Saturday, 14th December 2024

ಬಿಸಿಸಿಐ ಅಧ್ಯಕ್ಷ ಗಂಗೂಲಿ ಆಸ್ಪತ್ರೆಗೆ ದಾಖಲು

ಕೋಲ್ಕತಾ: ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಅಧ್ಯಕ್ಷ ಮಾಜಿ ಆಟಗಾರ ಸೌರವ್‌ ಗಂಗೂಲಿ ಕೋಲ್ಕತಾದ ವುಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ದಾಖಲಾಗಿರುವುದು ಮೂಲಗಳು ಖಚಿತಪಡಿಸಿವೆ.

ಎದೆ ನೋವು ಕಾಣಿಸಿಕೊಂಡಿರುವ ಕಾರಣ ಚಿಕಿತ್ಸೆಗೆ ದಾಖಲಾಗಿದ್ದಾರೆ ಎಂದು ಆಸ್ಪತ್ರೆ ಪ್ರಕಟನೆ ತಿಳಿಸಿದೆ.

ಫೋಟೋ ಕೃಪೆ: ಎಎನ್‌ಐ