ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Shreyas Iyer: ಇಂಡಿಯಾ ಎ ತಂಡ ಪ್ರಕಟ; ಅಯ್ಯರ್‌ಗೆ ನಾಯಕತ್ವದ ಹೊಣೆ

ಪ್ರಸ್ತುತ ನಡೆಯುತ್ತಿರುವ ಏಷ್ಯಾಕಪ್‌ ತಂಡದಲ್ಲಿರುವ ಹರ್ಷಿತ್ ರಾಣಾ ಮತ್ತು ಅರ್ಶ್‌ದೀಪ್ ಸಿಂಗ್ ಅವರನ್ನು ಅಕ್ಟೋಬರ್ 3 ಮತ್ತು 5 ರಂದು ನಡೆಯಲಿರುವ 2 ಮತ್ತು 3ನೇ ಏಕದಿನ ಪಂದ್ಯಕ್ಕೆ ಆಯ್ಕೆ ಮಾಡಲಾಗಿದೆ. ಅಯ್ಯರ್ ಜೊತೆಗೆ ರವಿ ಬಿಷ್ಣೋಯ್, ವಿಕೆಟ್ ಕೀಪರ್-ಬ್ಯಾಟರ್ ಪ್ರಭ್‌ಸಿಮ್ರಾನ್ ಸಿಂಗ್, ರಿಯಾನ್ ಪರಾಗ್ ಮತ್ತು ಆಯುಷ್ ಬಡೋನಿ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಇಂಡಿಯಾ ಎ ತಂಡ ಪ್ರಕಟ; ಶ್ರೇಯಸ್‌ ಅಯ್ಯರ್‌ ನಾಯಕ

-

Abhilash BC Abhilash BC Sep 25, 2025 1:41 PM

ನವದೆಹಲಿ: ಟೀಮ್‌ ಇಂಡಿಯಾದ ಮಧ್ಯಮ ಕ್ರಮಾಂಕದ ಸ್ಟಾರ್‌ ಬ್ಯಾಟರ್‌ ಶ್ರೇಯಸ್ ಅಯ್ಯರ್(Shreyas Iyer) ಅವರು ರೆಡ್-ಬಾಲ್ ಕ್ರಿಕೆಟ್‌ನಿಂದ ಆರು ತಿಂಗಳ ವಿರಾಮ ಕೋರಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಗುರುವಾರ ಅಧಿಕೃತವಾಗಿ ದೃಢಪಡಿಸಿದೆ. 2023ರಲ್ಲಿ ಯುಕೆಯಲ್ಲಿ ಅಯ್ಯರ್ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ ಅಯ್ಯರ್ ಅವರ ಬೆನ್ನಿನ ಸಮಸ್ಯೆಗಳು ಪದೇ ಪದೇ ಉದ್ಭವಿಸುತ್ತಿರುವುದರಿಂದ ಅಯ್ಯರ್‌ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಆದರೆ ಸೆಪ್ಟೆಂಬರ್ 30 ರಿಂದ ಆಸ್ಟ್ರೇಲಿಯಾ ಎ ವಿರುದ್ಧ ಎರಡು ಪಂದ್ಯಗಳ ಅನಧಿಕೃತ ಏಕದಿನ ಸರಣಿಗೆ ಅಯ್ಯರ್ ಅವರನ್ನು ನಾಯಕನಾಗಿ ನೇಮಿಸಲಾಗಿದೆ.

"ಶ್ರೇಯಸ್ ಅಯ್ಯರ್ ಅವರು ರೆಡ್‌ ಬಾಲ್‌ ಕ್ರಿಕೆಟ್‌ನಿಂದ ಆರು ತಿಂಗಳ ವಿರಾಮ ತೆಗೆದುಕೊಳ್ಳುವ ನಿರ್ಧಾರವನ್ನು ಬಿಸಿಸಿಐಗೆ ತಿಳಿಸಿದ್ದಾರೆ. ಸಹಿಷ್ಣುತೆ, ದೇಹದ ಸ್ಥಿತಿಸ್ಥಾಪಕತ್ವ ಮತ್ತು ಫಿಟ್‌ನೆಸ್‌ನಲ್ಲಿ ಕೆಲಸ ಮಾಡಲು ಈ ಅವಧಿಯನ್ನು ಬಳಸಿಕೊಳ್ಳಲು ಅವರು ಬಯಸಿದ್ದಾರೆ. ಅವರ ನಿರ್ಧಾರವನ್ನು ಗಮನದಲ್ಲಿಟ್ಟುಕೊಂಡು, ಅವರನ್ನು ಇರಾನಿ ಕಪ್‌ಗೆ ಆಯ್ಕೆ ಮಾಡಲು ಪರಿಗಣಿಸಲಾಗಿಲ್ಲ" ಎಂದು ಬಿಸಿಸಿಐ ಹೇಳಿಕೆ ತಿಳಿಸಿದೆ.

ಪ್ರಸ್ತುತ ನಡೆಯುತ್ತಿರುವ ಏಷ್ಯಾಕಪ್‌ ತಂಡದಲ್ಲಿರುವ ಹರ್ಷಿತ್ ರಾಣಾ ಮತ್ತು ಅರ್ಶ್‌ದೀಪ್ ಸಿಂಗ್ ಅವರನ್ನು ಅಕ್ಟೋಬರ್ 3 ಮತ್ತು 5 ರಂದು ನಡೆಯಲಿರುವ 2 ಮತ್ತು 3ನೇ ಏಕದಿನ ಪಂದ್ಯಕ್ಕೆ ಆಯ್ಕೆ ಮಾಡಲಾಗಿದೆ. ಅಯ್ಯರ್ ಜೊತೆಗೆ ರವಿ ಬಿಷ್ಣೋಯ್, ವಿಕೆಟ್ ಕೀಪರ್-ಬ್ಯಾಟರ್ ಪ್ರಭ್‌ಸಿಮ್ರಾನ್ ಸಿಂಗ್, ರಿಯಾನ್ ಪರಾಗ್ ಮತ್ತು ಆಯುಷ್ ಬಡೋನಿ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಅಯ್ಯರ್‌ ವಿಶ್ರಾಂತಿ ಪಡೆದ ಕಾರಣ ಅ. 1 ರಿಂದ ನಾಗ್ಪುರದಲ್ಲಿ ವಿದರ್ಭ ವಿರುದ್ಧ ನಡೆಯಲಿರುವ ಇರಾನಿ ಕಪ್ ಪಂದ್ಯಕ್ಕೆ ರೆಸ್ಟ್ ಆಫ್ ಇಂಡಿಯಾ ನಾಯಕರನ್ನಾಗಿ ರಜತ್ ಪಾಟಿದಾರ್ ಅವರನ್ನು ನೇಮಿಸಲಾಗಿದೆ.

ಮೊದಲ ಏಕದಿನ ಪಂದ್ಯಕ್ಕೆ ಭಾರತ ಎ ತಂಡ

ಶ್ರೇಯಸ್ ಅಯ್ಯರ್ (ನಾಯಕ), ಪ್ರಭ್‌ಸಿಮ್ರಾನ್ ಸಿಂಗ್ (ವಿಕೆ), ರಿಯಾನ್ ಪರಾಗ್, ಆಯುಷ್ ಬದೋನಿ, ಸೂರ್ಯಾಂಶ್ ಶೆಡ್ಗೆ, ವಿಪ್ರಜ್ ನಿಗಮ್, ನಿಶಾಂತ್ ಸಿಂಧು, ಗುರ್ಜಪ್‌ನೀತ್ ಸಿಂಗ್, ಯುದ್‌ವೀರ್ ಸಿಂಗ್, ರವಿ ಬಿಷ್ಣೋಯ್, ಅಭಿಷೇಕ್ ಪೋರೆಲ್, ಪ್ರಿಯಾಂಶ್ ಆರ್ಯ, ಸಿಮರ್ಜೀತ್ ಸಿಂಗ್.

2 ಮತ್ತು 3ನೇ ಏಕದಿನ ಪಂದ್ಯಗಳಿಗೆ ಭಾರತ ಎ ತಂಡ

ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪ ನಾಯಕ), ಅಭಿಷೇಕ್ ಶರ್ಮಾ, ಪ್ರಭ್‌ಸಿಮ್ರಾನ್ ಸಿಂಗ್ (ವಿಕೀ), ರಿಯಾನ್ ಪರಾಗ್, ಆಯುಷ್ ಬದೋನಿ, ಸೂರ್ಯಾಂಶ್ ಶೆಡ್ಗೆ, ವಿಪ್ರಜ್ ನಿಗಮ್, ನಿಶಾಂತ್ ಸಿಂಧು, ಗುರ್ಜಪ್‌ನೀತ್ ಸಿಂಗ್, ಯುದ್‌ವೀರ್ ಸಿಂಗ್, ರವಿ ಬಿಷ್ಣೋಯ್, ಅಭಿಷೇಕ್ ಪೋರೆಲ್, ಹರ್ಷಿತ್ ರಾಣಾ, ಆರ್ಷದೀಪ್ ಸಿಂಗ್.

ಇದನ್ನೂ ಓದಿ ವೆಸ್ಟ್‌ ಇಂಡೀಸ್‌ ಟೆಸ್ಟ್‌ ಸರಣಿಗೆ ಭಾರತ ತಂಡ ಪ್ರಕಟ; ಕರುಣ್‌ಗೆ ಕರುಣೆ ತೋರದ ಆಯ್ಕೆ ಸಮಿತಿ

ರೆಸ್ಟ್ ಆಫ್ ಇಂಡಿಯಾ (ಇರಾನಿ ಕಪ್)

ರಜತ್ ಪಾಟಿದಾರ್ ( ನಾಯಕ), ಅಭಿಮನ್ಯು ಈಶ್ವರನ್, ಆರ್ಯನ್ ಜುಯಲ್ (ವಿಕೀ), ರುತುರಾಜ್ ಗಾಯಕ್‌ವಾಡ್ (ಉಪ ನಾಯಕ), ಯಶ್ ಧುಲ್, ಶೇಖ್ ರಶೀದ್, ಇಶಾನ್ ಕಿಶನ್ (ವಿಕೀ), ತನುಷ್ ಕೋಟ್ಯಾನ್, ಮಾನವ್ ಸುತಾರ್, ಗುರ್‌ನೂರ್ ಬ್ರಾರ್, ಖಲೀಲ್ ಅಹಮದ್, ಆಕಾಶ್ ದೀಪ್, ಅನ್‌ಶುಲ್ ಕಂಬೋಜ್, ಸರಾಂಶ್ ಜೈನ್.