ಮುಂಬಯಿ: ಅ.19ರಿಂದ ಆರಂಭಗೊಳ್ಳಲಿರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಶನಿವಾರ ಭಾರತ ತಂಡ ಪ್ರಕಟಿಸಲಾಗಿತ್ತು. ಅಂತರಾಷ್ಟ್ರೀಯ ಟಿ20 ಹಾಗೂ ಟೆಸ್ಟ್‌ಗೆ ನಿವೃತ್ತಿ ಘೋಷಿಸಿದ್ದರಿಂದ ಕೆಲ ಸಮಯದಿಂದ ಕ್ರಿಕೆಟ್‌ನಿಂದಲೇ ದೂರ ಉಳಿದಿರುವ ರೋಹಿತ್(Rohit Sharma) ಹಾಗೂ ವಿರಾಟ್ ಕೊಹ್ಲಿ(Virat Kohli)ಗೂ ಅವಕಾಶ ನೀಡಲಾಗಿದೆ. ಆದರೆ ರೋಹಿತ್ ಅವರನ್ನು ತಂಡದ ನಾಯಕತ್ವದಿಂದ ಕೆಳಗಿಳಿಸಿದ್ದು ಎಲ್ಲರಿಗೂ ಅಚ್ಚರಿ ಮೂಡಿಸಿತ್ತು. ಇದೀಗ ರೋಹಿತ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಲು ಅಸಲಿ ಕಾರಣ ಏನೆಂಬುವುದು ತಿಳಿದುಬಂದಿದೆ.
ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಬಿಸಿಸಿಐ, ಆಯ್ಕೆ ಸಮಿತಿ 2027ರ ವಿಶ್ವಕಪ್‌ಗೆ ತಂಡವನ್ನು ಕಟ್ಟುವ ನಿಟ್ಟಿನಲ್ಲಿ ಶುಭಮನ್ ಗಿಲ್‌ಗೆ ನಾಯಕತ್ವ ನೀಡಲಾಗಿದೆ ಎನ್ನಲಾಗಿದೆ. ರೋಹಿತ್ ಮತ್ತು ಕೊಹ್ಲಿಯ ಮುಂದಿನ ಒಂದು ವರ್ಷದ ಪ್ರದರ್ಶನದ ಆಧಾರದ ಮೇಲೆ ಅವರನ್ನು ಏಕದಿನ ವಿಶ್ವಕಪ್‌ಗೆ ಆಯ್ಕೆ ಪರಿಗಣನೆ ಮಾಡಲಾಗುತ್ತದೆ.
ಇನ್ನೊಂದು ಮೂಲಗಳ ಪ್ರಕಾರ ರೋಹಿತ್ ಹಾಗೂ ವಿರಾಟ್ ಪಾಲಿಗೆ ಆಸ್ಟ್ರೇಲಿಯಾ ಸರಣಿಯೇ ಕೊನೆಯದ್ದು ಎಂದು ಹೇಳಲಾಗುತ್ತಿದೆ. ಉಭಯ ಆಟಗಾರರು ತಂಡದಲ್ಲಿ ಮುಂದುವರಿಯುವ ಬಗ್ಗೆ ಆಯ್ಕೆ ಸಮಿತಿಯ ಅಗರ್ಕರ್ ಯಾವುದೇ ಸ್ಪಷ್ಟ ಮಾಹಿತಿ ನೀಡಿಲ್ಲ.ಒಂದು ವೇಳೆ ಅವರನ್ನು ತಂಡದಲ್ಲಿ ಮುಂದುವರಿಸಿದರೂ, 2027ರ ವಿಶ್ವಕಪ್ ಮುನ್ನ ಅಥವಾ ಮುಂದಿನ ವರ್ಷವೇ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ IND vs AUS: ಭಾರತ ಒಡಿಐ ತಂಡದಿಂದ ಜಸ್‌ಪ್ರೀತ್ ಔಟ್? ಇದಕ್ಕೆ ಕಾರಣ ಇಲ್ಲಿದೆ!
ಏಕದಿನ ತಂಡ: ಶುಭಮನ್ ಗಿಲ್(ನಾಯಕ), ರೋಹಿತ್ ಶರ್ಮ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್(ಉಪನಾಯಕ), ಅಕ್ಷರ್ ಪಟೇಲ್, ಕೆ.ಎಲ್.ರಾಹುಲ್, ನಿತೀಶ್ ಕುಮಾರ್, ವಾಷಿಂಗ್ಟನ್ ಸುಂದರ್, ಕುಲ್ದೀಪ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಶ್‌ದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಧ್ರುವ್ ಜುರೆಲ್, ಯಶಸ್ವಿ ಜೈಸ್ವಾಲ್.ಟಿ20 ತಂಡ: ಸೂರ್ಯಕುಮಾರ್(ನಾಯಕ), ಅಭಿಷೇಕ್, ಗಿಲ್(ಉಪನಾಯಕ), ತಿಲಕ್, ನಿತೀಶ್, ಶಿವಂ ದುಬೆ, ಅಕ್ಷರ್, ಜಿತೇಶ್ ಶರ್ಮಾ, ವರುಣ್ ಚಕ್ರವರ್ತಿ, ಬೂಮ್ರಾ, ಅರ್ಶ್‌ದೀಪ್, ಕುಲ್ದೀಪ್, ಹರ್ಷಿತ್, ಸಂಜು ಸ್ಯಾಮ್ಸನ್, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್.