ಅಹಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ಮೂರನೇ ಟಿ20 ಅಂತರ್‌ರಾಷ್ಟ್ರೀಯ ಪಂದ್ಯ ಮಂಗಳವಾರ ನಡೆಯಲಿದೆ.
ಎರಡನೇ ಪಂದ್ಯದ ಗೆಲುವಿನ ನಂತರ ಟೀಮ್ ಇಂಡಿಯಾ ಆತ್ಮವಿಶ್ವಾಸದಲ್ಲಿದೆ. ಎರಡನೇ ಪಂದ್ಯದಲ್ಲಿ ಗೆಲುವು ದಾಖಲಿಸಿ 1-1 ಸಮಬಲ ಸಾಧಿಸಿದೆ. ಚೊಚ್ಚಲ ಪಂದ್ಯದಲ್ಲಿ 32 ಎಸೆತಗಳಲ್ಲಿ 56 ರನ್ ಗಳಿಸಿದ ಇಶಾನ್ ಕಿಶನ್ ತಂಡಕ್ಕೆ ಹೊಸ ಸೇರ್ಪಡೆ.
ಇವರು ನಾಯಕ ವಿರಾಟ್ ಕೊಹ್ಲಿ ಅವರೊಂದಿಗೆ 2ನೇ ವಿಕೆಟ್‌ಗೆ 9 ಓವರ್‌ಗಳಲ್ಲಿ 94 ರನ್‌ಗಳ ಜೊತೆಯಾಟ ನೀಡಿದ್ದರು. ಚೊಚ್ಚಲ ಪಂದ್ಯದಲ್ಲಿ ಅರ್ಧಶತಕ ದಾಖಲಿಸಿದ್ದರು. ಕೊಹ್ಲಿ ಔಟಾಗದೆ 73 ರನ್ ಗಳಿಸಿದ್ದರು. ನಾಲ್ಕನೇ ಸ್ಥಾನಕ್ಕೆ ಭಡ್ತಿ ಪಡೆದಿದ್ದ ರಿಷಭ್ ಪಂತ್ ಎರಡಂಕೆಯ ಕೊಡುಗೆ ನೀಡಿದ್ದರು. ಕಿಶನ್ ಮೂರನೇ ಪಂದ್ಯದಲ್ಲಿ ಅಂತಿಮ ಹನ್ನೊಂದರ ಬಳಗದಲ್ಲಿ ಅವಕಾಶ ಪಡೆಯುವ ಸಾಧ್ಯತೆ ಇದೆ. ರಾಹುಲ್ ಅವರು ರೋಹಿತ್‌ಗೆ ದಾರಿ ಮಾಡಿಕೊಡುವ ನಿರೀಕ್ಷೆಯಿದೆ.
ಇಂಗ್ಲೆಂಡ್‌ನ ವೇಗಿ ಮಾರ್ಕ್‌ವುಡ್ ಮುಂದಿನ ಪಂದ್ಯದಲ್ಲಿ ಮರಳಲಿದ್ದಾರೆ ಎಂದು ನಾಯಕ ಇಯಾನ್ ಮೊರ್ಗನ್ ದೃಢಪಡಿಸಿದ್ದಾರೆ.
ಭಾರತ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಕೆ.ಎಲ್. ರಾಹುಲ್, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಯಜುವೇಂದ್ರ ಚಹಾಲ್, ಭುವನೇಶ್ವರ್ ಕುಮಾರ್, ಆಕ್ಷರ್ ಪಟೇಲ್, ವಾಶಿಂಗ್ಟನ್ ಸುಂದರ್ ನವದೀಪ್ ಸೈನಿ, ದೀಪಕ್ ಚಹರ್, ರಾಹುಲ್ ತಿವಾಟಿಯಾ, ಇಶಾನ್ ಕಿಶನ್.
ಇಂಗ್ಲೆಂಡ್: ಇಯಾನ್ ಮೋರ್ಗನ್ (ನಾಯಕ), ಜಾಸ್ ಬಟ್ಲರ್, ಜೇಸನ್ ರಾಯ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲಾನ್, ಬೆನ್ ಸ್ಟೋಕ್ಸ್, ಮೊಯಿನ್ ಅಲಿ, ಆದಿಲ್ ರಶೀದ್, ರೀಸ್ ಟಾಪ್ಲೆ, ಕ್ರಿಸ್ ಜೋರ್ಡಾನ್, ಮಾರ್ಕ್ ವುಡ್, ಸ್ಯಾಮ್ ಕರ್ರನ್, ಟಾಮ್ ಕರ್ರನ್, ಸ್ಯಾಮ್ ಬಿಲ್ಲಿಂಗ್ಸ್, ಜಾನಿ ಬೈರ್‌ಸ್ಟೋವ್, ಜೋಫ್ರಾ ಆರ್ಚರ್.