ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

4ನೇ ಟಿ20 ಪಂದ್ಯ ರದ್ದು; ಟಿಕೆಟ್‌ ಹಣ ಮರುಪಾವತಿಗೆ ಪ್ರೇಕ್ಷರಕ ಒತ್ತಾಯ

IND vs SA 4th T20I: ಲಖನೌ ನಗರದಲ್ಲಿ ಗಾಳಿಯ ಗುಣಮಟ್ಟದ ಸೂಚ್ಯಂಕ (ಎಕ್ಯುಐ) 400ರ ಮಟ್ಟದಲ್ಲಿತ್ತು. ಇದು ಅಪಾಯಕಾರಿ ಮಟ್ಟವಾಗಿದೆ. ಇಂತಹ ವಾತಾವರಣದಲ್ಲಿಯೂ ಪಂದ್ಯವನ್ನು ಇಲ್ಲಿ ಆಯೋಜಿಸಿರುವ ಬಿಸಿಸಿಐಗೆ ಆಟಗಾರರ ಆರೋಗ್ಯದ ಬಗ್ಗೆ ಕಾಳಜಿ ಇಲ್ಲವೇ ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ.

IND vs SA 4th T20I

ಲಖನೌ, ಡಿ.18: ಬುಧವಾರ ನಡೆಯಬೇಕಿದ್ದ ಭಾರತ ಹಾಗೂ ದಕ್ಷಿಣ ಆಫ್ರಿಕಾ(IND vs SA 4th T20I) ನಡುವಿನ ನಾಲ್ಕನೇ ಟಿ20 ಪಂದ್ಯ ರದ್ದಾದ ಬೆನ್ನಲ್ಲೇ ಬಿಸಿಸಿಐ(BCCI) ವಿರುದ್ಧ ಟೀಕೆಗಳು ವ್ಯಕ್ತವಾಗಿದೆ. ಜತೆಗೆ ನಿರಾಶೆಗೊಂಡ ಹಲವರು ಅಭಿಮಾನಿಗಳು ಟಿಕೆಟ್‌ ಹಣವನ್ನು ಮರುಪಾವತಿಸುವಂತೆ ಒತ್ತಾಯಿಸಿದ್ದಾರೆ. ಉತ್ತರ ಪ್ರದೇಶದ ಲಖನೌದಲ್ಲಿರುವ ಏಕಾನ ಕ್ರಿಕೆಟ್ ಮೈದಾನದಲ್ಲಿ 4ನೇ ಟಿ20 ಪಂದ್ಯ ಆಯೋಜನೆ ಮಾಡಲಾಗಿತ್ತು. ಆದರೆ ಪಂದ್ಯ ದಟ್ಟ ಮಂಜಿನ ಕಾರಣದಿಂದ ರದ್ದು ಮಾಡಲಾಯಿತು.

ಉತ್ತರ ಭಾರತದ ಹಲವು ನಗರಗಳಲ್ಲಿ ಡಿಸೆಂಬರ್‌ ತಿಂಗಳಲ್ಲಿ ದಟ್ಟ ಮಂಜು ಮತ್ತು ವಾಯುಮಾಲಿನ್ಯದ ಸಮಸ್ಯೆ ಇದ್ದೇ ಇರುತ್ತದೆ. ಇದನ್ನೂ ತಿಳಿದಿದ್ದರೂ ಕೂಡ ಈ ತಿಂಗಳಲ್ಲಿ ಇಲ್ಲಿ ಪಂದ್ಯಗಳನ್ನು ಆಯೋಜಿಸಿದ ಬಗ್ಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವಿರುದ್ಧ ಅಸಮಾಧಾನ ವ್ಯಕ್ತವಾಗಿದೆ.

ಲಖನೌ ನಗರದಲ್ಲಿ ಗಾಳಿಯ ಗುಣಮಟ್ಟದ ಸೂಚ್ಯಂಕ (ಎಕ್ಯುಐ) 400ರ ಮಟ್ಟದಲ್ಲಿತ್ತು. ಇದು ಅಪಾಯಕಾರಿ ಮಟ್ಟವಾಗಿದೆ. ಇಂತಹ ವಾತಾವರಣದಲ್ಲಿಯೂ ಪಂದ್ಯವನ್ನು ಇಲ್ಲಿ ಆಯೋಜಿಸಿರುವ ಬಿಸಿಸಿಐಗೆ ಆಟಗಾರರ ಆರೋಗ್ಯದ ಬಗ್ಗೆ ಕಾಳಜಿ ಇಲ್ಲವೇ ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ.



ಇದನ್ನೂ ಓದಿ ಸಿಎಸ್‌ಕೆ ತಂಡದಲ್ಲಿ ಧೋನಿಗಿಂತ ಹೆಚ್ಚು ಸಂಭಾವನೆ ಪಡೆಯುವ ಆಟಗಾರರಿವರು!

ಸದ್ಯ ಐದು ಪಂದ್ಯಗಳ ಸರಣಿಯಲ್ಲಿ ಭಾರತವು 2–1ರಿಂದ ಮುಂದಿದೆ. 5ನೇ ಹಾಗೂ ಅಂತಿಮ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆಯಲಿದೆ.ಉಪನಾಯಕ ಶುಭಮನ್ ಗಿಲ್ ಅವರ ಕಾಲ್ಬೆರಳಿಗೆ ಗಾಯವಾದ ಕಾರಣ ಅವರು ಅಂತಿಮ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ನಾಲ್ಕನೇ ಪಂದ್ಯಕ್ಕೂ ಅವರು ಅಲಭ್ಯರಾಗಿದ್ದರು. ಅವರ ಬದಲು ಕೇರಳದ ಸಂಜು ಸ್ಯಾಮ್ಸನ್‌ಗೆ ಅವಕಾಶ ನೀಡಲಾಗಿದೆ. ಸ್ಯಾಮ್ಸನ್ ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕು ಪಂದ್ಯಗಳಲ್ಲಿ 216 ರನ್ ಗಳಿಸಿದ್ದಾರೆ, ಸರಾಸರಿ 72 ರನ್ ಗಳಿಸಿದ್ದಾರೆ, ಇದರಲ್ಲಿ ಎರಡು ಶತಕಗಳು ಸೇರಿವೆ.

ಗಿಲ್‌ ನೆಟ್ಸ್‌ನಲ್ಲಿ ಬ್ಯಾಟಿಂಗ್ ಅಭ್ಯಾಸ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಅವರ ಕಾಲ್ಬೆರಳಿಗೆ ಚೆಂಡು ಬಡಿದು ಪೆಟ್ಟಾಯಿತು. ಇದರಿಂದಾಗಿ ಅವರು ವಿಪರೀತ ನೋವು ಅನುಭವಿಸಿದರು. ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯಕೀಯ ತಂಡ ಹೇಳಿದೆ. ಕಳೆದ ಮೂರು ಪಂದ್ಯಗಳಲ್ಲಿಯೂ ಅವರು ಬ್ಯಾಟಿಂಗ್ ಲಯ ಕಂಡುಕೊಳ್ಳುವಲ್ಲಿ ವಿಫಲರಾಗಿದ್ದರು. ಆದ್ದರಿಂದ ಅವರ ಮೇಲೆ ಲಯಕ್ಕೆ ಮರಳುವ ಒತ್ತಡ ಹೆಚ್ಚಿತ್ತು.

5ನೇ ಟಿ20ಗೆ ಭಾರತ ಸಂಭಾವ್ಯ ತಂಡ

ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಜಿತೇಶ್ ಶರ್ಮಾ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ.