ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ರಾಜ್ಯ ಮಿನಿ ಒಲಂಪಿಕ್ಸ್ ಜಿಲ್ಲೆಗೆ ಕಂಚಿನ ಪದಕ

ಬೆಂಗಳೂರಿನ ಕಂಠೀರವ ಕ್ರೀಡಾಂಗಣ ದಲ್ಲಿ ನಡೆದ ರಾಜ್ಯಮಟ್ಟದ ಮಿನಿ ಒಲಂಪಿಕ್ ಕ್ರೀಡಾ ಕೂಟದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಿಂದ ೧೦ ಕ್ರೀಡಾಪಟುಗಳು ಭಾಗವಹಿಸಿದ್ದು, ೧೪ ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಧೀರಜ್ ಭರ್ಜಿ ಎಸೆತದಲ್ಲಿ ಕಂಚಿನ ಪದಕ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಚಿಕ್ಕಬಳ್ಳಾಪುರ : ದಿನಾಂಕ ನ.೩ರಿಂದ ೦೬ರವರೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣ ದಲ್ಲಿ ನಡೆದ ರಾಜ್ಯಮಟ್ಟದ ಮಿನಿ ಒಲಂಪಿಕ್ ಕ್ರೀಡಾಕೂಟದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಿಂದ ೧೦ ಕ್ರೀಡಾಪಟುಗಳು ಭಾಗವಹಿಸಿದ್ದು, ೧೪ ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಧೀರಜ್ ಭರ್ಜಿ ಎಸೆತದಲ್ಲಿ ಕಂಚಿನ ಪದಕ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಇದನ್ನೂ ಓದಿ :Chikkamagaluru News: ಜಮೀನು ವಿವಾದ; ಕಾಂತಾರ ಸ್ಟೈಲ್‌ನಲ್ಲಿ ಪಂಜು ಹಿಡಿದು ಮಹಿಳೆ ಮೇಲೆ ಹಲ್ಲೆ ಮಾಡಿದ ವ್ಯಕ್ತಿ!

ಈ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಸುಮಾರು ೫ ಸಾವಿರ ಕ್ರೀಡಾಪಟುಗಳು ಭಾಗವಹಿಸಿದ್ದರು. ಪದಕ ಪಡೆದ ಕ್ರೀಡಾಪಟುಗಳಿಗೆ ಚಿಕ್ಕಬಳ್ಳಾಪುರ ಜಿಲ್ಲಾ ಅಥ್ಲೆಟಿಕ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಮಂಚನಬಲೆ ಶ್ರೀನಿವಾಸ್ ಹಾಗೂ ಕಂಠೀರವ ಕ್ರೀಡಾಂಗಣದ ರಾಷ್ಟ್ರೀಯ ಕ್ರೀಡಾಪಟುಗಳು ಹಾಗೂ ತರಬೇತಿದಾರ ರಾದ ಎಲ್.ಶಂಕರಪ್ಪರವರು ಪದಕ ಪ್ರಧಾನ ಮಾಡಿದರು.

ಪದಕ ಪಡೆದ ಕ್ರೀಡಾಪಟುವನ್ನು ಚಿಕ್ಕಬಳ್ಳಾಪುರ ಜಿಲ್ಲಾ ಅಥ್ಲೆಟಿಕ್ ಸಂಸ್ಥೆಯ ಅಧ್ಯಕ್ಷ ಡಾ. ಕೆ.ವಿ.ನವೀನ್‌ಕಿರಣ್ ಅವರು ಅಭಿನಂದಿಸಿದ್ದಾರೆ.