2026ರ ಟಿ20 ವಿಶ್ವಕಪ್‌ಗಾಗಿ ಭಾರತ ಪ್ರಯಾಣದಿಂದ ಅಧಿಕೃತವಾಗಿ ಹಿಂದೆ ಸರಿದ ಬಾಂಗ್ಲಾ
T20 World Cup 2026: ಬಹುರಾಷ್ಟ್ರೀಯ ಪಂದ್ಯಾವಳಿಗಾಗಿ ಭಾರತಕ್ಕೆ ಪ್ರಯಾಣಿಸದಿರಲು ಭದ್ರತಾ ಕಾಳಜಿ ಕಾರಣವೆಂದು ಬಿಸಿಬಿ ಉಲ್ಲೇಖಿಸಿದೆ. ಐಸಿಸಿಗೆ ಕಳುಹಿಸಲಾದ ಇಮೇಲ್‌ನಲ್ಲಿ, ಬಿಸಿಬಿ, "ಭದ್ರತಾ ಕಾಳಜಿಯಿಂದಾಗಿ, ಟಿ20 ವಿಶ್ವಕಪ್‌ಗಾಗಿ ತಂಡವನ್ನು ಭಾರತಕ್ಕೆ ಕಳುಹಿಸಲು ಸಾಧ್ಯವಿಲ್ಲ" ಎಂದು ಬಾಂಗ್ಲಾ ಕ್ರಿಕೆಟ್ ಮಂಡಳಿ ಹೇಳಿದೆ.
bangladesh cricket team -
ಢಾಕಾ, ಜ.4: ಭದ್ರತಾ ಕಳವಳಗಳನ್ನು ಉಲ್ಲೇಖಿಸಿ ಟಿ20 ವಿಶ್ವಕಪ್(T20 World Cup 2026) ಟೂರ್ನಿಯ ಪಂದ್ಯವನ್ನಾಡಲು ಬಾಂಗ್ಲಾದೇಶ ತಂಡ ಭಾರತಕ್ಕೆ ಪ್ರಯಾಣಿಸುವುದಿಲ್ಲ ಎಂದು ಭಾನುವಾರ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ದೃಢಪಡಿಸಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026 ಕ್ಕಿಂತ ಮೊದಲು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡದಿಂದ ಮುಸ್ತಾಫಿಜುರ್ ರೆಹಮಾನ್ ಅವರನ್ನು ಬಿಡುಗಡೆ ಮಾಡಿದ ವಿವಾದದ ಮಧ್ಯೆ ಈ ನಿರ್ಧಾರ ಬಂದಿದೆ.
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಆಗುತ್ತಿರುವ ದೌರ್ಜನ್ಯವನ್ನು ಖಂಡಿಸಬೇಕೆನ್ನುವ ನಿಲುವು ತಾಳಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ), ಬಾಂಗ್ಲಾದ ತಾರಾ ವೇಗಿ ಮುಸ್ತಾಫಿಜುರ್ ರಹಮಾನ್‌ರನ್ನು ಮುಂಬರುವ ಐಪಿಎಲ್‌ನಿಂದ ಹೊರಹಾಕಿಸಿದೆ. ಬಿಸಿಸಿಐ ಸೂಚನೆ ಮೇರೆಗೆ ಮುಸ್ತಾಫಿಜುರ್‌ರನ್ನು ತಂಡದಿಂದ ಕೈಬಿಟ್ಟಿರುವುದಾಗಿ ಕೆಕೆಆರ್ ತಂಡ ಶನಿವಾರ ಪ್ರಕಟಣೆಯಲ್ಲಿ ತಿಳಿಸಿತ್ತು. ಇದರ ಬೆನ್ನಲ್ಲೇ ಬಾಂಗ್ಲಾ ಕ್ರಿಕೆಟ್ ಮಂಡಳಿ ಬಿಸಿಸಿಐ ವಿರುದ್ಧ ಸೇಡು ತೀರಿಸಿಕೊಳ್ಳುವ ನಿರ್ಧಾರ ಕೈಗೊಂಡಿದೆ.
ಬಹುರಾಷ್ಟ್ರೀಯ ಪಂದ್ಯಾವಳಿಗಾಗಿ ಭಾರತಕ್ಕೆ ಪ್ರಯಾಣಿಸದಿರಲು ಭದ್ರತಾ ಕಾಳಜಿ ಕಾರಣವೆಂದು ಬಿಸಿಬಿ ಉಲ್ಲೇಖಿಸಿದೆ. ಐಸಿಸಿಗೆ ಕಳುಹಿಸಲಾದ ಇಮೇಲ್‌ನಲ್ಲಿ, ಬಿಸಿಬಿ, "ಭದ್ರತಾ ಕಾಳಜಿಯಿಂದಾಗಿ, ಟಿ20 ವಿಶ್ವಕಪ್‌ಗಾಗಿ ತಂಡವನ್ನು ಭಾರತಕ್ಕೆ ಕಳುಹಿಸಲು ಸಾಧ್ಯವಿಲ್ಲ" ಎಂದು ಹೇಳಿದೆ.
ಭಾನುವಾರ ಮಧ್ಯಾಹ್ನ, 17 ಬಿಸಿಬಿ ನಿರ್ದೇಶಕರು ಸಭೆ ಸೇರಿ ಟಿ20 ವಿಶ್ವಕಪ್‌ಗೆ ಸಂಬಂಧಿಸಿದಂತೆ ಹೊಸ ನಿರ್ಧಾರಕ್ಕೆ ಬಂದರು, ಬಾಂಗ್ಲಾದೇಶ ತನ್ನ ಯಾವುದೇ ವಿಶ್ವಕಪ್ ಪಂದ್ಯಗಳನ್ನು ಭಾರತದ ನೆಲದಲ್ಲಿ ಆಡುವುದಿಲ್ಲ ಎಂದು ನಿರ್ಧರಿಸಿದರು. ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯು ತನ್ನ ಆಟಗಾರರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಸರ್ಕಾರಿ ಸಲಹೆಗಾರ ಆಸಿಫ್ ನಜ್ರುಲ್, ಒಪ್ಪಂದ ಮಾಡಿಕೊಂಡಿದ್ದರೂ ಬಾಂಗ್ಲಾದೇಶದ ಕ್ರಿಕೆಟಿಗರು ಭಾರತದಲ್ಲಿ ಆಡಲು ಸಾಧ್ಯವಾಗದಿದ್ದರೆ, ಇಡೀ ತಂಡವು ವಿಶ್ವಕಪ್‌ಗಾಗಿ ಭಾರತಕ್ಕೆ ಪ್ರಯಾಣಿಸಲು ಸುರಕ್ಷಿತವಾಗಿರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಟಿ20 ವಿಶ್ವಕಪ್‌ಗೆ ಬಾಂಗ್ಲಾ ತಂಡ ಪ್ರಕಟ; ಹಿಂದೂ ವ್ಯಕ್ತಿ ನಾಯಕ
ಬಿಸಿಬಿಯ ಮನವಿಗೆ ಐಸಿಸಿ ಇನ್ನೂ ಪ್ರತಿಕ್ರಿಯಿಸಿಲ್ಲ, ಆದರೆ ಬಿಸಿಸಿಐ ಪಂದ್ಯಗಳನ್ನು ಸ್ಥಳಾಂತರಿಸುವ ಕಲ್ಪನೆಯನ್ನು ಅಸಾಧ್ಯ ಎಂದು ಹೇಳಿದೆ. ಭಾರತ ಮಾತ್ರವಲ್ಲದೆ ಶ್ರೀಲಂಕಾದಲ್ಲಿಯೂ ಟಿ20 ವಿಶ್ವಕಪ್ ನಡೆಯುತ್ತಿರುವ ಕಾರಣ ಬಾಂಗ್ಲಾದೇಶ ಇರುವ ಗುಂಪಿನ ಪಂದ್ಯಗಳನ್ನು ಲಂಕಾದಲ್ಲಿ ನಡೆಸಿ, ಲಂಕಾದಲ್ಲಿ ನಡೆಯುವ ಯಾವುದಾದರು ಒಂದು ಗುಂಪಿನ ಪಂದ್ಯವನ್ನು ಭಾರತದಲ್ಲಿ ನಡೆಸುವ ಅವಕಾಶ ಐಸಿಸಿ ಮುಂದಿದೆ. ಆದರೆ ಐಸಿಸಿ ಯಾವ ನಿರ್ಧಾರ ಕೈಗೊಳ್ಳಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.