IPL Celebration: ಐಪಿಎಲ್ ತಂಡಗಳ ವಿಜಯೋತ್ಸವಕ್ಕೆ ಕಠಿಣ ನಿಯಮ ಜಾರಿಗೆ ತಂದ ಬಿಸಿಸಿಐ
IPL Celebration: ಯಾವುದೇ ಐಪಿಎಲ್ ತಂಡಗಳು ಟ್ರೋಫಿ ಜಯಿಸಿದ ನಂತರ ಸಂಬಂಧಪಟ್ಟ ತವರು ರಾಜ್ಯದಲ್ಲಿ ವಿಜಯೋತ್ಸವ ಆಚರಣೆ ಮಾಡುವುದಕ್ಕೆ ಬಿಸಿಸಿಐನಿಂದ ಮೊದಲೇ ಅನುಮತಿ ಪಡೆಯಬೇಕು. ಸುರಕ್ಷತೆಗಾಗಿ ಹಲವು ಹಂತದ ಕ್ರಮಗಳನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ ಸರ್ಕಾರ, ಪೊಲೀಸ್ ಇಲಾಖೆ ಮತ್ತು ಬಿಸಿಸಿಐನಿಂದ ಲಿಖಿತ ಅನುಮತಿ ಪಡೆದ ನಂತರವೇ ಆಚರಣೆಗೆ ಅವಕಾಶ ನೀಡಲಾಗುತ್ತದೆ ಎಂದು ಸೈಕಿಯಾ ತಿಳಿಸಿದ್ದಾರೆ.


ನವದೆಹಲಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡವು ಐಪಿಎಲ್ ಪ್ರಶಸ್ತಿ ಜಯಿಸಿದ ಸಂಭ್ರಮಾಚರಣೆಯ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತ ಸಂಭವಿಸಿದ(Bengaluru stampede) ದುರ್ಘಟನೆ ಬಳಿಕ ಎಚ್ಚೆತ್ತುಕೊಂಡಿರುವ ಬಿಸಿಸಿಐ(BCCI) ಇದೀಗ ಐಪಿಎಲ್ ತಂಡಗಳ ವಿಜಯೋತ್ಸವಕ್ಕೆ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಯಾವುದೇ ಐಪಿಎಲ್ ತಂಡಗಳು ಆತುರದಲ್ಲಿ ವಿಜಯೋತ್ಸವ ಆಚರಿಸಬಾರದು ಎಂದು ಹೇಳುವ ಮೂಲಕ ಹಲವು ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಎರಡು ವಾರಗಳ ಹಿಂದೆ ನಡೆದಿದ್ದ ಬಿಸಿಸಿಐ ಅಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಐಪಿಎಲ್(BCCI Apex Council meeting) ಸಂಭ್ರಮಾಚರಣೆಗೆ ಸೂಕ್ತ ಮಾರ್ಗಸೂಚಿಯೊಂದನ್ನು ರಚಿಸಲು ಮೂವರು ಸದಸ್ಯರ ಸಮಿತಿಯನ್ನು ರಚಿಸಲಾಯಿತ್ತು. ಈ ಸಮಿತಿಯಲ್ಲಿ ದೇವಜಿತ್ ಸೈಕಿಯಾ, ಉಪಾಧ್ಯಕ್ಷ ರಾಜೀವ್ ಶುಕ್ಲಾ ಮತ್ತು ಖಜಾಂಚಿ ಪ್ರಭತೇಜ್ ಸಿಂಗ್ ಭಾಟಿಯಾ ಇದ್ದರು. ಇದೀಗ ಮಾರ್ಗಸೂಚಿಗಳನ್ನು ತಿಳಿಸಿದೆ.
ಇಂಡಿಯಾ ಟುಡೇ ಜತೆ ಮಾತನಾಡಿದ ಬಿಸಿಸಿಐ ಕಾರ್ಯದರ್ಶಿ ದೇವಜೀತ್ ಸೈಕಿಯಾ,"ಭವಿಷ್ಯದಲ್ಲಿ ಯಾವುದೇ ಅಪಘಾತಗಳನ್ನು ತಪ್ಪಿಸಲು ಅಪಾಯದ ಪ್ರತಿಯೊಂದು ಅಂಶವನ್ನು ಬಹಳ ಗಂಭೀರವಾಗಿ ಪರಿಗಣಿಸುತ್ತಿದೆ" ಎಂದು ಹೇಳಿದರು.
"ಯಾವುದೇ ಐಪಿಎಲ್ ತಂಡಗಳು ಟ್ರೋಫಿ ಜಯಿಸಿದ ನಂತರ ಸಂಬಂಧಪಟ್ಟ ತವರು ರಾಜ್ಯದಲ್ಲಿ ವಿಜಯೋತ್ಸವ ಆಚರಣೆ ಮಾಡುವುದಕ್ಕೆ ಬಿಸಿಸಿಐನಿಂದ ಮೊದಲೇ ಅನುಮತಿ ಪಡೆಯಬೇಕು. ಸುರಕ್ಷತೆಗಾಗಿ ಹಲವು ಹಂತದ ಕ್ರಮಗಳನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ ಸರ್ಕಾರ, ಪೊಲೀಸ್ ಇಲಾಖೆ ಮತ್ತು ಬಿಸಿಸಿಐನಿಂದ ಲಿಖಿತ ಅನುಮತಿ ಪಡೆದ ನಂತರವೇ ಆಚರಣೆಗೆ ಅವಕಾಶ ನೀಡಲಾಗುತ್ತದೆ" ಎಂದು ಸೈಕಿಯಾ ತಿಳಿಸಿದ್ದಾರೆ.
ಇದನ್ನೂ ಓದಿ IPL 2025: ʻನಾವು ತೀವ್ರ ದುಖಃದಲ್ಲಿದ್ದೇವೆʼ-ಕಾಲ್ತುಳಿತದ ಪ್ರಕರಣದ ಬಗ್ಗೆ ಆರ್‌ಸಿಬಿ ಪ್ರತಿಕ್ರಿಯೆ!
ಬಿಸಿಸಿಐ ಮಾರ್ಗಸೂಚಿಗಳೇನು?
ವಿಜಯೋತ್ಸವ ಕಾರ್ಯಕ್ರಮಕ್ಕೆ ಭದ್ರತೆ, ಸುರಕ್ಷತೆಯ 3 ಹಂತಗಳನ್ನು ಪಾಲಿಸಬೇಕು.
ರಾಜ್ಯ ಸರ್ಕಾರ, ಪೊಲೀಸ್ ಇಲಾಖೆ, ಬಿಸಿಸಿಐನಿಂದ ಲಿಖಿತ ಅನುಮತಿ ಪಡೆಯಬೇಕು.
ವಿಮಾನ ನಿಲ್ದಾಣದಿಂದ ಕಾರ್ಯಕ್ರಮದ ಸ್ಥಳದವರೆಗೆ ಸುರಕ್ಷತೆ ಖಚಿತಪಡಿಸಿಕೊಳ್ಳಬೇಕು.
ಐಪಿಎಲ್ ವಿಜೇತ ತಂಡಗಳ ಸಂಭ್ರಮಾಚರಣೆಗೆ ಬಿಸಿಸಿಐ ಅನುಮತಿ ಕಡ್ಡಾಯ.