ಲಾರ್ಡ್ಸ್, ಜು.6: ಆಸ್ಟ್ರೇಲಿಯಾಮಹಿಳಾ ಕ್ರಿಕೆಟ್ ತಂಡದ ವಿಕೆಟ್ ಕೀಪರ್-ಬ್ಯಾಟರ್ ಬೆತ್ ಮೂನಿ ಅವರು ದಿಗ್ಗಜ ವಿರಾಟ್ ಕೊಹ್ಲಿಯ ದಾಖಲೆಯೊಂದನ್ನು ಮುರಿದಿದ್ದಾರೆ. ಭಾನುವಾರ (ಜುಲೈ 5) ನಡೆದ ಐಸಿಸಿ ಮಹಿಳಾ ಟಿ20 ವಿಶ್ವಕಪ್ 2026 ರ ಫೈನಲ್ ಪಂದ್ಯದಲ್ಲಿ ಮೂನಿ 49 ಎಸೆತಗಳಲ್ಲಿ 64 ರನ್ ಗಳಿಸಿ ಫೈನಲ್‌ನಲ್ಲಿ ಆಸೀಸ್ ತಂಎ ಏಳು ವಿಕೆಟ್‌ಗಳಿಂದ ಗೆಲ್ಲಲು ಸಹಾಯ ಮಾಡಿದರು.
ಇಂಗ್ಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಮೂನಿ ಗಳಿಸಿದ ಅರ್ಧಶತಕ ವಿರಾಟ್ ಕೊಹ್ಲಿ ದಾಖಲೆಯನ್ನು ಮುರಿಯಲು ಸಹಾಯ ಮಾಡಿತು. ಎಡಗೈ ಬ್ಯಾಟ್ಸ್‌ಮನ್ ಐಸಿಸಿ ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ (ಪುರುಷ ಮತ್ತು ಮಹಿಳಾ ವಿಭಾಗದಲ್ಲಿ ಸೇರಿ) ಮೂರು ಬಾರಿ 50 ಕ್ಕೂ ಹೆಚ್ಚು ಸ್ಕೋರ್‌ಗಳನ್ನು ಗಳಿಸಿದ ವಿಶ್ವದ ಮೊದಲ ಆಟಗಾರ್ತಿ ಎನಿಸಿದರು. ವಿರಾಟ್ ಕೊಹ್ಲಿ ಎರಡು ಅರ್ಧಶತಕ ಬಾರಿಸಿದ್ದರು.
ಇಂಗ್ಲೆಂಡ್ ವಿರುದ್ಧ 64 ರನ್ ಗಳಿಸುವ ಮೊದಲು, ಮೂನಿ ಭಾರತದ ವಿರುದ್ಧ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆದ 2020 ರ ಮಹಿಳಾ ಟಿ 20 ವಿಶ್ವಕಪ್‌ನ ಫೈನಲ್‌ನಲ್ಲಿ ಅಜೇಯ 78 ರನ್ ಗಳಿಸಿದ್ದರು ಮತ್ತು ಫೆಬ್ರವರಿ 26 ರಂದು ಕೇಪ್ ಟೌನ್‌ನ ನ್ಯೂಲ್ಯಾಂಡ್ಸ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 2023 ರ ಮಹಿಳಾ ಟಿ 20 ವಿಶ್ವಕಪ್ ಫೈನಲ್‌ನಲ್ಲಿ 53 ಎಸೆತಗಳಲ್ಲಿ ಅಜೇಯ 74 ರನ್ ಗಳಿಸಿದ್ದರು. ಮಹಿಳಾ ಕ್ರಿಕೆಟ್ ಇತಿಹಾಸದಲ್ಲಿ ಯಾವುದೇ ಆಟಗಾರ್ತಿ ಮಹಿಳಾ ಟಿ20 ವಿಶ್ವಕಪ್ ಫೈನಲ್‌ನಲ್ಲಿ 50 ಕ್ಕೂ ಹೆಚ್ಚು ಸ್ಕೋರ್‌ಗಳನ್ನು ಗಳಿಸಿಲ್ಲ.
ಪುರುಷರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ವಿರಾಟ್ ಕೊಹ್ಲಿ, ಶ್ರೀಲಂಕಾದ ಕುಮಾರ್ ಸಂಗಕ್ಕಾರ ಮತ್ತು ವೆಸ್ಟ್ ಇಂಡೀಸ್ ಬ್ಯಾಟ್ಸ್‌ಮನ್ ಮರ್ಲಾನ್ ಸ್ಯಾಮ್ಯುಯೆಲ್ಸ್ ತಲಾ ಎರಡು ಅರ್ಧಶತಕಗಳನ್ನು ಗಳಿಸಿದ್ದಾರೆ.
'ಇದೇ ನನ್ನ ಕೊನೆಯ ವಿಶ್ವಕಪ್': ಸ್ಪೇನ್ ಪಂದ್ಯಕ್ಕೂ ಮುನ್ನ ರೊನಾಲ್ಡೊ ವಿದಾಯ ಘೋಷಣೆ
ಟಿ20 ವಿಶ್ವಕಪ್ ಫೈನಲ್‌ನಲ್ಲಿ ಮೂರು ಅರ್ಧಶತಕಗಳನ್ನು ಗಳಿಸಿದ ಮೊದಲ ಆಟಗಾರ್ತಿಯಾಗುವ ಜೊತೆಗೆ, ಮೂನಿ ಈಗ ಟಿ20 ವಿಶ್ವಕಪ್ ಫೈನಲ್‌ನಲ್ಲಿ (ಪುರುಷ ಮತ್ತು ಮಹಿಳಾ ಸೇರಿ) ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.
ಟಿ20 ವಿಶ್ವಕಪ್ ಫೈನಲ್‌ಗಳಲ್ಲಿ ಅತಿ ಹೆಚ್ಚು 50+ ಸ್ಕೋರ್‌ಗಳು (ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ)
ಬೆತ್ ಮೂನಿ- 3
ವಿರಾಟ್ ಕೊಹ್ಲಿ-2
ಮಾರ್ಲಾನ್ ಸ್ಯಾಮ್ಯುಯೆಲ್ಸ್-2
ಕುಮಾರ್ ಸಂಗಕ್ಕಾರ- 2