ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Mohsin Naqvi: ಮೊಹ್ಸಿನ್ ನಖ್ವಿ ವಿರುದ್ಧ ಬಿಸಿಸಿಐ ವಿಚಾರಣೆ; ಐಸಿಸಿಗೆ ದೂರು

ಪಹಲ್ಗಾಂ ದಾಳಿ ಕಾರಣ ಭಾರತೀಯ ಆಟಗಾರರು ನಖ್ವಿ ಕೈಯಿಂದ ಟ್ರೋಫಿ, ಪದಕ ಸ್ವೀಕರಿಸಲು ಸಿದ್ಧರಿರಲಿಲ್ಲ. ಬದಲಾಗಿ, ವೇದಿಕೆ ಮೇಲಿದ್ದ ಬೇರೆ ಯಾವುದೇ ಗಣ್ಯರಿಂದ ಟ್ರೋಫಿ ಸ್ವೀಕರಿಸಲು ಭಾರತ ತಯಾರಿತ್ತು. ಆದರೆ ಪಟ್ಟುಬಿಡದ ನಖ್ವಿ ತನ್ನ ಕೈಗಳಿಂದಲೇ ಟ್ರೋಫಿ ಸ್ವೀಕರಿಸಬೇಕು ಎನ್ನುವ ಜಿದ್ದಿಗೆ ಬಿದ್ದು ಕೊನೆಗೆ ಟ್ರೋಫಿಯನ್ನೇ ಹೊತ್ತೊಯ್ದಿದ್ದರು.

ನವದೆಹಲಿ: ಮಂಗಳವಾರ ನಡೆದ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಸಭೆಯಲ್ಲಿ ಎಸಿಸಿ ಮುಖ್ಯಸ್ಥ ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಮೊಹ್ಸಿನ್ ನಖ್ವಿ(Mohsin Naqvi) ಅವರ ಗೂಂಡಾ ವರ್ತನೆಗೆ ಬಿಸಿಸಿಐ ತೀವ್ರ ಆಕ್ಷೇಪ ವ್ಯಕ್ತಪಡಿಸಿತು. ಮತ್ತು ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಐಸಿಸಿಗೂ ದೂರು ನೀಡಿತು.

ದುಬೈನಲ್ಲಿ ಭಾನುವಾರ ರಾತ್ರಿ ನಡೆದ ಏಷ್ಯಾಕಪ್‌ ಫೈನಲ್‌ನಲ್ಲಿ ಪಾಕಿಸ್ತಾನವನ್ನು ಮಣಿಸಿ ಭಾರತ ಚಾಂಪಿಯನ್‌ ಆಗಿತ್ತು. ಟ್ರೋಫಿ ಎತ್ತಿಹಿಡಿಯಲು ಸಿದ್ಧವಿದ್ಧ ಭಾರತಕ್ಕೆ ಪಾಕಿಸ್ತಾನದ ಗೃಹ ಸಚಿವರೂ ಆದ ಏಷ್ಯಾ ಕ್ರಿಕೆಟ್‌ ಮಂಡಳಿ (ಎಸಿಸಿ) ಅಧ್ಯಕ್ಷ ಮೊಹ್ಸಿನ್‌ ನಖ್ವಿಯಿಂದ ಅನ್ಯಾಯವಾಗಿತ್ತು. ಭಾರತೀಯರು ಕಪ್‌ ಸ್ವೀಕರಿಸಲು ನಿರಾಕರಿಸಿದ ಬಳಿಕ ನಖ್ವಿ ಅವರು ಟ್ರೋಫಿಯನ್ನೇ ಹೊತ್ತೊಯ್ದ ಅಪರೂಪದ, ಉದ್ಧಟತನದಿಂದ ಕೂಡಿದ್ದ ಘಟನೆ ನಡೆದಿತ್ತು. ವಿಶ್ವ ಕ್ರಿಕೆಟ್‌ ಇತಿಹಾಸದಲ್ಲೇ ಈ ರೀತಿಯ ನಾಟಕೀಯ ಬೆಳವಣಿಗೆ ಭಾರೀ ಸದ್ದು ಮಾಡಿತ್ತು.

ಮಂಗಳವಾರ ನಡೆದ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಸಭೆಯಲ್ಲಿ ಬಿಸಿಸಿಐ ಅನ್ನು ಪ್ರತಿನಿಧಿಸುವ ಸಭೆಯಲ್ಲಿ ಭಾಗವಹಿಸಿದ್ದ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ, ನಖ್ವಿ ಅವರನ್ನು ಕಠಿಣ ಪ್ರಶ್ನೆಗಳನ್ನು ಕೇಳಿ, ವಿಜೇತ ಭಾರತ ತಂಡಕ್ಕೆ ಟ್ರೋಫಿಯನ್ನು ಹಸ್ತಾಂತರಿಸದಿದ್ದಕ್ಕಾಗಿ ಅವರನ್ನು ಕೆಣಕಿದರು. ಜತೆಗೆ ಎಚ್ಚರಿಕೆ ಕೂಡ ನೀಡಿದರು. ಟ್ರೋಫಿಯನ್ನು ಭಾರತಕ್ಕೆ ಸರಿಯಾದ ರೀತಿಯಲ್ಲಿ ಹಸ್ತಾಂತರಿಸಬೇಕಾಗಿದೆ ಮತ್ತು ಎಸಿಸಿ ಈ ವಿಷಯವನ್ನು ತಕ್ಷಣವೇ ಪರಿಶೀಲಿಸಬೇಕು ಎಂದು ಬಿಸಿಸಿಐ ಉಪಾಧ್ಯಕ್ಷರು ಸಭೆಯಲ್ಲಿ ಹೇಳಿದರು.

ಪಹಲ್ಗಾಂ ದಾಳಿ ಕಾರಣ ಭಾರತೀಯ ಆಟಗಾರರು ನಖ್ವಿ ಕೈಯಿಂದ ಟ್ರೋಫಿ, ಪದಕ ಸ್ವೀಕರಿಸಲು ಸಿದ್ಧರಿರಲಿಲ್ಲ. ಬದಲಾಗಿ, ವೇದಿಕೆ ಮೇಲಿದ್ದ ಬೇರೆ ಯಾವುದೇ ಗಣ್ಯರಿಂದ ಟ್ರೋಫಿ ಸ್ವೀಕರಿಸಲು ಭಾರತ ತಯಾರಿತ್ತು. ಆದರೆ ಪಟ್ಟುಬಿಡದ ನಖ್ವಿ ತನ್ನ ಕೈಗಳಿಂದಲೇ ಟ್ರೋಫಿ ಸ್ವೀಕರಿಸಬೇಕು ಎನ್ನುವ ಜಿದ್ದಿಗೆ ಬಿದ್ದು ಕೊನೆಗೆ ಟ್ರೋಫಿಯನ್ನೇ ಹೊತ್ತೊಯ್ದಿದ್ದರು.

ಇದನ್ನೂ ಓದಿ Asia Cup 2025 final: ಪಾಕ್‌ ಮಣಿಸಿದ ಟೀಮ್ ಇಂಡಿಯಾಗೆ ಬಿಗ್ ಗಿಫ್ಟ್ ನೀಡಿದ ಬಿಸಿಸಿಐ