ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯಕ್ಕೆ ಭಾರತದ ಸಂಭಾವ್ಯ ಆಡುವ ಬಳಗ
India's likely playing XI 1st NZ T20I: ಗಾಯದ ಸಮಸ್ಯೆಯಿಂದಾಗಿ ಏಷ್ಯನ್ ಗೇಮ್ಸ್ ಮತ್ತು ವೆಸ್ಟ್ ಇಂಡೀಸ್ ಪ್ರವಾಸವನ್ನು ತಪ್ಪಿಸಿಕೊಂಡಿದ್ದ ವರುಣ್ ಚಕ್ರವರ್ತಿ, ನ್ಯೂಜಿಲೆಂಡ್ ವಿರುದ್ಧದ ಸರಣಿಗಾಗಿ ಭಾರತದ ಟಿ20 ಅಂತರರಾಷ್ಟ್ರೀಯ ತಂಡಕ್ಕೆ ಮರಳಿದ್ದಾರೆ.
India's likely playing XI -
ಆಕ್ಲೆಂಡ್, ಅ.20: ಸುಮಾರು ನಾಲ್ಕು ವರ್ಷಗಳ ನಂತರ ಭಾರತಕ್ಕಾಗಿ ತಮ್ಮ ಮೊದಲ ಟಿ20 ಅಂತಾರಾಷ್ಟ್ರೀಯ (T20I) ಪಂದ್ಯವನ್ನು ಆಡಿದ ಹಿರಿಯ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಅವರಿಗೆ, ಆ ಪಂದ್ಯದಲ್ಲಿ ಬೌಲಿಂಗ್ ಮಾಡುವ ಅವಕಾಶ ಸಿಗಲಿಲ್ಲ. ಆದರೆ, ಗುರುವಾರ (ಅಕ್ಟೋಬರ್ 22) ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಐದು ಪಂದ್ಯಗಳ ಸರಣಿಯ ಮೊದಲ ಟಿ20 ಪಂದ್ಯದಲ್ಲಿ, ಭಾರತದ ವೇಗದ ಬೌಲಿಂಗ್ ವಿಭಾಗವನ್ನು ಮುನ್ನಡೆಸಲು ಅವರು ಸಜ್ಜಾಗಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಸರಣಿಯ ಮೊದಲ ಪಂದ್ಯವು ಕ್ರೈಸ್ಟ್ಚರ್ಚ್ನ ಹ್ಯಾಗ್ಲಿ ಓವಲ್ನಲ್ಲಿ ನಡೆಯಲಿದೆ. ಐದು ಟಿ20 ಪಂದ್ಯಗಳ ಈ ಸರಣಿಯಿಂದ ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿರುವುದರಿಂದ, ಅವರ ಅನುಪಸ್ಥಿತಿಯಲ್ಲಿ ಭುವನೇಶ್ವರ್ ಕುಮಾರ್ ಅವರು ಭಾರತದ ವೇಗದ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ. ಇವರೊಂದಿಗೆ ಎಡಗೈ ವೇಗಿ ಅರ್ಷದೀಪ್ ಸಿಂಗ್ ಕೂಡ ಇರಲಿದ್ದಾರೆ.
ಮೂರನೇ ವೇಗದ ಬೌಲರ್ ಸ್ಥಾನಕ್ಕಾಗಿ ಪ್ರಿನ್ಸ್ ಯಾದವ್ ಮತ್ತು ಮಯಾಂಕ್ ಯಾದವ್ ನಡುವೆ ಪೈಪೋಟಿ ಇರಲಿದೆ. ಮೇಲ್ನೋಟಕ್ಕೆ ಮಯಾಂಕ್ ಯಾದವ್ ಆಯ್ಕೆಯಾಗುವ ಸಾಧ್ಯತೆಯೇ ಹೆಚ್ಚಿದೆ. ಶಿವಂ ದುಬೆ ಮತ್ತು ನಿತೀಶ್ ಕುಮಾರ್ ರೆಡ್ಡಿ ಮಧ್ಯೆ ಯಾರು ಸ್ಥಾನ ಪಡೆಯುತ್ತಾರೆಯೇ ಎಂಬುದು ಕುತೂಹಲಕಾರಿಯಾಗಿದೆ.
ಕಂಚಿನ ಪದಕ ಗೆದ್ದ ಹಿಮಾಂಶು, ಆರ್ಚರಿಯಲ್ಲಿ ಶೀತಲ್, ಪಾಯಲ್ ಫೈನಲ್ಗೆ
ಸ್ಪಿನ್-ಬೌಲಿಂಗ್ ಆಲ್ರೌಂಡರ್ಗಳಾದ ನಮನ್ ಧೀರ್ ಮತ್ತು ಅಕ್ಷರ್ ಪಟೇಲ್, ವೆಸ್ಟ್ ಇಂಡೀಸ್ ವಿರುದ್ಧ ತವರಿನಲ್ಲಿ ನಡೆದ ಐದೂ ಟಿ20 ಪಂದ್ಯಗಳಲ್ಲಿ ಆಡಿದ್ದರು. ಅವರ ಇತ್ತೀಚಿನ ಫಾರ್ಮ್ ಮತ್ತು ಬ್ಯಾಟಿಂಗ್ನಲ್ಲಿ ತಂಡಕ್ಕೆ ಕೊಡುಗೆ ನೀಡುವ ಸಾಮರ್ಥ್ಯವನ್ನು ಗಮನಿಸಿದರೆ, ನ್ಯೂಜಿಲೆಂಡ್ನಲ್ಲಿ ವೇಗದ ಬೌಲಿಂಗ್ಗೆ ಪೂರಕವಾದ ಪರಿಸ್ಥಿತಿಗಳಿದ್ದರೂ, ಅವರು ಆರಂಭಿಕ ಹನ್ನೊಂದರ ಬಳಗದಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ.
ಗಾಯದ ಸಮಸ್ಯೆಯಿಂದಾಗಿ ಏಷ್ಯನ್ ಗೇಮ್ಸ್ ಮತ್ತು ವೆಸ್ಟ್ ಇಂಡೀಸ್ ಪ್ರವಾಸವನ್ನು ತಪ್ಪಿಸಿಕೊಂಡಿದ್ದ ವರುಣ್ ಚಕ್ರವರ್ತಿ, ನ್ಯೂಜಿಲೆಂಡ್ ವಿರುದ್ಧದ ಸರಣಿಗಾಗಿ ಭಾರತದ ಟಿ20 ಅಂತರರಾಷ್ಟ್ರೀಯ ತಂಡಕ್ಕೆ ಮರಳಿದ್ದಾರೆ. ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ ಮತ್ತು ತಿಲಕ್ ವರ್ಮಾ ಅವರು ಆಡುವ ಹನ್ನೊಂದರ ಬಳಗದಲ್ಲಿರುವುದು ಖಚಿತವಾಗಿದ್ದು, ಕ್ರಮವಾಗಿ 3, 4 ಮತ್ತು 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. ಆರಂಭಿಕರಾಗಿ ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಶರ್ಮ ಮುಂದುವರಿಯುವುದು ಖಚಿತ. ಹೀಗಾಗಿ ವೈಭವ್ ಸೂರ್ಯವಂಶಿ ಈ ಸರಣಿಯಲ್ಲಿಯೂ ಕೆಲ ಪಂದ್ಯಗಳಲ್ಲಿ ಬೆಂಚ್ ಕಾಯಬೇಕಾದೀತು.
ಮೊದಲ ಟಿ20 ಪಂದ್ಯದಕ್ಕೆ ಭಾರತ ಸಂಭಾವ್ಯ ತಂಡ
ಸಂಜು ಸ್ಯಾಮ್ಸನ್ (ವಿ.ಕೀ.), ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ನಮನ್ ಧೀರ್, ಅಕ್ಸರ್ ಪಟೇಲ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಪ್ರಿನ್ಸ್ ಯಾದವ್, ವರುಣ್ ಚಕ್ರವರ್ತಿ.