ಅಂಡರ್-19 ಮಹಿಳಾ ಟಿ20 ವಿಶ್ವಕಪ್ ಗೆದ್ದ ಭಾರತಕ್ಕೆ 5 ಕೋಟಿ ರೂ. ಬಹುಮಾನ!
U-19 women's India team: ಮಲೇಷ್ಯಾದಲ್ಲಿ ಭಾನುವಾರ ಅಂಡರ್-19 ಮಹಿಳಾ ಟಿ20 ವಿಶ್ವಕಪ್ ಗೆದ್ದಿದ್ದ ಭಾರತ ತಂಡಕ್ಕೆ 5 ಕೋಟಿ ರೂ. ಗಳ ನಗದು ಬಹುಮಾನವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘೋಷಿಸಿದೆ. ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡ 9 ವಿಕೆಟ್‌ಗಳಿಂದ ಗೆಲುವು ಪಡೆದಿತ್ತು.
ನವದೆಹಲಿ: ಮಲೇಷ್ಯಾದ ಕೌಲಾಲಂಪುರದಲ್ಲಿ ನಡೆದಿದ್ದ 2025ರ ಅಂಡರ್-19 ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದಿದ್ದ ಭಾರತ ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) 5 ಕೋಟಿ ರೂ. ಗಳ ನಗದು ಬಹುಮಾನವನ್ನು ಘೋಷಿಸಿದೆ. ಭಾನುವಾರ ನಡೆದಿದ್ದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ಭಾರತ ತಂಡ 9 ವಿಕೆಟ್‌ಗಳಿಂದ ಗೆಲುವು ಪಡೆದಿತ್ತು. ಆ ಮೂಲಕ ಸತತ ಎರಡನೇ ಬಾರಿ ಅಂಡರ್-19 ಮಹಿಳಾ ಟಿ20 ವಿಶ್ವಕಪ್ ಅನ್ನು ಮುಡಿಗೇರಿಸಿಕೊಂಡಿತ್ತು. 2023ರಲ್ಲಿ ಶಫಾಲಿ ವರ್ಮಾ ನಾಯಕತ್ವದಲ್ಲಿ ಭಾರತ ಈ ಪ್ರಶಸ್ತಿಯನ್ನು ಗೆದ್ದಿತ್ತು. ಅಂದ ಹಾಗೆ ಭಾರತ ತಂಡ ಈ ಟೂರ್ನಿಯಲ್ಲಿ ಆಡಿದ 7 ಪಂದ್ಯಗಳನ್ನು ಗೆದ್ದು ಅಜೇಯವಾಗಿ ಉಳಿದಿದೆ.
ಅಂಡರ್-19 ಮಹಿಳಾ ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ಆಟಗಾರ್ತಿಯರು ಹಾಗೂ ಸಹಾಯಕ ಸಿಬ್ಬಂದಿಗೆ ಸೇರಿ ಎಲ್ಲರಿಗೂ ಬಿಸಿಸಿಐ ಇದೀಗ ನಗದು ಬಹುಮಾನವನ್ನು ಘೋಷಿಸಿದೆ. ವಯೋಮಿತಿ ಟೂರ್ನಿಯಲ್ಲಿ ಆಡಿದ ಎಲ್ಲಾ ಪಂದ್ಯಗಳಲ್ಲಿ ಪ್ರಾಬಲ್ಯ ಸಾಧಿಸಿದ ಭಾರತದ ಆಟಗಾರ್ತಿಯರನ್ನು ಬಿಸಿಸಿಐ ತನ್ನ ಅಧಿಕೃತ ಹೇಳಿಕೆಯಲ್ಲಿ ಗುಣಗಾನ ಮಾಡಿದೆ.
ದಕ್ಷಿಣ ಆಫ್ರಿಕಾವನ್ನು ಮಣಿಸಿ ಸತತ 2ನೇ ಬಾರಿ ಅಂಡರ್-19 ಮಹಿಳಾ ಟಿ20 ವಿಶ್ವಕಪ್ ಗೆದ್ದ ಭಾರತ!
"ಮಲೇಷ್ಯಾದಲ್ಲಿ ನಡೆದಿದ್ದ 2025ರ ಅಂಡರ್-19 ಮಹಿಳಾ ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ಪ್ರತಿಯೊಬ್ಬರಿಗೂ ಹೃದಯ ಪೂರ್ವಕ ಅಭಿನಂದನೆಗಳು. ನೀವು ಸತತ ಎರಡನೇ ಬಾರಿ ಟಿ20 ವಿಶ್ವಕಪ್ ಅನ್ನು ತನ್ನಲ್ಲಿಯೇ ಉಳಿಸಿಕೊಂಡಿದ್ದೀರಿ. ಈ ಟೂರ್ನಿಯಲ್ಲಿ ಅಸಾಧಾರಣ ಪ್ರದರ್ಶನ ತೋರಿರುವ ಹೆಡ್ ಕೋಚ್ ನೋಸಿನ್ ಅಲ್ ಖಾದೀರ್ ಮಾರ್ಗದರ್ಶನದ ಭಾರತ ತಂಡದ ಆಟಗಾರ್ತಿಯರು ಹಾಗೂ ಸಹಾಯಕ ಸಿಬ್ಬಂದಿಗೆ 5 ಕೋಟಿ ರೂ. ಗಳನ್ನು ನಗದು ಬಹುಮಾನವನ್ನು ನೀಡಲಾಗುವುದು," ಎಂದು ಬಿಸಿಸಿಐ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ಅಂಡರ್-19 ಮಹಿಳಾ ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಕ್ರಿಕೆಟ್ ದಿಗ್ಗಜರ ಸಲಾಂ!
ಭಾರತ ತಂಡಕ್ಕೆ 9 ವಿಕೆಟ್ ಜಯ
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ತಂಡ ಕೇವಲ 82 ರನ್‌ಗಳಿಗೆ ಆಲೌಟ್ ಆಗಿತ್ತು. ಬಳಿಕ ಗುರಿ ಹಿಂಬಾಲಿಸಿದ್ದ ಭಾರತ ತಂಡ ಕೇವಲ ಒಂದು ವಿಕೆಟ್ ಕಳೆದುಕೊಂಡು ಗೆಲುವಿನ ಗಡಿ ದಾಟಿತ್ತು. ಆ ಮೂಲಕ ಭಾರತ ತಂಡಕ್ಕೆ ಇದು ಆರನೇ ಗೆಲುವಾಯಿತು. ಇದಕ್ಕೂ ಮೊದಲು, ಭಾರತ ತಂಡವು ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ತಂಡವನ್ನು 9 ವಿಕೆಟ್‌ಗಳಿಂದ ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟಿತ್ತು. 2023 ರಲ್ಲಿ ಶಫಾಲಿ ವರ್ಮಾ ನಾಯಕತ್ವದಲ್ಲಿ ಭಾರತ ತಂಡವು ಈ ಟ್ರೋಫಿಯನ್ನು ಗೆದ್ದುಕೊಂಡಿತು.
𝗖. 𝗛. 𝗔. 𝗠. 𝗣. 𝗜. 𝗢. 𝗡. 𝗦! 🏆#TeamIndia 🇮🇳 are the ICC U19 Women’s T20 World Cup 2025 Champions 👏 👏
— BCCI Women (@BCCIWomen) February 2, 2025
Scorecard ▶️ https://t.co/hkhiLzuLwj #SAvIND | #U19WorldCup pic.twitter.com/MuOEENNjx8
ದಕ್ಷಿಣ ಆಫ್ರಿಕಾ ವಿರುದ್ಧದ ಫೈನಲ್ ಹಣಾಹಣಿಯಲ್ಲಿ ಬೌಲರ್‌ಗಳ ಅದ್ಭುತ ಪ್ರದರ್ಶನದ ನಂತರ, ಭಾರತೀಯ ಬ್ಯಾಟ್ಸ್‌ಮನ್‌ಗಳು ಕೂಡ ಮಿಂಚಿನ ಪ್ರದರ್ಶನವನ್ನು ತೋರಿದ್ದರು. 82 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಭಾರತ ತಂಡ, ಕೇವಲ ಒಂದು ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತ್ತು. ಟೀಮ್ ಇಂಡಿಯಾ ಆರಂಭಿಕ ಆಟಗಾರ್ತಿ ಜಿ ಕಾಮಿನಿ ಕೇವಲ 8 ರನ್ ಗಳಿಸಿ ಔಟಾದರು. ಆದರೆ, ಮತ್ತೊರ್ವ ಆರಂಭಿಕ ಆಟಗಾರ್ತಿ ಮತ್ತು ಟೂರ್ನಿಯ ಅತಿ ಹೆಚ್ಚು ರನ್ ಗಳಿಸಿದ ಜಿ ತ್ರಿಷಾ 33 ಎಸೆತಗಳಲ್ಲಿ ಅಜೇಯ 44 ರನ್ ಗಳಿಸಿದರು. ಸನಿಕಾ ಚಾಲ್ಕೆ 22 ಎಸೆತಗಳಲ್ಲಿ 26 ರನ್ ಗಳಿಸಿ ಅಜೇಯರಾಗುಳಿದರು.