ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Asia Cup 2025: ಭಾರತ-ಪಾಕ್‌ ಏಷ್ಯಾ ಕಪ್‌ ಪಂದ್ಯದ ಅಗರ್ಕರ್‌ ಪ್ರತಿಕ್ರಿಯೆ ತಡೆದ ಬಿಸಿಸಿಐ ಅಧಿಕಾರಿ!

ಇತ್ತೀಚೆಗೆ ನಡೆದ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಟೂರ್ನಮೆಂಟ್‌ನಲ್ಲಿ ಭಾರತೀಯ ಚಾಂಪಿಯನ್‌ಗಳು ಪಾಕಿಸ್ತಾನ ವಿರುದ್ಧ ಆಡಲು ನಿರಾಕರಿಸಿತ್ತು. ಆದರೆ ಏಷ್ಯಾಕಪ್‌ನಲ್ಲಿ ಪಾಕಿಸ್ತಾನ ಮತ್ತು ಭಾರತ ತಂಡಗಳು ಮುಖಾಮುಖಿಯಾಗುವ ಸಾಧ್ಯತೆಗಳು ಹೆಚ್ಚಿವೆ. ಇತ್ತಂಡಗಳ ನಡುವಿನ ಪಂದ್ಯ ಸೆಪ್ಟೆಂಬರ್ 14 ರಂದು ದುಬೈನಲ್ಲಿ ನಡೆಯಲಿದೆ.

ಮುಂಬಯಿ: ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂದೂರದ ಬಳಿಕ ಭಾರತ ಮತ್ತು ಪಾಕ್‌ ನಡುವೆ ಉದ್ವಿಗ್ನತೆ ಸ್ಥಿತಿ ಇದೆ. ಹೀಗಿರುವಾಗ ಏಷ್ಯಾ ಕಪ್‌ನಲ್ಲಿ(Asia Cup 2025) ಭಾರತ ತಂಡವು ಪಾಕಿಸ್ತಾನದೊಂದಿಗಿನ(IND vs PAK) ಪಂದ್ಯವನ್ನು ಬಹಿಷ್ಕರಿಸಬೇಕೆಂಬ ಬೇಡಿಕೆಗಳಿವೆ. ಈ ಮಧ್ಯೆ ಮಂಗಳವಾರ ಭಾರತ ತಂಡದ ಆಯ್ಕೆ ಸಭೆಯ ವೇಳೆ ಮುಖ್ಯ ಆಯ್ಕೆದಾರ ಅಜಿತ್‌ ಅಗರ್ಕರ್‌ಗೆ ಇದೇ ವಿಚಾರವಾಗಿ ಪ್ರಶ್ನೆ ಕೇಳಲಾಗಿತ್ತು. ಪ್ರಶ್ನೆಗೆ ಉತ್ತರಿಸಲು ಮುಂದಾದಾಗ, ಅಜಿತ್ ಅಗರ್ಕರ್ ಅವರನ್ನು ಬಿಸಿಸಿಐ ಪ್ರತಿನಿಧಿಯೊಬ್ಬರು ತಡೆದ ಘಟನೆ ನಡೆದಿದೆ.

ಬಿಸಿಸಿಐ ಅಧಿಕಾರಿಗಳು, ನಾಯಕ ಸೂರ್ಯಕುಮಾರ್‌ ಯಾದವ್‌ ಜತೆ ಜಂಟಿ ಸಭೆಯಲ್ಲಿ ಪಾಲ್ಗೊಂಡಿದ್ದ ಅಜಿತ್ ಅಗರ್ಕರ್‌ಗೆ ವರದಿಗಾರರೊಬ್ಬರು, ಸೆಪ್ಟೆಂಬರ್ 14 ರಂದು ನಡೆಯುವ ಭಾರತ ಮತ್ತು ಪಾಕಿಸ್ತಾನದ ನಡುವೆ ದೊಡ್ಡ ಪಂದ್ಯವಿದೆ. ಆದರೆ ಕಳೆದ ಎರಡು ತಿಂಗಳಿನಿಂದ ಉಭಯ ದೇಶಗಳ ನಡುವೆ ನಡೆದ ಎಲ್ಲಾ ವಿದ್ಯಮಾನಗಳನ್ನು ನೋಡಿದರೆ ಪಂದ್ಯ ನಡೆಯಲು ಸಾಧ್ಯವೇ? ಎಂದು ಪ್ರಶ್ನೆ ಮಾಡಿದರು.

ಇನ್ನೇನು ಈ ಪ್ರಶ್ನೆಗೆ ಅಜಿತ್ ಅಗರ್ಕರ್‌ ಉತ್ತರಿಸಲು ಮುಂದಾಗುತ್ತಿದ್ದಂತೆ ಬಿಸಿಸಿಐ ಮಾಧ್ಯಮ ವ್ಯವಸ್ಥಾಪಕರು, ತಂಡದ ಆಯ್ಕೆಗೆ ಸಂಬಂಧಿಸಿದಂತೆ ಪ್ರಶ್ನೆಯಿದ್ದರೆ, ಅದನ್ನು ಮಾತ್ರ ಕೇಳಿ ಎಂದು ಹೇಳುವ ಮೂಲಕ ಪ್ರತಿಕ್ರಿಯಿಸಿದಂತೆ ತಡೆದರು.

ಇತ್ತೀಚೆಗೆ ನಡೆದ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಟೂರ್ನಮೆಂಟ್‌ನಲ್ಲಿ ಭಾರತೀಯ ಚಾಂಪಿಯನ್‌ಗಳು ಪಾಕಿಸ್ತಾನ ವಿರುದ್ಧ ಆಡಲು ನಿರಾಕರಿಸಿತ್ತು. ಆದರೆ ಏಷ್ಯಾಕಪ್‌ನಲ್ಲಿ ಪಾಕಿಸ್ತಾನ ಮತ್ತು ಭಾರತ ತಂಡಗಳು ಮುಖಾಮುಖಿಯಾಗುವ ಸಾಧ್ಯತೆಗಳು ಹೆಚ್ಚಿವೆ.

ಭಾರತ ತಂಡ

ಸೂರ್ಯ ಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿ.ಕೀ.), ಜಸ್‌ಪ್ರೀತ್ ಬುಮ್ರಾ, ಅರ್ಷ್‌ದೀಪ್ ಸಿಂಗ್, ವರುಣ್ ಚಕ್ರವರ್ತಿ, ಕುಲದೀಪ್ ಯಾದವ್, ಸಂಜು ಸ್ಯಾಮ್ಸನ್ (ವಿ.ಕೀ.), ಹರ್ಷಿತ್ ರಾಣಾ, ರಿಂಕು ಸಿಂಗ್‌.

ಸ್ಟ್ಯಾಂಡ್‌ಬೈ ಆಟಗಾರರು: ಪ್ರಸಿದ್ಧ್ ಕೃಷ್ಣ, ವಾಷಿಂಗ್ಟನ್ ಸುಂದರ್, ರಿಯಾನ್ ಪರಾಗ್, ಧ್ರುವ್ ಜುರೆಲ್, ಯಶಸ್ವಿ ಜೈಸ್ವಾಲ್.

ಇದನ್ನೂ ಓದಿ Asia Cup 2025: ಏಷ್ಯಾಕಪ್‌ನಲ್ಲಿ ಅತ್ಯಧಿಕ ಶತಕ ಬಾರಿಸಿದ ಬ್ಯಾಟರ್‌ಗಳು