Friday, 13th December 2024

ಟೀಂ ಇಂಡಿಯಾಕ್ಕೆ ಬುಮ್ರಾಘಾತ

ಬ್ರಿಸ್ಬೇನ್: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಟೀಮ್ ಇಂಡಿಯಾದ ಪ್ರಮುಖ ವೇಗಿ ಅಂತಿಮ ಟೆಸ್ಟ್‌ನಿಂದ ಹೊರಗುಳಿಯ ಲಿದ್ದಾರೆ.

ಕಿಬ್ಬೊಟ್ಟೆ ಸ್ನಾಯು ಸೆಳೆತದಿಂದ ಬಳಲುತ್ತಿರುವ ಭಾರತದ ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ ಬ್ರಿಸ್ಬೇನ್‌ನಲ್ಲಿ ನಡೆಯಲಿರುವ 4ನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯುತ್ತಿದ್ದಾರೆ. ಭಾರತದ ಬೌಲಿಂಗ್ ಪಡೆಯ ಪ್ರಮುಖ ಅಸ್ತ್ರವಾಗಿರುವ ಬೂಮ್ರಾ ಅವರಿಗೆ ಸಿಡ್ನಿಯ ಟೆಸ್ಟ್ ಪಂದ್ಯದ ಸಂದರ್ಭ ತೀವ್ರ ನೋವು ಕಾಣಿಸಿಕೊಂಡಿತ್ತು. ಈಗಾಗಲೇ, ರವೀಂದ್ರ ಜಡೇಜಾ ಮತ್ತು ಹನುಮ ವಿಹಾರಿ ಸಹ 4ನೇ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಬೂಮ್ರಾ ಸಹ ಹೊರ ಗುಳಿಯುತ್ತಿರುವ ಭಾರತಕ್ಕೆ ನುಂಗಲಾರದ ತುತ್ತಾಗಿದೆ.

ಸ್ಕ್ಯಾನಿಂಗ್ ವೇಳೆ ಬೂಮ್ರಾಗೆ ಸ್ನಾಯು ಸೆಳೆತ ಸಮಸ್ಯೆ ಕಂಡುಬಂದಿದ್ದು, ಇಂಗ್ಲೆಂಡ್ ವಿರುದ್ಧದ 4 ಟೆಸ್ಟ್ ಪಂದ್ಯಗಳನ್ನು ದೃಷ್ಟಿ ಯಲ್ಲಿಟ್ಟುಕೊಂಡು ಬೂಮ್ರಾ ಗಾಯ ಉಲ್ಬಣಕ್ಕೆ ಅವಕಾಶ ನೀಡದೆ ವಿಶ್ರಾಂತಿ ನೀಡಲು ತಂಡದ ಆಡಳಿತ ಮಂಡಳಿ ನಿರ್ಧರಿಸಿದೆ.

ಹೆಚ್ಚು ಪ್ರಥಮ ದರ್ಜೆ ಕ್ರಿಕೆಟ್ ಅನುಭವವಿರುವ ಮತ್ತು ನಟರಾಜನ್ ಅವರಿಗಿಂತಲೂ ಉತ್ತಮ ಬ್ಯಾಟಿಂಗ್ ಕೌಶಲ್ಯವಿರುವ ಶಾರ್ದೂಲ್ ಠಾಕೂರ್ ಅವರನ್ನು ರವೀಂದ್ರ ಜಡೇಜಾ ಅವರ ಬದಲಿಗೆ ತಂಡಕ್ಕೆ ಸೇರಿಸಿಕೊಳ್ಳುವ ಸಾಧ್ಯತೆ ಇದೆ.