IPL 2025: ಗೆಲುವಿನ ಸಂತಸದಲ್ಲಿದ್ದ ರಿಷಭ್ ಪಂತ್‌ಗೆ ದಂಡದ ಬಿಸಿ
Rishabh Pant: 27 ಕೋಟಿ ರೂ. ಪಡೆದ ಪಂತ್ ಈ ಬಾರಿಯ ಐಪಿಎಲ್‌ನಲ್ಲಿ ಸತತ ಬ್ಯಾಟಿಂಗ್ ವೈಫಲ್ಯ ಕಾಣುತ್ತಿದ್ದಾರೆ. ಆಡಿದ ಎಲ್ಲ ಪಂದ್ಯಗಳಲ್ಲಿಯೂ ಒಂದಂಕಿಗೆ ಸೀಮಿತರಾಗುತ್ತಿದ್ದಾರೆ. ಹೀಗಾಗಿ ಅವರ ವಿರುದ್ಧ ನೆಟ್ಟಿಗರು ಭಾರೀ ಟೀಕೆ ವ್ಯಕ್ತಪಡಿಸುತ್ತಿದ್ದಾರೆ.


ಮುಂಬಯಿ: ಮುಂಬೈ(MI vs LSG) ತಂಡವನ್ನು 12 ರನ್ ಅಂತರದಿಂದ ಮಣಿಸಿದ ಸಂತಸದಲ್ಲಿರುವಾಗಲೇ ಲಕ್ನೋ ತಂಡದ ನಾಯಕ ರಿಷಭ್ ಪಂತ್(Rishabh Pant)ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಪಂದ್ಯದಲ್ಲಿ ಲಕ್ನೋ ತಂಡವು ಸ್ಲೋ ಓವರ್ ರೇಟ್ ಕಾಯ್ದುಕೊಂಡ ಕಾರಣದಿಂದ ನಾಯಕ ಪಂತ್‌ಗೆ ದಂಡ ವಿಧಿಸಲಾಗಿದೆ. ಈ ಸೀಸನ್ ನಲ್ಲಿ ಲಕ್ನೋ ತಂಡ(Lucknow Super Giants)ದ ನಾಯಕನ ಮೊದಲ ತಪ್ಪು ಇದಾಗಿದೆ.
'ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಐಪಿಎಲ್ ಪಂದ್ಯಲ್ಲಿ ನಿಧಾನಗತಿಯ ಓವರ್ ದರವನ್ನು ಕಾಯ್ದುಕೊಂಡಿದ್ದಕ್ಕಾಗಿ ಲಕ್ನೋ ತಂಡದ ನಾಯಕ ರಿಯಾನ್ ಪರಾಗ್‌ಗೆ ದಂಡ ವಿಧಿಸಲಾಗಿದೆ. ಐಪಿಎಲ್‌ನ ನೀತಿ ಸಂಹಿತೆಯ ಆರ್ಟಿಕಲ್ 2.22 ರ ಅಡಿಯಲ್ಲಿ, ಕನಿಷ್ಠ ಓವರ್-ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ, ಲಕ್ನೋ ತಂಡದ ಈ ಋತುವಿನ ಮೊದಲ ಅಪರಾಧವಾಗಿರುವುದರಿಂದ, ನಾಯಕನಿಗೆ 12 ಲಕ್ಷ ದಂಡ ವಿಧಿಸಲಾಗಿದೆ. ಎಂದು ಐಪಿಎಲ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಕಳೆದ ಆವೃತ್ತಿಯಲ್ಲಿ ಡೆಲ್ಲಿ ನಾಯಕನಾಗಿದ್ದ ವೇಳೆ ಪಂತ್ ಮೂರು ಬಾರಿ ನಿಧಾನಗತಿಯ ಓವರ್ ದರವನ್ನು ಕಾಯ್ದುಕೊಂಡಿದ್ದಕ್ಕಾಗಿ ಒಂದು ಪಂದ್ಯದಲ್ಲಿ ನಿಷೇಧ ಶಿಕ್ಷೆಗೆ ಗುರಿಯಾಗಿದ್ದರು.
ಇದನ್ನೂ ಓದಿ IPL 2025: ನಿರ್ಣಾಯಕ ಘಟ್ಟದಲ್ಲೇ ಮೈದಾನ ತೊರೆದು ಟೀಕೆಗೆ ಗುರಿಯಾದ ತಿಲಕ್ ವರ್ಮಾ
ಈ ಹಿಂದೆ ತಂಡವೊಂದು 3 ಪಂದ್ಯಗಳಲ್ಲಿ ನಿಧಾನಗತಿ ಬೌಲಿಂಗ್ ಮಾಡಿದರೆ ನಾಯಕರಿಗೆ ಒಂದು ಪಂದ್ಯ ನಿಷೇಧ ಹೇರುಲಾಗುತ್ತಿತ್ತು. ಆದರೆ ಈ ಆವೃತ್ತಿಯಿಂದ ನಿಯಮ ಬದಲಾಗಿದೆ. ಹೊಸ ನಿಯಮದ ಪ್ರಕಾರ ಇನ್ನು ಮುಂದೆ ಒಂದಕ್ಕಿಂತ ಹೆಚ್ಚು ಪಂದ್ಯಗಳಲ್ಲಿ ತಂಡ ನಿಗದಿತ ಅವಧಿಯಲ್ಲಿ ಬೌಲಿಂಗ್ ಮುಗಿಸದಿದ್ದರೆ, ನಾಯಕರಿಗೆ ದಂಡ ವಿಧಿಸಿ, 1 ಡಿಮೆರಿಟ್ ಅಂಕ ನೀಡಲಾಗುತ್ತದೆ. ಡಿಮೆರಿಟ್ ಅಂಕದ ಅವಧಿ 3 ವರ್ಷ ಇರಲಿದ್ದು, ಈ ಅವಧಿಯಲ್ಲಿ 4 ಡಿಮೆರಿಟ್ ಅಂಕ ಪಡೆದರೆ ನಾಯಕನಿಗೆ ಪಂದ್ಯದ ಸಂಭಾವನೆಯ ಶೇ.100ರಷ್ಟು ದಂಡ ವಿಧಿಸಲಾಗುತ್ತದೆ.
27 ಕೋಟಿ ರೂ. ಪಡೆದ ಪಂತ್ ಈ ಬಾರಿಯ ಐಪಿಎಲ್‌ನಲ್ಲಿ ಸತತ ಬ್ಯಾಟಿಂಗ್ ವೈಫಲ್ಯ ಕಾಣುತ್ತಿದ್ದಾರೆ. ಆಡಿದ ಎಲ್ಲ ಪಂದ್ಯಗಳಲ್ಲಿಯೂ ಒಂದಂಕಿಗೆ ಸೀಮಿತರಾಗುತ್ತಿದ್ದಾರೆ. ಹೀಗಾಗಿ ಅವರ ವಿರುದ್ಧ ನೆಟ್ಟಿಗರು ಭಾರೀ ಟೀಕೆ ವ್ಯಕ್ತಪಡಿಸುತ್ತಿದ್ದಾರೆ.