ಕೋಲ್ಕತ್ತಾ: ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಆಸೀಸ್ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ಗೆ ಇಳಿದಿರುವ ದಕ್ಷಿಣ ಆಫ್ರಿಕಾ ತಂಡಕ್ಕೆ ಆರಂಭಿಕ ಆಘಾತ ಎದುರಾಗಿದೆ.
2023ರ ಏಕದಿನ ವಿಶ್ವಕಪ್ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಆಸ್ಟ್ರೇಲಿಯಾ ಬೌಲಿಂಗ್ ನಡೆಸಿದ್ದು, ಆರಂಭದಲ್ಲೇ ಹರಿಣಗಳ ವಿಕೆಟ್ ಪಡೆಯುವ ಮೂಲಕ ಉತ್ತಮ ಲಯ ಕಂಡಿದೆ. ಆಫ್ರಿಕಾ 14 ಓವರ್ಗಳಿಗೆ 4 ವಿಕೆಟ್ ನಷ್ಟಕ್ಕೆ 44 ರನ್ ಕಲೆ ಹಾಕಿ್ದಾಗ, ಮಳೆಯಿಂದ ಪಂದ್ಯವನ್ನು ತಾತ್ಕಾಲಿಕ ಸ್ಥಗಿತ ಗೊಂಡಿತ್ತು.
ಬಳಿಕ ಸ್ಪೋಟಕ ಬ್ಯಾಟ್ಸ್ ಮನ್ ಮಿಲ್ಲರ್ ಹಾಗೂ ಕ್ಲಾಸೆನ್ ಇದುವರೆಗೂ ಐದನೇ ವಿಕೆಟಿಗೆ 75 ರನ್ ಪೇರಿಸಿದ್ದು, ಸವಾಲಿನ ಮೊತ್ತ ಪೇರಿಸುವತ್ತ ದಾಪುಗಾಲು ಹಾಕಿದ್ದಾರೆ.
ಲೀಗ್ ಹಂತದಲ್ಲಿ ದಕ್ಷಿಣ ಆಫ್ರಿಕಾ ಆಡಿರುವ 9 ಪಂದ್ಯಗಳ ಪೈಕಿ 2ರಲ್ಲಿ ಸೋತು, 7 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನ ನೀಡಿದ್ದರಿಂದ 14 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿತು.
ಹರಿಣಗಳ ಪಡೆಯಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಪಿಚ್ ಸ್ಪಿನ್ನರ್‌ಗಳಿಗೆ ನೆರವಾಗುವ ಹಿನ್ನೆಲೆ ಲುಂಗಿ ಎನ್‌ಗಿಡಿ ಬದಲಿಗೆ ತಬ್ರೈಜ್ ಶಮ್ಸಿ ತಂಡಕ್ಕೆ ಮರಳಿದ್ದಾರೆ. ಆಸೀಸ್ ತಂಡದ ಪ್ರಮುಖ ಆಟಗಾರರಾದ ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಮಿಚೆಲ್ ಸ್ಟಾರ್ಕ್ ಆಡುವ ಬಳಗಕ್ಕೆ ಮರಳಿದ್ದಾರೆ.
ಆಸ್ಟ್ರೇಲಿಯಾ (ಪ್ಲೇಯಿಂಗ್ XI): ಟ್ರಾವಿಸ್ ಹೆಡ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್.
ದಕ್ಷಿಣ ಆಫ್ರಿಕಾ (ಪ್ಲೇಯಿಂಗ್ XI): ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಜೆರಾಲ್ಡ್ ಕೊಯೆಟ್ಜಿ, ಕಗಿಸೊ ರಬಾಡ, ತಬ್ರೈಜ್ ಶಮ್ಸಿ.