Sunday, 15th December 2024

ಆಸ್ಟ್ರೇಲಿಯಾ ಟೆಸ್ಟ್ ಟೀಂ ಪ್ರಕಟ: ವಿಲ್ ಪುಕೋವ್ಸ್ಕಿಗೆ ಸ್ಥಾನ

ಮೇಲ್ಬರ್ನ್‌: ಭಾರತದ ವಿರುದ್ಧದ ಟೆಸ್ಟ್ ಸರಣಿಗೆ ಕ್ರಿಕೆಟ್ ಆಸ್ಟ್ರೇಲಿಯಾ 17 ಆಟಗಾರರ ತಂಡವನ್ನು ಪ್ರಕಟಿಸಿದೆ. ವಿರಾಟ್ ಕೊಹ್ಲಿ ನೇತೃತ್ವದ ತಂಡದ ವಿರುದ್ಧ ಡಿಸೆಂಬರ್ 17 ರಿಂದ ಟೆಸ್ಟ್ ಸರಣಿ ಆರಂಭವಾಗಲಿದೆ.

ತಂಡದಲ್ಲಿ ಐವರು ಹೊಸಬರಿಗೆ ಅವಕಾಶ ನೀಡಲಾಗಿದೆ. ಆಸ್ಟ್ರೇಲಿಯಾ ಪ್ರಥಮದರ್ಜೆ ಕ್ರಿಕೆಟ್‌ನಲ್ಲಿ ಮಿಂಚುತ್ತಿರುವ ಆರಂಭಿಕ ಆಟಗಾರ ವಿಲ್ ಪುಕೋವ್ಸ್ಕಿ ತಂಡದಲ್ಲಿ ಸ್ಥಾನವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಆಸ್ಟ್ರೇಲಿಯಾ ಕ್ರಿಕೆಟ್ ತಂಡವನ್ನು ಟಿಮ್ ಪೈನ್ ಮುನ್ನಡೆಸಲಿದ್ದಾರೆ. ನಾಲ್ಕು ಟೆಸ್ಟ್ ಪಂದ್ಯಗಳ ಈ ಸರಣಿಯಲ್ಲಿ ಮೊದಲ ಪಂದ್ಯದಲ್ಲಿ ಮುನ್ನಡೆಸಿದ ಬಳಿಕ ಟೀಮ್ ಒಂಡಿಯಾ ನಾಯಕ ವಿರಾಟ್ ಕೊಹ್ಲಿ ಪಿತೃತ್ವದ ರಜೆಯ ಹಿನ್ನೆಲೆಯಲ್ಲಿ ತವರಿಗೆ ಮರಳಲಿದ್ದಾರೆ. ರಹಾನೆ ಮುಂದಿನ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.

ಆಸ್ಟ್ರೇಲಿಯಾ ಟೆಸ್ಟ್ ತಂಡದ ಉಪನಾಯಕನನ್ನಾಗಿ ಪ್ಯಾಟ್ ಕಮ್ಮಿನ್ಸ್ ಅವರನ್ನು ಹೆಸರಿಸಲಾಗಿದೆ. ಆಸ್ಟ್ರೇಲಿಯಾದ ವೇಗದ ಬೌಲಿಂಗ್ ಪಡೆಯನ್ನು ಇವರೇ ಮುನ್ನಡೆಸಲಿದ್ದಾರೆ. ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್, ಮಾರ್ನಸ್ ಲ್ಯಾಬುಶೈನ್, ಮ್ಯಾಥ್ಯು ವೇಡ್ ಹಾಗೂ ಟಿಮ್ ಪೈನ್ ಆಸಿಸ್ ತಂಡದ ಭಾಗವಾಗಿದ್ದಾರೆ. ಬಲಿಷ್ಠ ಬ್ಯಾಟಿಂಗ್ ಲೈನ್‌ಅಪ್‌ಗೆ ವಿಲ್ ಪುಕೋವ್‌ಸ್ಕಿ ಹಾಗೂ ಕ್ಯಾಮರೂನ್ ಗ್ರೀನ್ ಕೂಡ ಸೇರಿಕೊಂಡಿದ್ದಾರೆ.

ಆಸ್ಟ್ರೇಲಿಯಾ ಟೆಸ್ಟ್ ತಂಡ: ಟಿಮ್ ಪೈನ್ (ನಾಯಕ/ವಿ.ಕೀ), ಜೇಮ್ಸ್ ಪ್ಯಾಟಿನ್ಸನ್, ವಿಲ್ ಪುಕೊವ್ಸ್ಕಿ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಮ್ಯಾಥ್ಯೂ ವೇಡ್(ವಿ.ಕೀ), ಡೇವಿಡ್ ವಾರ್ನರ್, ಸೀನ್ ಅಬಾಟ್, ಜೋ ಬರ್ನ್ಸ್, ಪ್ಯಾಟ್ ಕಮ್ಮಿನ್ಸ್(ಉಪನಾಯಕ), ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಮಾರ್ನಸ್ ಲ್ಯಾಬುಶೈನ್, ನಥನ್ ಲಿಯಾನ್ , ಮೈಕೆಲ್ ನೇಸರ್.