Sunday, 15th December 2024

ಡೆಲ್ಲಿ ಕ್ಯಾಪಿಟಲ್ಸ್’ಗೆ ಆಘಾತ: ಅಕ್ಷರ್’ಗೆ ಕೋವಿಡ್ ಸೋಂಕು

ಮುಂಬೈ: ಐಪಿಎಲ್ ಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿರುವಾಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರನಿಗೆ ಕೋವಿಡ್ ಸೋಂಕು ದೃಢವಾಗಿದ್ದು, ಆತಂಕಕ್ಕೆ ಕಾರಣವಾಗಿದೆ.

ತಂಡದ ಆಲ್ ರೌಂಡರ್ ಅಕ್ಷರ್ ಪಟೇಲ್ ಗೆ ಕೋವಿಡ್ ಸೋಂಕು ದೃಢವಾಗಿದೆ. ಅಕ್ಷರ್ ಪಟೇಲ್ ಗೆ ಕೋವಿಡ್ ಪಾಸಿಟಿವ್ ವರದಿಯಾಗಿದೆ. ಅವರು ಐಸಲೋಶನ್ ನಲ್ಲಿದ್ದು, ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಲಾಗುತ್ತಿದೆ” ಎಂದು ಫ್ರಾಂಚೈಸಿ ತಿಳಿಸಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಿತೀಶ್ ರಾಣಾ ಗೆ ಕೋವಿಡ್ ಸೋಂಕು ತಾಗಿತ್ತು. ಸದ್ಯ ಗುಣಮುಖವಾಗಿದ್ದು, ನೆಗೆಟಿವ್ ವರದಿ ಬಂದಿದೆ. ಏಪ್ರಿಲ್ 9ರಂದು 14ನೇ ಆವೃತ್ತಿಯ ಐಪಿಎಲ್ ಆರಂಭವಾಗಲಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡ ತನ್ನ ಮೊದಲ ಪಂದ್ಯವನ್ನು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ವಾಂಖೆಡೆ ಕ್ರೀಡಾಂಗಣದಲ್ಲಿ ಆಡಲಿದೆ.