Australia squad: ವಿಂಡೀಸ್ ಟಿ20 ಸರಣಿಗೆ ಆಸೀಸ್ ತಂಡ ಪ್ರಕಟ; ಅನುಭವಿಗಳಿಗೆ ವಿಶ್ರಾಂತಿ
ಮಿಚೆಲ್ ಮಾರ್ಷ್ ತಂಡವನ್ನು ಮುನ್ನಡೆಸಲಿದ್ದು, ಪ್ರಮುಖ ಆಟಗಾರರಾದ ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್ ಮತ್ತು ಟ್ರಾವಿಸ್ ಹೆಡ್ ಈ ಸರಣಿಯಲ್ಲಿ ಆಡುತ್ತಿಲ್ಲ. ಟೆಸ್ಟ್ ಸರಣಿ ಮುಕ್ತಾಯದ ಬಳಿಕ ತವರಿಗೆ ಮರಳಿದ್ದಾರೆ. ಇತ್ತೀಚೆಗೆ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಹೇಳಿದ್ದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಸಿಡ್ನಿ: ಜುಲೈ 21 ರಿಂದ ಪ್ರಾರಂಭವಾಗುವ ವೆಸ್ಟ್ ಇಂಡೀಸ್(West Indies) ವಿರುದ್ಧದ ಮುಂಬರುವ ಐದು ಪಂದ್ಯಗಳ ಟಿ20 ಸರಣಿಗಾಗಿ ಆಸ್ಟ್ರೇಲಿಯಾ 16 ಸದಸ್ಯರ ತಂಡವನ್ನು(Australia squad) ಪ್ರಕಟಿಸಿದೆ. ಸ್ಪೆನ್ಸರ್ ಜಾನ್ಸನ್ ಮತ್ತು ಜೋಶ್ ಹ್ಯಾಜಲ್‌ವುಡ್ ಬದಲಿಗೆ ಜೇಕ್ ಫ್ರೇಸರ್-ಮೆಕ್‌ಗುರ್ಕ್(Fraser-McGurk) ಮತ್ತು ಕ್ಸೇವಿಯರ್ ಬಾರ್ಟ್ಲೆಟ್ ಸ್ಥಾನ ಪಡೆದಿದ್ದಾರೆ.
ಜಾನ್ಸನ್ ಇನ್ನೂ ಬೆನ್ನು ನೋವಿನಿಂದ ಚೇತರಿಸಿಕೊಳ್ಳುತ್ತಿದ್ದು, ಮುಂದಿನ ತಿಂಗಳು ಪ್ರಾರಂಭವಾಗುವ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ತಯಾರಿ ನಡೆಸಲು ಹ್ಯಾಜಲ್‌ವುಡ್ ಈ ಸರಣಿಯಿಂದ ವಿಶ್ರಾಂತಿ ಪಡೆದಿದ್ದಾರೆ. ಆಸ್ಟ್ರೇಲಿಯಾದ ಕೇಂದ್ರ ಒಪ್ಪಂದಗಳಿಂದ ಹೊರಗುಳಿದ ನಂತರ, ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯು ಫ್ರೇಸರ್-ಮೆಕ್‌ಗುರ್ಕ್‌ಗೆ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಛಾಪು ಮೂಡಿಸಲು ಉತ್ತಮ ಅವಕಾಶವನ್ನು ಒದಗಿಸಲಿದೆ.
ಮಿಚೆಲ್ ಮಾರ್ಷ್ ತಂಡವನ್ನು ಮುನ್ನಡೆಸಲಿದ್ದು, ಪ್ರಮುಖ ಆಟಗಾರರಾದ ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್ ಮತ್ತು ಟ್ರಾವಿಸ್ ಹೆಡ್ ಈ ಸರಣಿಯಲ್ಲಿ ಆಡುತ್ತಿಲ್ಲ. ಟೆಸ್ಟ್ ಸರಣಿ ಮುಕ್ತಾಯದ ಬಳಿಕ ತವರಿಗೆ ಮರಳಿದ್ದಾರೆ. ಇತ್ತೀಚೆಗೆ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಹೇಳಿದ್ದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಇದನ್ನೂ ಓದಿ IND vs ENG: 3 ವಿಕೆಟ್ ಕಳೆದುಕೊಂಡು ಭಾರತ ತಂಡಕ್ಕೆ ಕೆಎಲ್ ರಾಹುಲ್ ಆಸರೆ!
ಆಸ್ಟ್ರೇಲಿಯಾ ಟಿ20 ತಂಡ
ಮಿಚೆಲ್ ಮಾರ್ಷ್ (ನಾಯಕ), ಸೀನ್ ಅಬಾಟ್, ಕೂಪರ್ ಕಾನೊಲಿ, ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಕ್ಯಾಮರೂನ್ ಗ್ರೀನ್, ಆರನ್ ಹಾರ್ಡಿ, ಕ್ಸೇವಿಯರ್ ಬಾರ್ಟ್ಲೆಟ್, ಜೋಶ್ ಇಂಗ್ಲಿಸ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಮ್ಯಾಟ್ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚ್ ಓವನ್, ಮ್ಯಾಥ್ಯೂ ಶಾರ್ಟ್, ಆಡಮ್ ಜಂಪಾ.