ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

IPL 2025: ಐಪಿಎಲ್‌ ಅಭಿಮಾನಿಗಳಿಗೆ ಬಿಎಂಟಿಸಿಯಿಂದ ವಿಶೇಷ ಬಸ್‌ ಸೌಲಭ್ಯ

ವೈಟ್‌ಫೀಲ್ಡ್‌(ಕಾಡುಗೋಡಿ), ಚಲ್ಲಘಟ್ಟ, ರೇಷ್ಮೆಸಂಸ್ಥೆ ಮತ್ತು ಮಾದಾವರ ಟರ್ಮಿನಲ್‌ಗಳಿಂದ ಕೊನೆಯ ಮೆಟ್ರೊ ರೈಲು ಸೇವೆಯನ್ನು ರಾತ್ರಿ 12.30ರವರೆಗೆ ವಿಸ್ತರಿಸಲಾಗಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ನಾಲ್ಕು ದಿಕ್ಕುಗಳಿಂದ ಕೊನೆಯ ರೈಲು ಮಧ್ಯರಾತ್ರಿ 1.15 ಕ್ಕೆ ಹೊರಡಲಿದೆ ಎಂದು ಬಿಎಂಆರ್‌ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರು: ಇಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ(Chinnaswamy Stadium) ನಡೆಯಲಿರುವ ಹೈಲೋಲ್ಟೇಜ್‌ ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ಸ್(RCB vs GT) ನಡುವಣ ಪಂದ್ಯವನ್ನು ನೋಡಲು ತೆರಳುವವರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ವಿಶೇಷ ಬಸ್ ಸೇವೆ ಒದಗಿಸಿದೆ. ಜತೆಗೆ ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್‌) ಕೂಡ ಎಲ್ಲ ನಾಲ್ಕು ಮೆಟ್ರೊ ಟರ್ಮಿನಲ್‌ಗಳಿಂದ ಕೊನೆಯ ಮೆಟ್ರೊ ರೈಲು ಸೇವೆಯನ್ನು ರಾತ್ರಿ 12.30ರವರೆಗೆ ವಿಸ್ತರಿಸಿದೆ. ಈ ಸೇವೆಗಳು ನಗರದಲ್ಲಿ ಐಪಿಎಲ್‌ ಕ್ರಿಕೆಟ್‌ ಪಂದ್ಯಗಳು ನಡೆಯುವ ಎಲ್ಲ ದಿನಗಳಂದು ಇರಲಿದೆ.

​ಬಿಎಂಟಿಸಿ ವಿಶೇಷ ಬಸ್: ಎಲ್ಲಿಂದ ಎಲ್ಲಿಗೆ?

ಬಿಎಂಟಿಸಿ ಬಸ್‌ಗಳು ಎಂ.ಚಿನ್ನಸ್ವಾಮಿ ಕ್ರೀಡಾಂಗಣ­ದಿಂದ ಕಾಡುಗೋಡಿ ಬಸ್‌ ನಿಲ್ದಾಣ (ಎಚ್‌ಎಎಲ್‌), ಸರ್ಜಾ­ಪುರ (ಜಿ2) ಎಲೆಕ್ಟ್ರಾನಿಕ್‌ ಸಿಟಿ (ಜಿ3)(ಹೊಸೂರು ರಸ್ತೆ) ಬನ್ನೇರುಘಟ್ಟ ಮೃಗಾಲಯ (ಜಿ4), ಜನಪ್ರಿಯಟೌನ್‌ ಷಿಪ್‌ (ಜಿ7)(ಮಾಗಡಿರಸ್ತೆ), ಆರ್‌.ಕೆ.ಹೆಗಡೆ ನಗರ ಯಲಹಂಕ (ಜಿ10) (ನಾಗವಾರ ಟ್ಯಾನರಿ ರಸ್ತೆ) ಹೊಸಕೋಟೆ, ಬನಶಂಕರಿ (317 ಜಿ)(13) ಮಾರ್ಗಗಳಲ್ಲಿ ಪ್ರಯಾಣಿಬಹುದಾಗಿದೆ ಎಂದು ಬಿಎಂಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಮೆಟ್ರೋ ಸೇವೆ

ವೈಟ್‌ಫೀಲ್ಡ್‌(ಕಾಡುಗೋಡಿ), ಚಲ್ಲಘಟ್ಟ, ರೇಷ್ಮೆಸಂಸ್ಥೆ ಮತ್ತು ಮಾದಾವರ ಟರ್ಮಿನಲ್‌ಗಳಿಂದ ಕೊನೆಯ ಮೆಟ್ರೊ ರೈಲು ಸೇವೆಯನ್ನು ರಾತ್ರಿ 12.30ರವರೆಗೆ ವಿಸ್ತರಿಸಲಾಗಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ನಾಲ್ಕು ದಿಕ್ಕುಗಳಿಂದ ಕೊನೆಯ ರೈಲು ಮಧ್ಯರಾತ್ರಿ 1.15 ಕ್ಕೆ ಹೊರಡಲಿದೆ ಎಂದು ಬಿಎಂಆರ್‌ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ RCB vs GT: ಇಂದು ಆರ್‌ಸಿಬಿ-ಗುಜರಾತ್‌ ಪಂದ್ಯಕ್ಕೆ ಮಳೆ ಭೀತಿ ಇದೆಯೇ?

ಸಂಚಾರ ಮಾರ್ಗ ಬದಲು

ಕ್ರೀಡಾಂಗಣದ ಸುತ್ತಮುತ್ತ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ಮಧ್ಯಾಹ್ನ 3ರಿಂದ ರಾತ್ರಿ 12ರವರೆಗೆ ಈ ಮಾರ್ಪಾಡು ಇರಲಿದೆ.

ಕ್ರೀಡಾಂಗಣಕ್ಕೆ ಹೊಂದಿಕೊಂಡಿರುವ ಕಬ್ಬನ್ ರಸ್ತೆ, ಕ್ವೀನ್ಸ್ ರಸ್ತೆ, ಎಂ.ಜಿ. ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್, ಸೇಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಬಾ ರಸ್ತೆ, ವಿಧಾನಸೌಧ–ಹೈಕೋರ್ಟ್ ಎದುರಿನ ರಸ್ತೆ, ಟ್ರಿನಿಟಿ ರಸ್ತೆ, ಲ್ಯಾವೆಲ್ಲೆ ರಸ್ತೆ, ವಿಠ್ಠಲ್ ಮಲ್ಯ ರಸ್ತೆ, ನೃಪತುಂಗ ರಸ್ತೆಯಲ್ಲಿ ವಾಹನಗಳ ನಿಲುಗಡೆ ನಿರ್ಬಂಧಿಸಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಎಲ್ಲೆಲ್ಲಿ ಪಾರ್ಕಿಂಗ್​ಗೆ ಅವಕಾಶ?

ಪಂದ್ಯ ವೀಕ್ಷಿಸಲು ಕ್ರೀಡಾಂಗಣಕ್ಕೆ ಬರುವ ಜನರು, ತಮ್ಮ ವಾಹನಗಳನ್ನು ಸೇಂಟ್ ಜೋಸೆಫ್ ಇಂಡಿಯಾ ಸ್ಕೂಲ್ ಮೈದಾನ, ಯು.ಬಿ ಸಿಟಿ, ಶಾಂತಿನಗರ ಬಿಎಂಟಿಸಿ ಬಸ್‌ ನಿಲ್ದಾಣದ ಪಾರ್ಕಿಂಗ್ ಜಾಗ ಹಾಗೂ ಕಿಂಗ್ಸ್ ರಸ್ತೆಯಲ್ಲಿ ನಿಲ್ಲಿಸಬಹುದು. ಜನರು, ಮೆಟ್ರೊ ಹಾಗೂ ಬಸ್‌ ಬಳಸಬೇಕು ಎಂದು ಪೊಲೀಸರು ತಿಳಿಸಿದ್ದಾರೆ.