ಟೋಕಿಯೊ: ಟೋಕಿಯೊ ಪ್ಯಾರಾಲಿಂಪಿಕ್ಸ್‌ನ ಮಹಿಳೆಯರ 10 ಮೀಟರ್ ಏರ್ ರೈಫಲ್ ಸ್ಟ್ಯಾಂಡಿಂಗ್ ಎಸ್‌ಎಚ್1 ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿರುವ ಭಾರತದ ಅವನಿ ಲೇಖರಾ ಇದೀಗ ಮಹಿಳೆಯರ 50 ಮೀಟರ್ ಏರ್ ರೈಫಲ್‌ನಲ್ಲಿ ಫೈನಲ್ ಪ್ರವೇಶಿಸಿದ್ದಾರೆ.
1,176 ಪಾಯಿಂಟ್ ಗಳಿಸುವ ಮೂಲಕ ಅವನಿ ಲೇಖರಾ ಪದಕ ಸುತ್ತಿಗೆ ಪ್ರವೇಶಿಸಿದರೆ, ಸ್ವೀಡನ್‌ನ ಅನ್ನಾ ನಾರ್ಮನ್ 1,177 ಪಾಯಿಂಟ್ ಗಳಿಸಿ ವಿಶ್ವ ದಾಖಲೆ ಬರೆಯುವ ಮೂಲಕ ಅರ್ಹತಾ ಸುತ್ತಿಗೆ ಆಯ್ಕೆಯಾದರು.
2016ರ ರಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನ ಗಳಿಸಿದ್ದ ಚೀನಾದ ಝಾಂಗ್ ಕೂಪಿಂಗ್ ಅವರು ಈ ಬಾರಿ 1,171 ಪಾಯಿಂಟ್ ಗಳಿಸಿದ್ದಾರೆ. ರಿಯೊ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಗಳಿಸಿದ್ದ ಸ್ಲೊವಾಕಿಯಾದ ವೆರೋನಿಕಾ ವಾಡೋವಿಕೋವಾ 1,163 ಪಾಯಿಂಟ್ಸ್ ಗಳಿಸಿದ್ದಾರೆ.
ಈ ಬಾರಿಯ ಪ್ಯಾರಾಲಿಂಪಿಕ್ಸ್‌ನಲ್ಲಿ ಅವನಿ ಲೇಖರಾ ಭಾರತಕ್ಕೆ ಮೊದಲ ಚಿನ್ನದ ಪದಕ ತಂದುಕೊಟ್ಟಿದ್ದಾರೆ. ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಪರ ಚಿನ್ನ ಗೆದ್ದ ಮೊದಲ ಮಹಿಳೆ ಎಂಬ ಖ್ಯಾತಿಗೂ ಪಾತ್ರರಾಗಿದ್ದಾರೆ.