್ತಿಯ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌(wtc final 2025) ಪಂದ್ಯಕ್ಕೆ ಕ್ರಿಕೆಟ್‌ ಆಸ್ಟ್ರೇಲಿಯಾ(Australia squad) ಮಂಗಳವಾರ ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಪ್ಯಾಟ್‌ ಕಮಿನ್ಸ್‌(Pat Cummins) ತಂಡದ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದು, ಸ್ವೀವನ್‌ ಸ್ಮಿತ್‌ ತಂಡದ ಉಪನಾಯಕರಾಗಿದ್ದಾರೆ. ಜೋಶ್ ಹ್ಯಾಜಲ್‌ವುಡ್ ಮತ್ತು ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್ ಮತ್ತೆ ತಂಡಕ್ಕೆ ಕಮ್‌ಬ್ಯಾಕ್‌ ಮಾಡಿದ್ದಾರೆ. ಹಾಲಿ ಚಾಂಪಿಯನ್‌ ಆಗಿರುವ ಆಸ್ಟ್ರೇಲಿಯಾ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸೆಣಸಾಟ ನಡೆಸಲಿದೆ. ಹರಿಣ ಪಡೆಗೆ ಇದು ಚೊಚ್ಚಲ ಫೈನಲ್‌ ಪಂದ್ಯವಾಗಿದೆ.

ಹಿಂದಿನ ಶ್ರೀಲಂಕಾ ಪ್ರವಾಸವನ್ನು ತಪ್ಪಿಸಿಕೊಂಡಿದ್ದ ಜೋಶ್ ಹ್ಯಾಜಲ್‌ವುಡ್ ಮತ್ತು ಪ್ಯಾಟ್ ಕಮ್ಮಿನ್ಸ್ ಮತ್ತೆ ತಂಡಕ್ಕೆ ಮರಳಿದ್ದಾರೆ. ಬೆನ್ನು ನೋವಿನ ಕಾರಣದಿಂದ ಕ್ಯಾಮರೂನ್ ಗ್ರೀನ್, ಭಾರತ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಮತ್ತು ಶ್ರೀಲಂಕಾ ಟೆಸ್ಟ್ ಸರಣಿಯನ್ನು ತಪ್ಪಿಸಿಕೊಂಡಿದ್ದರು. ಇದೀಗ ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಂಡು ಮತ್ತೆ ಮೈದಾಕ್ಕಿಳಿಯಲು ಸಜ್ಜಾಗಿದ್ದಾರೆ.

ಭಾರತ ವಿರುದ್ಧ ಚೊಚ್ಚಲ ಪಂದ್ಯವಾಡಿದ್ದ ಸ್ಯಾಮ್ ಕಾನ್ಸ್ಟಾಸ್ ತಂಡದಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಆದರೆ ನಾಥನ್ ಮೆಕ್‌ಸ್ವೀನಿ ಅವರನ್ನು ತಂಡದಿಂದ ಕೈಬಿಡಲಾಗಿದೆ. ಬ್ರೆಂಡನ್ ಡಾಗೆಟ್ ಪ್ರಯಾಣಿಕ ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದಾರೆ. ಐಸಿಸಿ ಈವೆಂಟ್ ತಾಂತ್ರಿಕ ಸಮಿತಿಯ ಅನುಮೋದನೆಯೊಂದಿಗೆ ಆಸ್ಟ್ರೇಲಿಯಾ ಫೈನಲ್‌ಗೆ ಮೊದಲು ತನ್ನ ತಂಡದಲ್ಲಿ ಬದಲಾವಣೆಗಳನ್ನು ಮಾಡುವ ಅವಕಾಶ ಕೂಡ ಇದೆ.

ಇದನ್ನೂ ಓದಿ IPL 2025 New Schedule: ಪರಿಷ್ಕೃತ ವೇಳಾಪಟ್ಟಿ ಪ್ರಕಟ ಬೆನ್ನಲ್ಲೇ ತಂಡಗಳ ಅಭ್ಯಾಸ ಆರಂಭ

ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಸ್ಟೀವ್ ಸ್ಮಿತ್, ಮಾರ್ಕಸ್ ಲ್ಯಾಬುಶೇನ್ ಮತ್ತು ನಾಥನ್ ಲಿಯಾನ್ ಆಸ್ಟ್ರೇಲಿಯಾ ಟೆಸ್ಟ್ ತಂಡದ ಪ್ರಮುಖ ಆಟಗಾರರಾಗಿ ಕಾಣಿಸಿಕೊಂಡಿದ್ದಾರೆ. ಜೂನ್ 26 ರಿಂದ ಮೂರು ಪಂದ್ಯಗಳ ಟೆಸ್ಟ್ ಸರಣಿಗಾಗಿ ಆಸೀಸ್‌ ತಂಡ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿದೆ. ಈ ಸರಣಿಗೂ ಇದೇ ತಂಡ ಆಡಲಿದೆ.

ಆಸ್ಟ್ರೇಲಿಯಾ ತಂಡ

ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮರೂನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖವಾಜಾ, ಸ್ಯಾಮ್ ಕಾನ್‌ಸ್ಟಾಸ್, ಮ್ಯಾಟ್ ಕುಹ್ನೆಮನ್, ಮಾರ್ನಸ್ ಲಬುಶೇನ್‌, ನಾಥನ್ ಲಿಯಾನ್, ಸ್ಟೀವನ್‌ ಸ್ಮಿತ್ (ಉಪನಾಯಕ), ಮಿಚೆಲ್ ಸ್ಟಾರ್ಕ್, ಬ್ಯೂ ವೆಬ್‌ಸ್ಟರ್. ಪ್ರಯಾಣ ಮೀಸಲು: ಬ್ರೆಂಡನ್ ಡಾಗೆಟ್.