ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕಿವೀಸ್‌ ವಿರುದ್ಧ 3ನೇ ಟಿ20 ಪಂದ್ಯ; ಭಾರತ ಪರ 3 ಬದಲಾವಣೆ ಸಾಧ್ಯತೆ

India’s likely playing XI for 3rd T20I: ಇಶಾನ್ ಕಿಶನ್ ಗಾಯದಿಂದ ಚೇತರಿಕೆ ಕಾಣದೆ ಮೂರನೇ ಪಂದ್ಯದಿಂದಲೂ ಹೊರಬಿದ್ಧ ಕಾರಣ ಸೂರ್ಯವಂಶಿಗೆ ಮತ್ತೊಂದು ಅವಕಾಶ ಸಿಗಲಿದೆ. ಎರಡನೇ ಟಿ20 ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದ ವೈಭವ್‌, 8 ಎಸೆತಗಳಲ್ಲಿ ಕೇವಲ 4 ರನ್‌ಗಳನ್ನು ಮಾತ್ರ ಗಳಿಸಲು ಶಕ್ತರಾಗಿದ್ದರು

ಕಿವೀಸ್‌ ವಿರುದ್ಧ 3ನೇ ಟಿ20 ಪಂದ್ಯಕ್ಕೆ ಭಾರತ ಸಂಭಾವ್ಯ ಆಡುವ ಬಳಗ

Bhuvneshwar And Sooryavanshi -

Abhilash BC
Abhilash BC Oct 26, 2026 10:30 AM

ವೆಲ್ಲಿಂಗ್ಟನ್‌, ಅ.26: ಮಂಗಳವಾರ (ಅಕ್ಟೋಬರ್ 27) ವೆಲ್ಲಿಂಗ್ಟನ್‌ನ ಹೆನ್ರಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೂರನೇ ಟಿ20ಐ (T20I) ಪಂದ್ಯದಲ್ಲಿ ಭಾರತವು ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದ್ದು, ಮೊದಲ ಎರಡು ಪಂದ್ಯಗಳಂತೆಯೇ ಈ ಪಂದ್ಯದಲ್ಲೂ ಗೆಲುವು ಸಾಧಿಸುವ ಗುರಿ ಹೊಂದಿದೆ.

ಮೂರನೇ ಪಂದ್ಯದಲ್ಲಿ ಆತಿಥೇಯ ತಂಡದ ವಿರುದ್ಧ ಜಯ ಸಾಧಿಸಿದರೆ, ಭಾರತವು ಈ ಸರಣಿಯಲ್ಲಿ 3-0 ಅಂತರದಿಂದ ಸರಣಿ ಕೈವಶ ಮಾಡಿಕೊಳ್ಳಲಿದೆ.ಮೊದಲ ಎರಡು ಪಂದ್ಯಗಳಲ್ಲಿ ಭಾರತವು 'ಬ್ಲ್ಯಾಕ್ ಕ್ಯಾಪ್ಸ್' (ನ್ಯೂಜಿಲೆಂಡ್) ತಂಡವನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿತ್ತು. ನ್ಯೂಜಿಲೆಂಡ್‌ನ ರಾಜಧಾನಿಯಲ್ಲಿ ನಡೆಯಲಿರುವ ಮೂರನೇ ಪಂದ್ಯಕ್ಕಾಗಿ, ಭಾರತೀಯ ತಂಡದ ಹನ್ನೊಂದರ ಬಳಗದಲ್ಲಿ ಒಂದೆರಡು ಬದಲಾವಣೆಗಳನ್ನು ಮಾಡುವ ಸಾಧ್ಯತೆಯಿದೆ.

ವೇಗದ ಬೌಲರ್ ಭುವನೇಶ್ವರ್ ಕುಮಾರ್ ಅವರು ಇಲ್ಲಿಯವರೆಗೆ ಆಡಿದ ಎರಡು ಪಂದ್ಯಗಳಲ್ಲಿ ತಮ್ಮ ಬೌಲಿಂಗ್‌ನಿಂದ ಪ್ರಭಾವ ಬೀರಲು ವಿಫಲರಾಗಿದ್ದಾರೆ ಮತ್ತು ಮೂರನೇ ಪಂದ್ಯದ ಆಡುವ ಹನ್ನೊಂದರ ಬಳಗದಿಂದ ಅವರನ್ನು ಕೈಬಿಡಬಹುದು.

ಗುರುವಾರ ನಡೆದ ಸರಣಿಯ ಮೊದಲ ಪಂದ್ಯದಲ್ಲಿ 49 ರನ್‌ಗಳನ್ನು ಬಿಟ್ಟುಕೊಟ್ಟಿದ್ದರು. ಶನಿವಾರದ ಪಂದ್ಯದಲ್ಲಿ ಅವರು ನಾಲ್ಕು ಓವರ್‌ಗಳಲ್ಲಿ 50 ರನ್ ನೀಡಿ 1 ವಿಕೆಟ್ ಪಡೆದರು. ಅರನ್ನು ಮೂರನೇ ಪಂದ್ಯದಿಂದ ಕೈಬಿಟ್ಟರೆ, ಮಯಾಂಕ್ ಯಾದವ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಬಹುದು.

ಎರಡನೇ ಟಿ20 ಪಂದ್ಯದಲ್ಲಿ ಪ್ರಿನ್ಸ್ ಯಾದವ್‌ಗೆ ಅವಕಾಶ ಮಾಡಿಕೊಟ್ಟ ಮಯಾಂಕ್, ಮೊದಲ ಪಂದ್ಯದಲ್ಲಿ ಆಡಿದ್ದರು ಮತ್ತು ನಾಲ್ಕು ಓವರ್‌ಗಳಲ್ಲಿ 40 ರನ್ ನೀಡಿ ಒಂದು ವಿಕೆಟ್ ಪಡೆದಿದ್ದರು.

ದೇವದತ್ತ ಪಡಿಕ್ಕಲ್ ಅಬ್ಬರದ ಬ್ಯಾಟಿಂಗ್‌ ಪ್ರದರ್ಶನ; ಸೋಲಿನ ಭೀತಿಯಿಂದ ಪಾರಾದ ಭಾರತ 'ಎ'

ಇಶಾನ್ ಕಿಶನ್ ಗಾಯದಿಂದ ಚೇತರಿಕೆ ಕಾಣದೆ ಮೂರನೇ ಪಂದ್ಯದಿಂದಲೂ ಹೊರಬಿದ್ಧ ಕಾರಣ ಸೂರ್ಯವಂಶಿಗೆ ಮತ್ತೊಂದು ಅವಕಾಶ ಸಿಗಲಿದೆ. ಎರಡನೇ ಟಿ20 ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದ ವೈಭವ್‌, 8 ಎಸೆತಗಳಲ್ಲಿ ಕೇವಲ 4 ರನ್‌ಗಳನ್ನು ಮಾತ್ರ ಗಳಿಸಲು ಶಕ್ತರಾಗಿದ್ದರು. ಇದೀಗ ಮೂರನೇ ಪಂದ್ಯದಲ್ಲಿ ಅವರ ಬ್ಯಾಟಿಂಗ್‌ ಮೇಲೆ ಹೆಚ್ಚಿನ ನಿರೀಕ್ಷೆ ಇರಿಸಲಾಗಿದೆ.

ಇಲ್ಲಿಯವರೆಗೆ ಆಡಿರುವ ಎರಡು ಪಂದ್ಯಗಳಲ್ಲಿ ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಶ್ರೇಯಸ್ ಅಯ್ಯರ್, ನಮನ್ ಧೀರ್ ಮತ್ತು ನಿತೀಶ್ ಕುಮಾರ್ ರೆಡ್ಡಿ ಅವರಂತಹ ಆಟಗಾರರು ಬ್ಯಾಟಿಂಗ್‌ನಲ್ಲಿ ಕನಿಷ್ಠ ಒಮ್ಮೆಯಾದರೂ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಹೀಗಾಗಿ, ಆಡುವ ಹನ್ನೊಂದರ ಬಳಗದಲ್ಲಿ (XI) ಅವರ ಸ್ಥಾನ ಖಚಿತವಾಗಿದೆ.

ಸ್ಪಿನ್-ಬೌಲಿಂಗ್ ಆಲ್‌ರೌಂಡರ್ ಅಕ್ಷರ್ ಪಟೇಲ್ ಅವರಿಗೆ ವಿಶ್ರಾಂತಿ ನೀಡಿ, ಅವರ ಬದಲಿಗೆ ಕುಲದೀಪ್ ಯಾದವ್ ಅಥವಾ ವರುಣ್ ಚಕ್ರವರ್ತಿ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದ್ದರೂ, ಹಾಗಾಗುವ ಸಂಭವ ಬಹಳ ಕಡಿಮೆ.

3ನೇ ಟಿ20ಗೆ ಭಾರತ ಸಂಭಾವ್ಯ ತಂಡ

ಸಂಜು ಸ್ಯಾಮ್ಸನ್ (ವಿ.ಕೀ.), ಅಭಿಷೇಕ್ ಶರ್ಮಾ, ವೈಭವ್‌ ಸೂರ್ಯವಂಶಿ, ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ನಮನ್ ಧೀರ್, ಅಕ್ಷರ್ ಪಟೇಲ್, ಪ್ರಿನ್ಸ್ ಯಾದವ್, ಅರ್ಷ್‌ದೀಪ್ ಸಿಂಗ್, ಮಯಾಂಕ್ ಯಾದವ್.