ಜೈಪುರ: ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಕಾರು ಅಪಘಾತಕ್ಕೀಡಾಗಿದ್ದು, ಸ್ವಲ್ಪದ ರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಜಸ್ಥಾನದ ಸೂರ್ವಾಲದಲ್ಲಿ ಬುಧವಾರ ಘಟನೆ ನಡೆದಿದೆ.
ಪ್ರಾಣಾಪಾಯದಿಂದ ಬಚಾವ್ ಆಗಿದ್ದಾರೆಂದು ಅಜರುದ್ದೀನ್ ಆಪ್ತ ಸಹಾಯಕ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಅಜರ್ ರಣಥಂಬೋರ್ಗೆ ತಮ್ಮ ಕುಟುಂಬದೊಂದಿಗೆ ಆಗಮಿಸುತ್ತಿದ್ದಾಗ ಲಾಲ್ಸೋಟ್ ಕೋಟಾ ಹೈವೇಯಲ್ಲಿ ಅಪಘಾತ ಸಂಭವಿಸಿದೆ. ಮತ್ತೊಂದು ಕಾರಿನಲ್ಲಿ ಅವರನ್ನು ಹೋಟೆಲ್ ಕರೆದೊಯ್ಯಲಾಗಿದೆ.
ಅಜರುದ್ದೀನ್ ಅವರು 99 ಟೆಸ್ಟ್ ಪಂದ್ಯಗಳನ್ನ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದಾರೆ. 1992 ರಿಂದ 1999ರವರೆಗಿನ ಮೂರು ಏಕದಿನ ವಿಶ್ವಕಪ್ ಸರಣಿಯನ್ನು ಅಜರ್ ಟೀಮ್ ಇಂಡಿಯಾ ನಾಯಕತ್ವ ವಹಿಸಿಕೊಂಡಿದ್ದರು.
1996ರ ವಿಶ್ವಕಪ್ ಸರಣಿಯಲ್ಲಿ ಅಜರ್ ಪಡೆ ಸೆಮಿಫೈನಲ್ಗೆ ಪ್ರವೇಶ ಪಡೆದಿತ್ತು.